Cow Slaughter Case: ಚಿಕ್ಕಮಗಳೂರಿನಲ್ಲಿ ಗಬ್ಬದ ಹಸು ಕಡಿದು ವಿಕೃತಿ: ಅಸ್ಸಾಂ ಮೂಲದ ಆರು ಕೂಲಿ ಕಾರ್ಮಿಕರ ಬಂಧನ

Ravi Janekal   | Kannada Prabha
Published : Jul 11, 2025, 06:08 AM ISTUpdated : Jul 11, 2025, 11:00 AM IST
Chikkammagaluru crime

ಸಾರಾಂಶ

ಚಿಕ್ಕಮಗಳೂರು ಜಿಲ್ಲೆಯ ಎಸ್ಟೇಟ್‌ವೊಂದರಲ್ಲಿ ಗಬ್ಬದ ಹಸುವನ್ನು ಕಡಿದು ಮಾಂಸಕ್ಕಾಗಿ ಬಳಸಲು ಯತ್ನಿಸಿದ ಆರು ಅಸ್ಸಾಂ ಮೂಲದ ಕೂಲಿ ಕಾರ್ಮಿಕರನ್ನು ಬಂಧಿಸಲಾಗಿದೆ. ಹಸುವಿನ ಅಂಗಾಂಗಗಳನ್ನು ಮಣ್ಣಿನಲ್ಲಿ ಹೂಳಲು ಯತ್ನಿಸಿದ್ದರು.

ಚಿಕ್ಕಮಗಳೂರು (ಜುಲೈ.11): ರಾಜ್ಯದಲ್ಲಿ ಗೋವಿನ ಮೇಲೆ ವಿಕೃತಿ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಎಸ್ಟೇಟ್‌ವೊಂದರಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ಮಾಂಸಕ್ಕಾಗಿ ಗಬ್ಬದ ಹಸುವನ್ನು ಕಡಿದು ಅಂಗಾಂಗಗಳನ್ನು ಮಣ್ಣಿನಲ್ಲಿ ಹೂಳಲು ಯತ್ನಿಸಿದ್ದಾರೆ. ಕೃತ್ಯ ಎಸಗಿದ ಎಲ್ಲ 6 ಕೂಲಿ ಕಾರ್ಮಿಕರನ್ನು ಗುರುವಾರ ಬಂಧಿಸಲಾಗಿದೆ.

ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ನಿಡುವಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರ್ಕಲ್ ಎಸ್ಟೇಟ್‌ನಲ್ಲಿ ಘಟನೆ ನಡೆದಿದೆ. ಬಂಧಿತರನ್ನು ಅಸ್ಸಾಂ ಮೂಲದ ಕೂಲಿ ಕಾರ್ಮಿಕರಾದ ಅಜೀರ್‌ ಆಲೀ, ಅಕ್ಬರ್‌, ನಜ್ಮುಲ್ ಹಕ್, ಇಜಾಹುಲ್, ಮೋಜೆರ್ ಅಲಿ, ಮಂಜುಲ್ ಹಕ್ ಎಂದು ಗುರುತಿಸಲಾಗಿದೆ. ಈ ವೇಳೆ ಸುಮಾರು 45 ಕೆ.ಜಿ. ಹಸುವಿನ ಮಾಂಸ ವಶಪಡಿಸಿಕೊಳ್ಳಲಾಗಿದೆ.

ಬುಧವಾರ ಮಧ್ಯಾಹ್ನ ಹಸುವನ್ನು ಹತ್ಯೆ ಮಾಡಿ ಮಾಂಸ ಮಾಡಲಾಗಿದ್ದು, ಮಾಂಸ ಬಾಳೆ ಎಲೆ ಮೇಲೆ ಇರಿಸಿರುವುದು ಕಂಡು ಬಂದಿದೆ. ಹಸುವಿನ ಅಂಗಾಂಗಗಳನ್ನು ಮಣ್ಣಿನ ಅಡಿ ಹಾಕಲು ಗುಂಡಿ ತೋಡಲಾಗಿತ್ತು,

ತೋಟದ ರೈಟರ್‌ ಅಭಿಲಾಶ್ ಕೊಟ್ಟ ಮಾಹಿತಿ ಮೇರೆಗೆ ಬಾಳೂರು ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ ದಿಲೀಪ್‌ ಕುಮಾರ್‌ ಅವರು ಸ್ವಯಂ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 303(2) ಮತ್ತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ 2020ರ ಕಲಂ 12(1) ಅಡಿ ಬಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!