ಚಿಕ್ಕಮಗಳೂರು: ಬಿರುಗಾಳಿಗೆ ಹಾರಿಹೋದ ಶಾಲೆಯ ಛಾವಣಿ ಹೆಂಚುಗಳು; ಇಬ್ಬರು ಮಕ್ಕಳಿಗೆ ಗಾಯ, ತಪ್ಪಿದ ಭಾರೀ ಅನಾಹುತ!

Published : Feb 13, 2026, 12:15 PM IST
Chikkamagaluru School Tragedy Two Students Injured as Strong Winds Blow Off Roof Tiles

ಸಾರಾಂಶ

ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಗ್ರಾಮದ ಸರ್ಕಾರಿ ಶಾಲೆಯ ಮೇಲ್ಛಾವಣಿ ಭೀಕರ ಬಿರುಗಾಳಿಗೆ ಹಾರಿಹೋಗಿದೆ. ಊಟದ ಸಮಯದಲ್ಲಿ ಘಟನೆ ನಡೆದಿದ್ದರಿಂದ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರು (ಫೆ.13) ದಿಢೀರ್ ಕಾಣಿಸಿಕೊಂಡ ಭೀಕರ ಬಿರುಗಾಳಿಗೆ ಶಾಲೆಯೊಂದರ ಮೇಲ್ಛಾವಣಿ ಹಾರಿಹೋದ ಆಘಾತಕಾರಿ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ತಾಲೂಕಿನ ಬೆಳವಾಡಿ ಗ್ರಾಮದ ಸರ್ಕಾರಿ ಶಾಲೆಯ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಹೆಂಚುಗಳು ರಭಸವಾದ ಗಾಳಿಗೆ ಹಾರಿ ನೆಲಕ್ಕೆ ಬಿದ್ದು ಪುಡಿಪುಡಿಯಾಗಿವೆ.

ತಪ್ಪಿದ ಭಾರೀ ಅನಾಹುತ

ಅದೃಷ್ಟವಶಾತ್ ಈ ಘಟನೆ ನಡೆದಿದ್ದು ಮಧ್ಯಾಹ್ನ ಊಟದ ಸಮಯದಲ್ಲಿ. ಶಾಲಾ ಮಕ್ಕಳು ಕೊಠಡಿಯಿಂದ ಹೊರಬಂದು ಊಟಕ್ಕೆ ಕುಳಿತಿದ್ದರಿಂದ ಒಂದು ದೊಡ್ಡ ಮಟ್ಟದ ಪ್ರಾಣಾಪಾಯ ಕೂದಲೆಳೆ ಅಂತರದಲ್ಲಿ ತಪ್ಪಿದೆ. ಒಂದು ವೇಳೆ ತರಗತಿಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದ್ದರೆ ಭಾರೀ ಅಪಾಯ ಎದುರಾಗುತ್ತಿತ್ತು.

ಇಬ್ಬರು ಮಕ್ಕಳಿಗೆ ಗಾಯ

ಬಿರುಗಾಳಿಯ ರಭಸಕ್ಕೆ ಹೆಂಚುಗಳು ಹಾರಿ ಬಿದ್ದಿವೆ. ಈ ವೇಳೆ ಅಲ್ಲಿಯೇ ಇದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹೆಂಚುಗಳು ಬಿದ್ದು ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಮಕ್ಕಳಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಪೋಷಕರು ಮತ್ತು ಶಿಕ್ಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ಅಧಿಕಾರಿಗಳ ಭೇಟಿ, ಪರಿಶೀಲನೆ

ವಿಷಯ ತಿಳಿಯುತ್ತಿದ್ದಂತೆಯೇ ಬೆಳವಾಡಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿರುಗಾಳಿಯಿಂದಾಗಿ ಶಾಲಾ ಕಟ್ಟಡಕ್ಕೆ ಆಗಿರುವ ಹಾನಿಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಫುಟ್‌ಪಾತ್‌ನಲ್ಲಿ ಬಂದ ವ್ಯಕ್ತಿಗೆ ಸೆಟೆದು ನಿಂತು ಗ್ರಹಚಾರ ಬಿಡಿಸಿದ ಅಜ್ಜಿ; ಭೇಷ್‌ ಎಂದ ನಟಿ ಸುಹಾಸಿನಿ!
Karnataka news live:ಹಲವು ಕುಟುಂಬಗಳ ಕನಸು ಕಸಿದ ಹೊಸಕೋಟೆ ಅಪಘಾತ