ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಮೆರವಣಿಗೆ ಮೇಲೆ ಕಾರು ಚಾಲನೆ: 7 ವರ್ಷದ ಸಾನ್ವಿ ಸಾವು ಹಲವರಿಗೆ ಗಾಯ

Published : Apr 15, 2026, 11:37 AM IST
girl died after drunk and drive tragedy

ಸಾರಾಂಶ

ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕುಡಿದ ಅಮಲಿನಲ್ಲಿದ್ದ ಚಾಲಕನೊಬ್ಬ ಕಾರು ಹರಿಸಿದ್ದಾನೆ. ಈ ದುರ್ಘಟನೆಯಲ್ಲಿ 7 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್

ಚಿಕ್ಕಮಗಳೂರು ಅಂಬೇಡ್ಕರ್ ಜಯಂತಿ ವೇಳೆ ದುರಂತ

ಚಿಕ್ಕಮಗಳೂರು : ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ಕಾರು ಹರಿಸಿದ ಪರಿಣಾಮ 7 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನ 7 ವರ್ಷದ ಸಾನ್ವಿ ಎಂದು ಗುರುತಿಸಲಾಗಿದೆ. ಗಾಯಾಳುಗಳಾದ 11 ವರ್ಷದ ನಿಶ್ಚಿತ್, ತೃಪ್ತಿ, ತಿಮ್ಮರಾಜು, ಉಷಾ, ಚೇತನ್, ಸೃಷ್ಠಿ ಹಾಗೂ ನಾಗರಾಜ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ.

7 ವರ್ಷದ ಬಾಲಕಿ ಬಲಿ: ಹಲವರಿಗೆ ಗಾಯ :

ಅಪಘಾತ ಸಂಭವಿಸುತ್ತಿದ್ದಂತೆಯೇ ರೊಚ್ಚಿಗೆದ್ದ ಸ್ಥಳೀಯರು ಕಾರು ಚಾಲಕ ಸುಧಾಕರ್‌ನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದು, ಕಾರಿನ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಇದೇ ವೇಳೆ, ಕಾರಿನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯ ಬಳಿಕ ಗಾಯಾಳುಗಳನ್ನು ಹಾಗೂ ಚಾಲಕನನ್ನು ಜಿಲ್ಲಾಸ್ಪತ್ರೆಗೆ ಕರೆತರಲಾಗಿದ್ದು, ಅಲ್ಲಿ ಆಕ್ರೋಶಿತ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ವಾತಾವರಣ ಪ್ರಕ್ಷುಬ್ಧಗೊಂಡಿತ್ತು.

ರೊಚ್ಚಿಗೆದ್ದ ಗ್ರಾಮಸ್ಥರಿಂದ ಚಾಲಕನಿಗೆ ಧರ್ಮದೇಟು

ಚಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲು ಪೊಲೀಸರು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿದ ಗ್ರಾಮಸ್ಥರು, ಗಾಯಾಳುಗಳ ಕಡೆ ಗಮನ ಹರಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಸುಮಾರು 50ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಎಎಸ್ಪಿ ಜಯಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತ ಬಾಲಕಿಯ ಪೋಷಕರನ್ನು ಸಮಾಧಾನಿಸಲು ಯತ್ನಿಸಿದ್ದಾರೆ. ಜನರನ್ನು ಸಮಾಧಾನಪಡಿಸಲು ಪ್ರಯತ್ನಿಸಿದ ಎಎಸ್‌ಪಿ ಕೈ ಮುಗಿಯುತ್ತೇನೆ ಹೋಗಿ ಎಂದು ಸಮಾಧಾನ ಮಾಡಿ ಕಳಿಸಿದರು. ಸದ್ಯ ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಧಾರವಾಡದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಮನೆಗೆ ಕಲ್ಲೆಸೆದು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಧಾರವಾಡದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಮನೆಗೆ ಕಲ್ಲೆಸೆದು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ
ಫೋನ್ ಇಲ್ಲ, ಎಟಿಎಂ ಬಳಸುತ್ತಿಲ್ಲ: 100ಕ್ಕೂ ಹೆಚ್ಚು ನಗರಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ತನಿಷ್ಕಾ-ತೇಜಸ್ವಿನಿ