ಮಹಿಳೆಯರಿಗೆ ಇರುವ ಶಿಶುಪಾಲನಾ ರಜೆ ಸೌಲಭ್ಯವನ್ನು ಒಂಟಿ ಪೋಷಕರಾಗಿರುವ ರಾಜ್ಯ ಸರ್ಕಾರಿ ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯ ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ.
ಬೆಂಗಳೂರು (ಜೂ.10): ಮಹಿಳೆಯರಿಗೆ ಇರುವ ಶಿಶುಪಾಲನಾ ರಜೆ ಸೌಲಭ್ಯವನ್ನು ಒಂಟಿ ಪೋಷಕರಾಗಿರುವ ರಾಜ್ಯ ಸರ್ಕಾರಿ ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯ ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ. ಒಂಟಿ ಪೋಷಕರಾಗಿರುವ ಅವಿವಾಹಿತ/ವಿಚ್ಛೇದಿತ/ವಿಧುರ ಪುರುಷ ರಾಜ್ಯ ಸರ್ಕಾರಿ ನೌಕರರಿಗೂ ಆರು ತಿಂಗಳ ಅವಧಿಗೆ (180 ದಿನಗಳು) ಶಿಶುಪಾಲನಾ ರಜೆ ಸೌಲಭ್ಯವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಮಂಜೂರು ಮಾಡಿದೆ. 2021ರಲ್ಲಿ ಸರ್ಕಾರಿ ಆದೇಶದಲ್ಲಿ ವಿಧಿಸಲಾಗಿರುವ ಷರತ್ತುಗಳನ್ವಯ ಶಿಶುಪಾಲನಾ ರಜೆಯನ್ನು ಮಂಜೂರು ಮಾಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಶಿಶುಪಾಲನಾ ರಜೆಯನ್ನು ಪಡೆದ ಅವಧಿಯಲ್ಲಿ ಸಂಬಂಧಿತ ಪುರುಷ ನೌಕರರು ವಿವಾಹ ಮಾಡಿಕೊಂಡರೆ ಆ ದಿನಾಂಕದಿಂದ ಶಿಶುಪಾಲನಾ ರಜೆ ತಾನಾಗಿಯೇ ರದ್ದಾಗಲಿದೆ. ಒಂಟಿ ಪೋಷಕರಾಗಿರುವ ಅವಿವಾಹಿತ/ವಿವಾಹ ವಿಚ್ಛೇದಿತ/ವಿಧುರ ಪುರುಷ ರಾಜ್ಯ ಸರ್ಕಾರಿ ನೌಕರರಿಗೂ ಮಕ್ಕಳ ಆರೈಕೆಗಾಗಿ ಶಿಶುಪಾಲನಾ ರಜೆಯ ಅವಶ್ಯಕತೆ ಇದೆ ಎಂದು ಪ್ರಸ್ತಾವನೆಗಳು ಸ್ವೀಕೃತವಾಗಿದ್ದವು. ಈ ಹಿನ್ನೆಲೆಯಲ್ಲಿ ಶಿಶುಪಾಲನಾ ರಜೆ ಸೌಲಭ್ಯ ಒದಗಿಸಿ ಆದೇಶಿಸಲಾಗಿದೆ.
108 ಆಂಬ್ಯುಲೆನ್ಸ್, ಡಯಾಲಿಸಿಸ್ ಕೇಂದ್ರ ಗುತ್ತಿಗೆ ರದ್ದು: ಸಚಿವ ದಿನೇಶ್ ಗುಂಡೂರಾವ್
ಕೆಕೆಆರ್‌ಡಿಬಿ ಅಕ್ರಮ ತನಿಖೆಗೆ ತಂಡ ರಚನೆ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಕ್ರಮಗಳ ತನಿಖೆಗೆ ಅಧಿಕಾರಿಗಳ ತಂಡ ರಚನೆಯಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಕ್ರಮಗಳ ತನಿಖೆಗೆ ಅಧಿಕಾರಿಗಳ ತಂಡ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಬಿಡುಗಡೆ ಮಾಡಿ ವೆಚ್ಚ ಮಾಡಿರುವ ರೂ 3000 ಕೋಟಿಗಳ ಅನುದಾನದಲ್ಲಿ ನಡೆದಿರುವ ವ್ಯಾಪಕ ಅಕ್ರಮಗಳು, ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಗಾಗಿ ಬಿಡುಗಡೆ ಮಾಡಿ ವೆಚ್ಚ ಮಾಡಲಾಗಿರುವ ರೂ 3.50 ಕೋಟಿ ಅನುದಾನವನ್ನು ಕೆ.ಟಿ.ಪಿ.ಪಿ. ಕಾಯ್ದೆಯಡಿ ಪ್ರಕ್ರಿಯೆ ನಡೆಸದೆ ಹೆಚ್ಚುವರಿಯಾಗಿ ರೂ 50 ಲಕ್ಷ ವೆಚ್ಚ ಮಾಡುವಲ್ಲಿ ನಡೆದ ಅಕ್ರಮ ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘಕ್ಕೆ ಬಿಡುಗಡೆ ಮಾಡಿ ವೆಚ್ಚ ಮಾಡಿರುವ ರೂ 300 ಕೋಟಿ ಅನುದಾನದಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ದೂರುಗಳು
ಆ.1ರಿಂದ ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಸಚಿವ ಜಮೀರ್ ಜನತಾ ದರ್ಶನ
ಬಂದ ಹಿನ್ನೆಲೆಯಲ್ಲಿ ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತನಿಖೆ ನಡೆಸುವಂತೆ ಕೋರಿದ್ದರು. ಸಚಿವರ ಪತ್ರಕ್ಕೆ ಸ್ಪಂದಿಸಿದ ಸಿಎಂ ಅಕ್ರಮಗಳ ಕುರಿತು ಗಂಭೀರವಾಗಿ ಪರಿಗಣಿಸಿ ಇಲಾಖಾ ತನಿಖೆ ನಡೆಸಿ 15ದಿನಗಳ ಒಳಗಾಗಿ ತಪ್ಪಿತಸ್ಥರ ವಿವರಗಳೊಂದಿಗೆ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು.