
ರಾಯಚೂರು (ಸೆ.15): ರಾಯಚೂರು ಜಿಲ್ಲೆಯ ಕವಿತಾಳದ ಚಿಂಚರಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಒಂದು ವಾರದಿಂದ ಬಿಸಿಯೂಟ ವಿತರಣೆ ಸ್ಥಗಿತಗೊಂಡಿದ್ದು, 189 ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.
ಆಹಾರ ಸಾಮಗ್ರಿಗಳ ಕೊರತೆಯಿಂದ ಈ ಸಮಸ್ಯೆ ಉಂಟಾಗಿದ್ದು, ಸ್ಥಳೀಯ ಮಕ್ಕಳು ಮಧ್ಯಾಹ್ನಕ್ಕೆ ಮನೆಗೆ ಹೋಗಿ ಊಟ ಮಾಡಿ ಬರುತ್ತಾರೆ. ಆದರೆ ದೂರದ ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಮಧ್ಯಾಹ್ನಕ್ಕೆ ಊಟವಿಲ್ಲದೆ ಉಪವಾಸ ಮಕ್ಕಳ ಸ್ಥಿತಿಗೆ ಶಿಕ್ಷಕರು ಸಹ ಅಸಹಾಯಕರಾಗಿದ್ದಾರೆ.
ಆಹಾರ ಸಾಮಗ್ರಿ ನೀಡದ ಅಧಿಕಾರಿಗಳು:
ಎಸ್‌ಡಿಎಂಸಿ ಅಧ್ಯಕ್ಷ ಮುದೆಪ್ಪ ಅವರು, ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ. ಶಾಲೆಯಲ್ಲಿ ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಸಾಮಗ್ರಿಗಳು ಮುಗಿದಿದ್ದು, ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮುಖ್ಯ ಶಿಕ್ಷಕಿ ಜುಬಿದ ಬೇಗಂ ಹೇಳಿದ್ದಾರೆ. ಈ ಘಟನೆಯಿಂದ ವಿದ್ಯಾರ್ಥಿಗಳ ಆರೋಗ್ಯ ಮತ್ತು ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಒತ್ತಾಯಿಸಿದ್ದಾರೆ.
ಸರಕಾರದ ಬಿಸಿಯೂಟ ಯೋಜನೆಯ ಉದ್ದೇಶವೇ ಗುಣಮಟ್ಟದ ಆಹಾರದೊಂದಿಗೆ ಶಿಕ್ಷಣವನ್ನು ಉತ್ತೇಜಿಸುವುದಾದರೂ, ಈ ಕೊರತೆಯಿಂದ ಆ ಗುರಿ ಸಾಕಾರಗೊಳ್ಳದಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ