
ಹನೂರು : ತಮ್ಮ ಗ್ರಾಮದಲ್ಲಿನ ನೀರಿನ ತೀವ್ರ ಸಮಸ್ಯೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಮಕ್ಕಳ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ರಾಜ್ಯ ಬಜೆಟ್‌ನಲ್ಲಿ ಅನುದಾನ ಘೋಷಿಸಿದ್ದಕ್ಕೆ ಮಕ್ಕಳು ಸಂತಸ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಸಿದ್ದರಾಮಯ್ಯ ಅವರು ಮಂಡಿಸಿದ 17ನೇ ರಾಜ್ಯ ಬಜೆಟ್‌ನಲ್ಲಿ ಹನೂರು ಭಾಗದ ನೀರಾವರಿ ಅಭಿವೃದ್ಧಿಗೆ ₹490 ಕೋಟಿ ಅನುದಾನ ಘೋಷಿಸಲಾಗಿದೆ. ಈ ಹಿಂದೆ ಕೆಂಪಯ್ಯನಹಟ್ಟಿ ಗ್ರಾಮದ ಮಕ್ಕಳು, ತಮ್ಮೂರಿನ ನೀರಿನ ಸಮಸ್ಯೆಯನ್ನು ವಿವರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ‘ನಮ್ಮ ಊರಿನಲ್ಲಿ ನೀರೇ ಇಲ್ಲ. ಸಾವಿರ ಅಡಿ ಕೊಳವೆಬಾವಿ ಕೊರೆದರೂ ನೀರು ಬರುತ್ತಿಲ್ಲ’ ಎಂದು ಪತ್ರದಲ್ಲಿ ಮಕ್ಕಳು ಸಿಎಂ ಗಮನ ಸೆಳೆದಿದ್ದರು.
ನದಿ ಮೂಲದಿಂದ ಕೆರೆ - ಕಟ್ಟೆಗಳನ್ನು ತುಂಬಿಸುವ ಯೋಜನೆ ಜಾರಿಗೆ ತರಬೇಕೆಂದು ಮುಖ್ಯಮಂತ್ರಿಗೆ ಮನವಿ ಮಾಡಿದ್ದರು. ಇದೀಗ ರಾಜ್ಯ ಬಜೆಟ್‌ನಲ್ಲಿ ಕಾವೇರಿ ನದಿಯಿಂದ ಕೆರೆ-ಕಟ್ಟೆಗಳನ್ನು ತುಂಬಿಸುವ ‘ಉಡುತೊರೆಹಳ್ಳ ನೀರಾವರಿ ಯೋಜನೆ’ಗೆ ₹490 ಕೋಟಿ ಅನುದಾನ ಘೋಷಿಸಲಾಗಿದೆ. ಇದರಿಂದ ಮಕ್ಕಳು ಸಂತಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ