
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನರು ಪ್ರಾಣ ಕಳೆದುಕೊಂಡ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ರಾಜ್ಯ ಸರ್ಕಾರ, ರಾಜ್ಯ ಪೊಲೀಸ್ ಇಲಾಖೆಯ ವೊಎಉದ್ಧವೂ ಹಲವು ಗಂಭೀರ ಪ್ರಶ್ನೆಗಳು ಕೇಳಿಬಂದಿತ್ತು. ಈ ಪ್ರಕರಣದ ತನಿಖೆಯನ್ನು ಕೈಗೊಂಡಿದ್ದ ಸಿಐಡಿ ಇದೀಗ ಮಹತ್ವದ ಹಂತ ತಲುಪಿ, 2,200ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಅನ್ನು ಸಿದ್ಧಪಡಿಸಿದೆ. ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಸಿಐಡಿ ಚಾರ್ಜ್ ಶೀಟ್ ಸಲ್ಲಿಕೆಗೆ ಸಜ್ಜಾಗಿದೆ. ಮಾತ್ರವಲ್ಲ 11 ಜನರ ಸಾವಿಗೆ ಆರ್‌ಸಿಬಿ ಯೇ ನೇರ ಹೊಣೆ ಎಂದು ಉಲ್ಲೇಖಿಸಿದೆ.
ತನಿಖೆಯ ವೇಳೆ ಸಂಗ್ರಹಿಸಲಾದ ಸಾಕ್ಷ್ಯಾಧಾರಗಳು, ನೂರಾರು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ, ಸಿಸಿಟಿವಿ ದೃಶ್ಯಾವಳಿಗಳು, ಗಾಯಾಳುಗಳ ವಿವರಣೆ ಹಾಗೂ ಪೊಲೀಸ್ ಇಲಾಖೆ ನೀಡಿದ ಮಾಹಿತಿ ಎಲ್ಲವೂ ಸೇರಿ ಒಟ್ಟು ಮೂರು ಸಂಸ್ಥೆಗಳಾದ RCB, KSCA ಮತ್ತು DNA ಘಟನೆಯ ನೇರ ಹೊಣೆಗಾರರು ಎಂದು ಸ್ಪಷ್ಟಪಡಿಸಿದೆ.
ತನಿಖಾ ತಂಡವು ಘಟನೆ ನಡೆದ ದಿನದ ಸ್ಟೇಡಿಯಂನ ಪ್ರತಿಯೊಂದು ಗೇಟ್‌ನಲ್ಲಿದ್ದ, ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದೆ. ಗೇಟ್‌ಗಳಲ್ಲಿದ್ದ ಸೆಕ್ಯುರಿಟಿ ಸಿಬ್ಬಂದಿಗಳ ಹೇಳಿಕೆ ಪಡೆದಿದೆ. ಡ್ಯೂಟಿಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳ ವಿವರ ಪಡೆದಿದೆ. ಕಾಲ್ತುಳಿತದಲ್ಲಿ ಗಾಯಗೊಂಡವರ ಹಾಗೂ ಗಾಯಾಳುಗಳನ್ನು ಸಾಗಿಸಿದವರ ಹೇಳಿಕೆಗಳನ್ನೂ ದಾಖಲಿಸಿದೆ. ಈ ಸಮಗ್ರ ತನಿಖೆಯ ಆಧಾರದ ಮೇಲೆ, ಮೂರು ಸಂಸ್ಥೆಗಳು ಸಾವಿಗೆ ನೇರ ಹೊಣೆ ಈ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ ಎಂಬುದು ಚಾರ್ಜ್ ಶೀಟ್ ಹೇಳುತ್ತದೆ.
ತನಿಖೆಯ ಎಲ್ಲಾ ಅಂಶಗಳನ್ನು ಪರಿಗಣಿಸಿರುವ ಸಿಐಡಿ, ತನ್ನ ಚಾರ್ಜ್ ಶೀಟ್‌ನಲ್ಲಿ, RCB, KSCA (ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್), DNA ಇವರೆಲ್ಲರೂ ಒಟ್ಟಾಗಿ ಕಾರ್ಯಕ್ರಮವನ್ನು ಜವಾಬ್ದಾರಿಯಿಲ್ಲದೇ ಆಯೋಜಿಸಿದ್ದು, ಪರಿಣಾಮವಾಗಿ 11 ಜನರು ಪ್ರಾಣ ಕಳೆದುಕೊಳ್ಳುವ ಘಟನೆ ನಡೆದಿದೆ ಎಂದು ನೇರವಾಗಿ ಉಲ್ಲೇಖಿಸಿದೆ.
ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸುವ ಕೆಲಸ ಅಂತಿಮ ಹಂತದಲ್ಲಿದ್ದು, ಇದಾದ ಬಳಿಕ ಪ್ರಕರಣದ ನ್ಯಾಯಾಂಗ ಪ್ರಕ್ರಿಯೆ ವೇಗ ಪಡೆಯಲಿದೆ. ದುರಂತಕ್ಕೆ ಕಾರಣವಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಈ ಚಾರ್ಜ್ ಶೀಟ್ ಪ್ರಮುಖ ದಾಖಲೆ ಆಗಲಿದೆ. ಈ ದುರಂತದ ಬಳಿಕ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಹಲವು ಉನ್ನರ ಅಧಿಕಾರಿಗಳನ್ನು ವಜಾ ಮಾಡಿತ್ತು. ಸರ್ಕಾರದ ನಡೆ ವಿವಾದಕ್ಕೆ ಕಾರಣವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ