
ಬೆಂಗಳೂರು (ಜೂ.09): ರಾಜ್ಯ ಸರ್ಕಾರದಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ನಡೆದ ಕಾಲ್ತುಳಿತ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗಿಲ್ಲ. ಆದರೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಿಂದ (ಕೆಎಸ್‌ಸಿಎ) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳತ ಸಂಭವಿಸಿ 11 ಸಾವು ಆಗಿದೆ. ಆದರೂ, ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಕೆ ಮಾಡಲಾಗಿದ್ದು, ಅವರ ವಿರುದ್ಧ ಕಾನೂನು ಹೋರಾಟದಲ್ಲಿ ಸರ್ಕಾರಕ್ಕೆ ಹಿನ್ನಡೆಯಾಗದಂತೆ ಕ್ರಮವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆಯನ್ನು ನಡೆಸಿದ್ದಾರೆ. ಈ ವೇಳೆ ಕೆಎಸ್‌ಸಿಎ ಹಾಗೂ ಆರ್‌ಸಿಬಿ ಸಿಬ್ಬಂದಿ ಕೋರ್ಟ್ ಮೆಟ್ಟಿಲೇರಿದ್ದು, ಸರ್ಕಾರದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಯಾವುದೇ ಕಾರಣಕ್ಕೂ ಕಾನೂನು ಹೋರಾಟದಲ್ಲಿ ತೊಂದರೆ ಆಗಬಾರದು. ವಿಧಾನಸೌಧ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದ ವೇಳೆ ಯಾವುದೇ ಲೋಪವಾಗಿಲ್ಲ. ಕೆಎಸ್ ಸಿಎ ನಡೆಸಿದ ಕಾರ್ಯಕ್ರಮದ ವೇಳೆ ಕಾಲ್ತುಳಿತವಾಗಿದೆ. ಕಾನೂನಾತ್ಮಕ ಹೋರಾಟಕ್ಕೆ ಪ್ರತಿಪಕ್ಷಗಳು ಸಿದ್ಧವಾಗಿರುವ ಹಿನ್ನೆಲೆಯಲ್ಲಿ ಕಾನೂನು ಹೋರಾಟವನ್ನು ಸಮರ್ಪಕವಾಗಿ ಮುನ್ನಡೆಸಬೇಕು. ಯಾವುದೇ ಕಾರಣಕ್ಕೂ ಸರ್ಕಾರದ ಗೌರವಕ್ಕೆ ಧಕ್ಕೆ ಆಗದಂತೆ ಪ್ರಕರಣವನ್ನು ಹಿರಿಯ ಸಿಬ್ಬಂದಿ ನಿಭಾಯಿಸಬೇಕು ಎಂದು ತೀರ್ಮಾನ ಮಾಡಲಾಗಿದೆ.
ಇನ್ನು ಕಾಲ್ತುಳಿತದ ಘಟನೆ ಬಗ್ಗೆ ಪ್ರತಿಪಕ್ಷಗಳು ನಡೆಸಬಹುದಾದ ಮುಂದಿನ ಹೋರಾಟವನ್ನು ಕೂಡ ಎದುರಿಸಲು ಸರ್ಕಾರದಿಂದ ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ ಸಾರ್ವಜನಿಕ ವಲಯದಲ್ಲಿನ ಅಭಿಪ್ರಾಯಗಳಿಗೆ ಸೂಕ್ತ ಸ್ಪಷ್ಟನೆ ನೀಡಲು ಸನ್ನದ್ಧವಾಗಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದ್ದಾರೆ. ಜೊತೆಗೆ, ಹಿರಿಯ ಅಧಿಕಾರಿಗಳ ಮಟ್ಟದಲ್ಲಿ ನಡೆದ ಪತ್ರ ವ್ಯವಹಾರಗಳು ಬಹಿರಂಗವಾದ ಬಗ್ಗೆ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ ಪಂದ್ಯಾವಳಿ ಟ್ರೋಫಿ ಗೆದ್ದ ಬಳಿಕ ವಿಜಯೋತ್ಸವ ಆಚರಣೆಗೆ ಕೆಎಸ್‌ಸಿಎ ಮತ್ತು ಆರ್‌ಸಿಬಿ ಅನುಮತಿ ಕೇಳಿದ ನಂತರ ಸರ್ಕಾರದ ಮಟ್ಟದಲ್ಲಿ ನಡೆದ ಪತ್ರ ವ್ಯವಹಾರಗಳು ಬಹಿರಂಗವಾಗಿದೆ. ಈ ಪತ್ರಗಳನ್ನ ಉಲ್ಲೇಖಿಸಿ ಪ್ರತಿ ಪಕ್ಷಗಳು ಹೋರಾಟ ನಡೆಸಿದ್ದು, ಯಾರಿಂದ ಸೇರಿಕೆ ಆಗಿದೆ ಎಂಬುದರ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವರಣೆ ಕೇಳಿದ್ದಾರೆ. ಜೊತೆಗೆ, ಸರ್ಕಾರದ ಪತ್ರ ವ್ಯವಹಾರಗಳು ಬಹಿರಂಗವಾದ ಬಗ್ಗೆ ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದ್ದಾರೆ.
ಸರ್ಕಾರದ ನಿರ್ಧಾರಗಳು:
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ