ವಿದ್ಯಾರ್ಥಿಗಳಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾ ಶ್ರೀಗಳ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ ಆರಂಭವಾಗಿದೆ.
ಚಿತ್ರದುರ್ಗ, (ಸೆಪ್ಟೆಂಬರ್.19): ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಆರೋಪಿ ಮುರುಘಾ ಮಠದ ಡಾ.ಶಿವಮೂರ್ತಿ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮತ್ತೆ ಮುಂದೂಡಿದೆ.
ಇಂದು(ಸೆಪ್ಟೆಂಬರ್.19) ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿದ ಚಿತ್ರದುರ್ಗ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶಿಸಿದೆ. ಈಗಾಗಲೇ ಮುರುಘಾ ಶ್ರೀಗಳ ಪರ ವಕೀಲರ ವಾದ ಮುಗಿದಿದ್ದು, ಇದೀಗ ಸರ್ಕಾರಿ ವಕೀಲ ವಾದ ನಡೆಯಲಿದೆ.
undefined
ಈ ಹಿನ್ನೆಲೆಯಲ್ಲಿ ಕಳೆದ ವಾರಗಳಿಂದಲೂ ಮುರುಘಾ ಶ್ರೀಗಳ ಜಾಮೀಜು ಅರ್ಜಿ ವಿಚಾರಣೆ ಕೋರ್ಟ್ ಮುಂದೂಡುತ್ತಲೇ ಇದೆ. ಆದ್ರೆ, ಇಂದು ಜಾಮೀನು ಅರ್ಜಿ ಬಗ್ಗೆ ಅಂತಿಮ ಆದೇಶ ನೀಡುವ ಎಲ್ಲಾ ಸಾಧ್ಯತೆಗಳಿವೆ. ಈ ಹಿನ್ನೆಯಲ್ಲಿ ಮುರುಘಾಶ್ರೀಗೆ ಬೇಲಾ? ಜೈಲಾ? ಭವಿಷ್ಯ ನಿರ್ಧಾರವಾಗಲಿದ್ದು, ಎಲ್ಲರ ಚಿತ್ತ ಇದೀಗ ಕೋರ್ಟ್‌ನತ್ತೆ ನೆಟ್ಟಿದೆ.
ಮುರುಘಾ ಶ್ರೀ ಪ್ರಕರಣದಲ್ಲಿ ಬಿಜೆಪಿ ಶಾಸಕ ಎಂಟ್ರಿ, ಹೈಕೋರ್ಟ್ ಜಡ್ಜ್‌ಗೆ ಪತ್ರ ಬರೆದ ಯತ್ನಾಳ್!
ಮಠದ ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಇದರಲ್ಲಿ ಶ್ರೀಗಳು ಎ1 ಆರೋಪಿಯಾಗಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ನಿರೀಕ್ಷಣ ಜಾಮೀನು ಕೋರಿ ಅರ್ಜಿಯನ್ನೂ ಸಲ್ಲಿಸಿದ್ದರು.
ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗೆ ಪತ್ರ ಯತ್ನಾಳ್ ಪತ್ರ
ಚಿತ್ರದುರ್ಗದ ಮುರುಘಾ ಮಠದ ಶರಣರು ಲೈಂಗಿಕ ಕಿರುಕುಳ ಆರೋಪದ ಮೇಲೆ ಜೈಲುಪಾಲಾಗಿದ್ದಾರೆ. ಈ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದೆ. ಇನ್ನ ಈ ಕೇಸ್‌ನಲ್ಲಿ ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಂಟ್ರಿ ಕೊಟ್ಟಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗೆ ಪತ್ರ ಬರೆದಿದ್ದಾರೆ.
ಶಿವಮೂರ್ತಿ ಮರುಘಾ ಶರಣರನ್ನು ಗದ್ದುಗೆಯಿಂದ ಕೆಳಗಿಳಿಸಬೇಕು. ಚಿತ್ರದುರ್ಗದ ಮುರುಘಾ ಮಠದ ಆಡಳಿತಾಧಿಕಾರಿ ಮಠವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.
ಮುರುಘಾ ಶ್ರೀಗಳ ವಿರುದ್ಧದ ಪತ್ರ ವೈರಲ್:ಸ್ವಾಮೀಜಿ ಬಳಿ ಹೆಲಿಕಾಪ್ಟರ್ ಇದೆಯೇ?