
ಚಿತ್ರದುರ್ಗ (ಸೆ.13): ಕೋಟೆನಾಡು ಚಿತ್ರದುರ್ಗದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ನೇತೃತ್ವದಲ್ಲಿ ಪ್ರತಿಷ್ಠಾಪಿಸಲಾದ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಅದ್ಧೂರಿ ಚಾಲನೆ ನೀಡಲಾಗುತ್ತಿದೆ. ಈ ಉತ್ಸವಕ್ಕೆ ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡುತ್ತಿದ್ದಾರೆ. ಶಿವಶರಣ ಮಾದಾರ ಚನ್ನಯ್ಯ ಮಠದ ಮಾದಾರ ಚನ್ನಯ್ಯಶ್ರೀ, ಕಬೀರಾನಂದ ಆಶ್ರಮದ ಶಿವಲಿಂಗಾನಂದ ಶ್ರೀ, ಕುಂಚಿಟಿಗ ಮಠದ ಶಾಂತವೀರಶ್ರೀ, ವಾಲ್ಮೀಕಿ ಮಠದ ಪ್ರಸನ್ನಾನಂದ ಶ್ರೀ, ಬೋವಿ ಮಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ ಸೇರಿದಂತೆ ಇತರ ಮಠಾಧೀಶರು ಶೋಭಾಯಾತ್ರೆಯಲ್ಲಿ ಭಾಗಿಯಾಗಿ ಧಾರ್ಮಿಕ ಸಾಂಸ್ಕೃತಿಕ ಸಂಭ್ರಮವನ್ನು ಹೆಚ್ಚಿಸಲಿದ್ದಾರೆ.
ಚಿತ್ರನಟರ ಧ್ವಜ ಬಳಕೆಗೆ ನಿಷೇಧ :
ಈ ವಾರ್ಷಿಕ ಗಣೇಶೋತ್ಸವದ ಶೋಭಾಯಾತ್ರೆಯು ನಗರದ ಮುಖ್ಯ ರಸ್ತೆಗಳಲ್ಲಿ ಸಾಗಿ, ಲಕ್ಷಾಂತರ ಭಕ್ತರನ್ನುಆಗಮಲಿದ್ದಾರೆ. ಸಾರ್ವಜನಿಕ ಸುರಕ್ಷತೆಗೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿದೆ. ಆದರೆ, ಶೋಭಾಯಾತ್ರೆಯಲ್ಲಿ ಚಿತ್ರನಟರ ಧ್ವಜ ಬಳಕೆಗೆ ನಿಷೇಧ ಹೇರಲಾಗಿದ್ದು, ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪ್ರಕಟಣೆ ಹೊರಡಿಸಿವೆ.
ಶರಣ್ ಪಂಪ್‌ವೆಲ್‌ಗೆ ಹೈಕೋರ್ಟ್ ಅನುಮತಿ
ವಿಶ್ವ ಹಿಂದೂ ಪರಿಷತ್ (ವಿಹಿಂಪ) ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರಿಗೆ ಜಿಲ್ಲಾಡಳಿತ ಜಿಲ್ಲೆ ಪ್ರವೇಶ ನಿರ್ಬಂಧ ಹೇರಿತ್ತು. ಈ ನಿರ್ಬಂಧ ಆದೇಶವನ್ನು ತೆರವುಗೊಳಿಸಲು ಅವರು ಹೈಕೋರ್ಟ್‌ನಲ್ಲಿ ಮೊರೆ ಹೋಗಿದ್ದರು. ಇಂದು ಶೋಭಾಯಾತ್ರೆಯಲ್ಲಿ ಭಾಗಿಯಾಗಲು ಹೈಕೋರ್ಟ್ ಅನುಮತಿ ನೀಡಿದ್ದು, ಶರಣ್ ಪಂಪ್‌ವೆಲ್ ಆಗಮಿಸುತ್ತಿದ್ದಾರೆ. ಈ ಬೆಳವಣಿಗೆಯು ಸ್ಥಳೀಯ ರಾಜಕೀಯ ಹಾಗೂ ಧಾರ್ಮಿಕ ವಲಯಗಳಲ್ಲಿ ಚರ್ಚೆಗೆ ಗುರಿಯಾಗಿದೆ. ಈ ಶೋಭಾಯಾತ್ರೆಯ ಮೂಲಕ ಚಿತ್ರದುರ್ಗದಲ್ಲಿ ಗಣೇಶೋತ್ಸವದ ಸಂಭ್ರಮದ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಮುಂದಿನ ಅಪ್ಡೇಟ್‌ಗಳಿಗಾಗಿ ಕಾಯುತ್ತಿರಿ..
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ