
ಚಿತ್ರದುರ್ಗ:ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಹದಿಹರೆಯ ಹುಡುಗರು ಸಾವನ್ನಪ್ಪಿದ ಆಘಾತಕಾರಿ ಘಟನೆ
ನೇರಲಗುಂಟೆ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನೇರಲಗುಂಟೆ ಗ್ರಾಮದಲ್ಲಿ ಬೈಕಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರನ್ನು 22 ವರ್ಷದ ಪ್ರಜ್ವಲ್ ಹಾಗೂ 18 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಮೃತ ಬೈಕ್ ಸವಾರರು ನಾಯಕನಹಟ್ಟಿಯಲ್ಲಿ ಜಾತ್ರೆಗೆ ತೆರಳಿ ವಾಪಸ್ ಬರುವ ವೇಳೆ ಈ ದುರಂತ ಸಂಭವಿಸಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಹಾಗೂ ಜಾತ್ರೆ ಇಂದು ನಡೆದಿದೆ. ಏಷ್ಯಾದಲ್ಲಿಯೇ ಎರಡನೇ ಅತಿದೊಡ್ಡ ರಥೋತ್ಸವ ಎಂಬ ಹೆಗ್ಗಳಿಗೆ ಹೊಂದಿರುವ ಈ ರಥೋತ್ಸವದಲ್ಲಿ ಸುತ್ತಮುತ್ತಲ ಊರಿನ ಹಾಗೂ ಜಿಲ್ಲೆಗಳ ಲಕ್ಷಾಂತರ ಜನ ಭಾಗವಹಿಸುತ್ತಾರೆ. ಹಾಗೆಯೇ ಈ ಯುವಕರು ಕೂಡ ತಿಪ್ಪೇರುದ್ರಸ್ವಾಮಿಯ ಜಾತ್ರೆಗೆ ಭೇಟಿ ನೀಡಿ ವಾಪಸ್ ಬರುವ ವೇಳೆ ನೇರಲಗುಂಟೆ ಬಳಿ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಕೋಲಾರ: ಬಂಗಾರದ ಕಿವಿಯೋಲೆಗಾಗಿ ವೃದ್ಧೆಯ ಕಿವಿಯನ್ನೇ ಕತ್ತರಿಸಿದ ಪಾಪಿಗಳು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ