ಕುಮಾರಣ್ಣನಿಗೆ ವೋಟ್‌ ಹಾಕೋದೇ ನಮಗೆ ಮಾಡೋ ಆಶೀರ್ವಾದ: ಲಗ್ನ ಪತ್ರಿಕೆ ವೈರಲ್

Published : May 06, 2022, 05:05 PM IST
ಕುಮಾರಣ್ಣನಿಗೆ ವೋಟ್‌ ಹಾಕೋದೇ ನಮಗೆ ಮಾಡೋ ಆಶೀರ್ವಾದ: ಲಗ್ನ ಪತ್ರಿಕೆ ವೈರಲ್

ಸಾರಾಂಶ

* ಕುಮಾರಣ್ಣನಿಗೆ ವೋಟ್‌ ಹಾಕೋದೇ ನಮಗೆ ಮಾಡೋ ಆಶೀರ್ವಾದ * ಹೀಗೆಂದು ತನ್ನ ಮದುವೆ ಆಮಮತ್ರಣ ಪತ್ರಿಕೆಯಲ್ಲಿ ಹಾಕಿಸಿದ ಚಿತ್ರದುರ್ಗದ ಯುವಕ * ಇದೀಗ ಈ ಲಗ್ನ ಪತ್ರಿಕೆ ಸಾಮಾಜಿ ಜಾಲತಾಣಗಳಲ್ಲಿ ಫುಲ್ ವೈರಲ್

ಚಿತ್ರದುರ್ಗ, (ಮೇ.06): ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಪ್ರಮುಖ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಮತ್ತೊಂದೆಡೆ ವಿವಿಧ ಪಕ್ಷಗಳ ಅಭಿಮಾನಿಗಳು ತಮ್ಮದೇ ಆದ ರೀತಿಯಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.

ಅದರಂತೆ ಮುಂಬರುವ ಚುನಾವಣೆಯಲ್ಲಿ ನೀವು ಎಚ್.ಡಿ ಕುಮಾರಸ್ವಾಮಿ ಅವರಿಗೆ ನೀಡುವ ಮತವೇ ನನಗೆ ಉಡುಗೊರೆ ಎಂದು ಯುವನೋರ್ವ ತನ್ನ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಹಾಕಿಸಿ ಗಮನ ಸೆಳೆದಿದ್ದಾರೆ. 

150 ಪುಟದ ಲಗ್ನ ಪತ್ರಿಕೆ ಮುದ್ರಿಸಿದ ವಕೀಲ : ಅದರಲ್ಲಿರುವ ಮಾಹಿತಿ ಏನು..?

ಆಡಳಿತ ಪಕ್ಷಗಳ ದುರಾಡಳಿತ, ಭ್ರಷ್ಟಾಚಾರ, ಹಗರಣಗಳು ಹಾಗು ರಾಷ್ಟೀಯ ಪಕ್ಷಗಳ ಕಚ್ಚಾಟದ ಬಗ್ಗೆ ಬೇಸತ್ತಿದ್ದೇನೆ ಎಂದಿರುವ ಯುವಕನೋರ್ವ ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುಂಬರುವ ಚುನಾವಣೆಯಲ್ಲಿ ನೀವು ಎಚ್.ಡಿ ಕುಮಾರಸ್ವಾಮಿ ಅವರಿಗೆ ನೀಡುವ ಮತವೇ ನನಗೆ ಉಡುಗೊರೆ ಎಂದು ಹಾಕಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪಿ.ಗೌರೀಪುರ ಗ್ರಾಮದ ಪುಟ್ಟಮ್ಮ ನಾಗರಾಜಪ್ಪ ದಂಪತಿಯ ಪುತ್ರ ಜಯಕುಮಾರ್ ಇಂತಹದ್ದೊಂದು ವಿಶೇಷ ಮದುವೆ ಆಮಂತ್ರಣ ಹಂಚುತ್ತಿದ್ದು, ಇದೀಗ ಈ ಮದುವೆ ಕಾರ್ಡ್‌ ಸಮಾಜಿಕ ಜಲಾತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ.

ಮೇ 18 ರಂದು ನಡೆಯಲಿರುವ ತಮ್ಮ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ನವ ಕರ್ನಾಟಕ ನಿರ್ಮಾಣಕ್ಕಾಗಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎಂಬ ಹಂಬಲ ಹೊಂದಿರುವ ಮದುಮಗ ಜಯಕುಮಾರ್ ಸ್ನಾತಕೋತ್ತರ ಪದವಿಧರರಾಗಿದ್ದು, ಮದುಮಗಳು ಕೂಡ ಸ್ನಾತಕೋತ್ತರ ಪದವೀಧರೆಯಾಗಿದ್ದಾರೆ.

ಈ ಹಿಂದೆ ಸಿಎಂ ಆಗಿ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿರುವ ಜನಪರ ಆಡಳಿತವನ್ನು ಸ್ಮರಿಸಿಕೊಳ್ಳುತ್ತಾ, ಮತ್ತೊಮ್ಮೆ ಕುಮಾರಣ್ಣ ಮುಖ್ಯಮಂತ್ರಿ ಆಗಬೇಕು ಎಂಬ ಕನಸು ಹೊತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋವನ್ನು ಹಾಗೂ ಮೋದಿಗೆ ಮತ ಚಲಾಯಿಸಿ ಎಂಬ ಲಗ್ನಪತ್ರಿಕೆಗಳು ವೈರಲ್ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!