ಕ್ರೈಸ್ತರ ಸಂಘದಿಂದ ಸಿದ್ಧಗಂಗಾ ಶ್ರೀಗಳಿಗೆ ವಿಶೇಷ ಶ್ರದ್ಧಾಂಜಲಿ

Published : Jan 24, 2019, 09:40 AM IST
ಕ್ರೈಸ್ತರ ಸಂಘದಿಂದ ಸಿದ್ಧಗಂಗಾ ಶ್ರೀಗಳಿಗೆ ವಿಶೇಷ ಶ್ರದ್ಧಾಂಜಲಿ

ಸಾರಾಂಶ

ಕ್ರೈಸ್ತರ ಸಂಘದಿಂದ ಸಿದ್ಧಗಂಗಾ ಶ್ರೀಗಳಿಗೆ ವಿಶೇಷ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ಅಲ್ಲದೇ ಇದೇ ವೇಳೆ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಅಖಿಲ ಕರ್ನಾಟಕ ಕ್ಯಾಥೋಲಿಕ ಕ್ರೈಸ್ತರ ಕನ್ನಡ ಸಂಘ ಒತ್ತಾಯಿಸಿದೆ.  

ಬೆಂಗಳೂರು: ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರ ‘ಭಾರತ ರತ್ನ’ ನೀಡಿ ಗೌರವಿಸಬೇಕು ಎಂದು ಅಖಿಲ ಕರ್ನಾಟಕ ಕ್ಯಾಥೋಲಿಕ ಕ್ರೈಸ್ತರ ಕನ್ನಡ ಸಂಘ ಒತ್ತಾಯಿಸಿತು.

ಬುಧವಾರ ನಗರದ ಪುರಭವನ ಮುಂಭಾಗ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ, ಕ್ರೈಸ್ತ ಬಾಂಧವರು ಮೇಣದ ಬತ್ತಿ ಬೆಳಗಿಸಿ, ಶ್ರೀಗಳಿಗೆ ಗೀತೆ ನಮನ ಸಲ್ಲಿಸಿದರು. 

ಶಿವಕುಮಾರ ಸ್ವಾಮೀಜಿ ಕೇವಲ ಒಂದು ಜಾತಿಗೆ, ಧರ್ಮಕ್ಕೆ ಸೀಮಿತವಾದವರಲ್ಲ. ಇಡೀ ಮನುಕುಲದ ಒಳಿತಿಗಾಗಿ ಜೀವಿಸಿದವರು. ಅಂತವರಿಗೆ ‘ಭಾರತ ರತ್ನ’ ನೀಡಿದರೆ, ಪ್ರಶಸ್ತಿಯ ಘನತೆ ಹೆಚ್ಚುತ್ತದೆ ಎಂದು ಒಕ್ಕೊರಲಿನಿಂದ ಆಗ್ರಹಿಸಿದರು. ಬೇಲಿಮಠದ ಶಿವರುದ್ರ ಸ್ವಾಮೀಜಿ, ಸಂಘದ ಅಧ್ಯಕ್ಷ ರಫಾಯಲ್ ರಾಜ್, ಉಪಾಧ್ಯಕ್ಷ ದೇವಕುಮಾರ್, ಫಾ.ಸಂದ್ಯಾಗು ಇನ್ನಿತರರು ಪಾಲ್ಗೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!