ರಾಮ ಮಂದಿರಕ್ಕೆ ಕ್ರೈಸ್ತರಿಂದ ಒಂದು ಕೋಟಿ ರು. ದೇಣಿಗೆ

By Kannadaprabha NewsFirst Published Feb 8, 2021, 7:48 AM IST
Highlights

ಈಗಾಗಲೇ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಅಭಿಯಾನ ನಡೆಯುತ್ತಿದ್ದು, ಇದೀಗ ಕ್ರೈಸ್ತ ಸಮುದಾಯ ಮಂದಿರ ನಿರ್ಮಾಣಕ್ಕೆ ಒಂದು ಕೋಟಿಗೂ ಅಧಿಕ ಹಣ ನೀಡಿದೆ. 

ಬೆಂಗಳೂರು (ಫೆ.08):  ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯದ ಉದ್ಯಮಿಗಳು ಹಾಗೂ ಶಿಕ್ಷಣ ತಜ್ಞರು ಕೈಜೋಡಿಸಿದ್ದು, ಒಂದು ಕೋಟಿ ರು.ಗೂ ಹೆಚ್ಚು ದೇಣಿಗೆ ನೀಡಿದ್ದಾರೆ.

ಭಾನುವಾರ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ ಉದ್ಯಮಿಗಳು, ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್‌ ತಜ್ಞರು, ಸಮುದಾಯದ ಮುಖಂಡರು ಭಾಗಿಯಾಗಿ ಮಂದಿರ ನಿರ್ಮಾಣಕ್ಕೆ ತಮ್ಮ ಕೈಲಾದ ಅಳಿಲು ಸೇವೆ ಮಾಡುವುದಾಗಿ ಹೇಳಿ ದೇಣಿಗೆ ನೀಡಿದರು.

ಈ ವೇಳೆ ಮಾತನಾಡಿದ ಉಪ ಮುಖ್ಯಮಂತ್ರಿ ಅಶ್ವತ್‌್ಥನಾರಾಯಣ್‌, ಬಿಜೆಪಿ ಅಲ್ಪಸಂಖ್ಯಾತರ ವಿರುದ್ಧ ಇರುವ ಪಕ್ಷ ಎಂಬುದು ಅಕ್ಷರಶಃ ಸುಳ್ಳು. ಅನೇಕ ವರ್ಷಗಳಿಂದ ಇಂತಹ ಅಪಪ್ರಚಾರವನ್ನು ನಡೆಸಿಕೊಂಡು ಬರಲಾಗಿದೆ. ಬಿಜೆಪಿ ದೇಶದ ಸರ್ವರನ್ನು ಒಳಗೊಂಡಿರುವ ಪಕ್ಷ ಎಂದು ತಿಳಿಸಿದರು.

6 ದಶಕ ಗುಹೆಯಲ್ಲಿದ್ದ ಸಾಧು, ರಾಮ ಮಂದಿರ ನಿರ್ಮಾಣಕ್ಕೆ ಕೊಟ್ರು 1 ಕೋಟಿ ದೇಣಿಗೆ! ..

ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿರುವಂತೆ ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಮತ್ತು ಸಬ್‌ ಕಾ ವಿಶ್ವಾಸ್‌ ಎಂಬುದು ಬಿಜೆಪಿಯ ಮಂತ್ರ. ಎಲ್ಲರನ್ನು ಒಳಗೊಂಡು ದೇಶವನ್ನು ಮುನ್ನಡೆಸುವುದು ಪಕ್ಷದ ಗುರಿಯಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಈ ತತ್ವದಡಿಯಲ್ಲೇ ಆಡಳಿತ ನಡೆಯುತ್ತಿದೆ ಎಂದು ಹೇಳಿದರು.

ಸಭೆಯಲ್ಲಿ ಬೆಂಗಳೂರಿನಲ್ಲಿರುವ ಮಾಲ್ಡೀವ್‌್ಸ ರಾಯಭಾರ ಕಚೇರಿಯ ಕಾನ್ಸುಲ್‌ ಜನರಲ್‌ ಡಾ.ಜೋಸೆಫ್‌ ವಿ.ಜಿ, ಉದ್ಯಮಿಗಳಾದ ಜೋಸೆಫ್‌ ಫ್ರಾನ್ಸಿಸ್‌, ಸಿ.ಜೆ.ಬಾಬು, ಸಿಲ್ವಿಯಾನ್‌ ನರೋನ, ಕ್ಲ್ಯಾಡ್ಯುಯಸ್‌ ಪೆರಾರಿಯ, ಡಾ.ಥಾಮಸ್‌ ಟಿ.ಜಾನ್‌, ಚಾರ್ಲ್ಸ್ ಗೋಮೆಸ್‌, ರೋಶನ್‌ ಡಿಸಿಲ್ವ, ನಿಗೆಲ್‌ ಫರ್ನಾಂಡೀಸ್‌, ಸಂತೋಷ್‌ ಸೀಕ್ವೆರಿಯಾ, ಕ್ಲಾರೆನ್ಸ್‌ ಪೆರಾರಿಯಾ, ಪ್ರಮೋದ್‌ ಡಿಸೋಜ, ಎಂ.ಎಕ್ಸ್‌.ರಾಜು, ಡಾ.ಕೆ.ಸಿ.ಸ್ಯಾಮ್ಯುಯಲ್‌, ಅರುಣ್‌ ಫರ್ನಾಂಡೀಸ್‌, ಡಾ.ಸಂತೋಷ್‌ ಕೋಶಿ, ಸಮುದಾಯದ ಹಿರಿಯ ಮುಖಂಡ ಪಿ.ಕೆ.ಚೆರಿಯನ್‌, ಸಿ.ಜಿ.ವರ್ಗೀಸ್‌, ಮನೋಜ್‌ ರಾಜ್‌, ಐವಾನ್‌ ಡಿಭಿಕೋಸ್ಟಾಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯ ಜೆ.ಜೋ ಜೋಸೆಫ್‌ ಇದ್ದರು.

click me!