ಚಲುವರಾಯಸ್ವಾಮಿ ವಿರುದ್ಧ ಪತ್ರದ ಬಗ್ಗೆ ಸಿಐಡಿ ತನಿಖೆ: ಸಿಎಂ ಸಿದ್ದರಾಮಯ್ಯ

Published : Aug 09, 2023, 01:00 AM IST
ಚಲುವರಾಯಸ್ವಾಮಿ ವಿರುದ್ಧ ಪತ್ರದ ಬಗ್ಗೆ ಸಿಐಡಿ ತನಿಖೆ: ಸಿಎಂ ಸಿದ್ದರಾಮಯ್ಯ

ಸಾರಾಂಶ

ಪ್ರಕರಣವನ್ನು ಮೊದಲು ಪೊಲೀಸ್‌ ತನಿಖೆಗೆ ಸೂಚಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ತಮ್ಮನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸಿಐಡಿ ತನಿಖೆಗೆ ವಹಿಸಲು ಸೂಚನೆ ನೀಡಿದ್ದಾರೆ. ಬಳಿಕ ಈ ಕುರಿತು ಅವರು ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ.

ಬೆಂಗಳೂರು(ಆ.09):  ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಮಂಡ್ಯದ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ರಾಜ್ಯಪಾಲರಿಗೆ ಬರೆಯಲಾದ ಪತ್ರದ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಪ್ರಕರಣವನ್ನು ಮೊದಲು ಪೊಲೀಸ್‌ ತನಿಖೆಗೆ ಸೂಚಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ತಮ್ಮನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸಿಐಡಿ ತನಿಖೆಗೆ ವಹಿಸಲು ಸೂಚನೆ ನೀಡಿದ್ದಾರೆ. ಬಳಿಕ ಈ ಕುರಿತು ಅವರು ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ, ಚೆಲುವರಾಯ ಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ಸಲ್ಲಿಸಲಾಗಿದೆ ಎಂದು ಹೇಳಲಾಗಿರುವ ದೂರು ಪತ್ರದಲ್ಲಿ 7 ಅಧಿಕಾರಿಗಳ ಸಹಿಯಿದೆ. ಆದರೆ, ಸಂಬಂಧಪಟ್ಟಅಧಿಕಾರಿಗಳು ಈಗಾಗಲೇ ತಾವು ಅಂತಹ ಯಾವುದೇ ಪತ್ರ ಬರೆದಿಲ್ಲ ಎಂದು ಸರ್ಕಾರಕ್ಕೆ ಹೇಳಿದ್ದಾರೆ. ಹಾಗಾಗಿ ಆ ಸಹಿಗಳು ಅಸಲಿಯೇ, ನಕಲಿಯೇ ಎಂಬುದು ತಿಳಿಯಬೇಕಿದೆ. ಅಲ್ಲದೆ, ಆ ಎಲ್ಲಾ ಸಹಿಗಳನ್ನು ಒಬ್ಬರೇ ಮಾಡಿರುವ ಶಂಕೆಯಿದೆ. ಇನ್ನು ದೂರಿನಲ್ಲಿ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ವಹಿಸುವುದು ಸೂಕ್ತ ಎಂದು ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ಹೇಳಿವೆ.

ನನ್ನ ವಿರುದ್ದದ ಷಡ್ಯಂತ್ರಕ್ಕೆ ಫಲ ದೊರಕುವುದಿಲ್ಲ, ಹೆಚ್‌ಡಿಕೆ ಆರೋಪಕ್ಕೆ ಚಲುವರಾಯಸ್ವಾಮಿ ಟ್ವೀಟ್ ಗುದ್ದು

ಸತ್ಯ ಬಯಲಿಗೆ ತರಲು ತನಿಖೆ- ಸಿಎಂ:

ಪ್ರಕರಣ ಸಂಬಂಧ ಮಂಗಳವಾರ ಬೆಳಗ್ಗೆ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧದ ಪತ್ರ ನಕಲಿಯಲ್ಲ ಅಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ. ಆದರೆ, ರಾಮನಗರ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್‌ ಕುಮಾರ್‌ ಅವರು ಪತ್ರವನ್ನು ನಮ್ಮ ಅಧಿಕಾರಿಗಳು ಬರೆದಿಲ್ಲ ಎಂದು ಹೇಳಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸಿ ಸತ್ಯಾಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆ ಎಂದು ಹೇಳಿದರು.

ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಈ ಪತ್ರ ಪ್ರಕರಣ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!