* 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ
* ಮಾಧ್ಯಮಗಳಿಗೆ ಪ್ರಿಯಾಂಕ ಖರ್ಗೆ ನೀಡಿರುವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಐಡಿ
* ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆಗೆ ಸಿಐಡಿ ನೋಟಿಸ್
ಬೆಂಗಳೂರು, (ಏ.24): ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿರುವ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡಿದೆ.
ಹೌದು... ಪಿಎಸ್ಐ ನೇಮಕಾತಿ ಅಕ್ರಮಕ್ಕೆ (PSI Recruitment Scam) ಸಂಬಂಧಿಸಿದಂತೆ ಸಾಕ್ಷಿ ಒದಗಿಸಲು ಏ. 25 ರಂದು ಬೆಳಗ್ಗೆ ಕಚೇರಿಗೆ ಬರುವಂತೆ ಪ್ರಿಯಾಂಕ್ ಖರ್ಗೆ (Priyanak Kharge) ಅವರಿಗೆ ಸಿಐಡಿ (CID) ನೋಟಿಸ್ ಜಾರಿ ಮಾಡಿದೆ,
PSI Scam: ಇಷ್ಟು ದಿನಗಳಾದ್ರೂ ದಿವ್ಯಾ ಹಾಗರಗಿ ಅರೆಸ್ಟ್ ಯಾಕಿಲ್ಲ? ಶಾಸಕ ಪ್ರಶ್ನೆ
545 ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಕಲುಬುರಗಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ. ಅದರಲ್ಲೂ ಈ ಪಕರಣದಲ್ಲಿ ರಾಜಕೀಯ ನಾಯಕರ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಫಜಲಪುರ ಕಾಂಗ್ರೆಸ್ ಮುಖಂಡರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ತನಿಖೆ ನಡೆಸೊದೆ.
ಇನ್ನು ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಿಂತೆ ಸುದ್ದಿಗೋಷ್ಠಿ ಕರೆದಿದ್ದ ಶಾಸಕ ಪ್ರಿಯಾಂಕ ಖರ್ಗೆ, ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಆಡಿಯೋ ಹಾಗೂ ಸಾಕ್ಷ್ಯಾಧಾರಗಳಿವೆ. ಪಿಎಸ್ಐ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ತಮ್ಮಲ್ಲಿರುವ ಸಾಕ್ಷ್ಯಾಧಾರಗಳನ್ನ ಬಂದು ಒದಗಿಸುವಂತೆ ಸಿಐಡಿ ನೋಟಿಸಿ ನೀಡಿದೆ.
ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಆರ್‌ಪಿಸಿ ಕಲಂ 90/160 ಅಡಿ ಪೊಲೀಸ್ ನೋಟಿಸ್ ನೀಡಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಸಾಕ್ಷ್ಯಾಧಾರಗಳು ಇರುವುದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುತ್ತೀರಿ. ಈ ಪ್ರಕರಣ ಸೂಕ್ಷ್ಮ ವಾಗಿರುವುದರಿಂದ ತಮ್ಮ ಬಳಿಯಿರುವ ಸಾಕ್ಷ್ಯಾಧಾರಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಿ ತನಿಖೆ ಕೈಗೊಳ್ಳುವುದು ಅನಿವಾರ್ಯವಾಗಿದೆ. ಹೀಗಾಗಿ ಸದರಿ ದಾಖಲೆಗಳನ್ನು ಸಂಗ್ರಹಿಸಲು ತನಿಖಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿಯಿರುವ ಸಾಕ್ಷ್ಯಾಧಾರಗಳನ್ನು ಹಾಗೂ ದಾಖಲೆಗಳನ್ನು ಏ. 25 ರಂದು ಸಿಐಡಿ ಕಚೇರಿಯಲ್ಲಿರುವ ಸಹಾಯಕ ತನಿಖಾಧಿಕಾರಿಗಳ ಸಮಕ್ಷಮ ಸಲ್ಲಿಸುವಂತೆ ಸೂಚಿಸಿದೆ ಎಂದು ಸಹಾಯಕ ತನಿಖಾಧಿಕಾರಿ ಪಿ.ನರಸಿಂಹಮೂರ್ತಿ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.
ಡಿಕೆ ಶಿವಕುಮಾರ್ ಕೆಂಡಾಮಂಡಲ
ಇನ್ನು ಪ್ರಿಯಾಂಕ್ ಖರ್ಗೆ ಅವರಿಗೆ ಸಿಐಡಿ ನೋಟಿಸ್ ನೀಡಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿದ್ದು, PSI ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿ, ಕಿಂಗ್ ಪಿನ್ ಗಳನ್ನು ಬಂಧಿಸಿ ವಿಚಾರಣೆ ನಡೆಸದ ಸರ್ಕಾರ, ಪ್ರಕರಣವನ್ನು ಬಯಲಿಗೆಳೆದ ಪ್ರಿಯಾಂಕ್ ಖರ್ಗೆ ಅವರಿಗೆ ಸಿಐಡಿ ನೋಟೀಸ್ ಜಾರಿ ಮಾಡಿರುವುದು ಖಂಡನೀಯ. ಇದು ರಾಜ್ಯ ಗೃಹ ಇಲಾಖೆಯ ದೌರ್ಬಲ್ಯಕ್ಕೆ ಸಾಕ್ಷಿ.ಇದು ಭ್ರಷ್ಟ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಪರಮಾವಧಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದ್ದಾರೆ.
ಭವಿಷ್ಯ ನುಡಿದ್ದ ರೇಣುಕಾಚಾರ್ಯ
ಈ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ವೇಳೆ ನೀವು ಸ್ಪೋಟಕ ಆಡಿಯೋ ರೆಕಾರ್ಡ್ ಬಗ್ಗೆ ಮಾಹಿತಿಯನ್ನು ಏಕೆ ನೀಡಿರಲಿಲ್ಲ. ಇಷ್ಟು ದಿನ ಯಾಕೆ ಸಾಕ್ಷ್ಯವನ್ನು ತಮ್ಮ ಬಳಿ ಇಟ್ಟುಕೊಂಡಿದ್ದರ ಅಸಲಿ ಕಾರಣವಾದರೂ ಏನು. ಈಗ ನಿಮ್ಮ ಆಪ್ತರು ಬಂಧನವಾಗುತ್ತಿದ್ದಂತೆ ಮಾಹಿತಿ ಹೊರಹಾಕಿದ್ದೀರಾ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರಶ್ನಿಸಿದ್ದರು.
ನಿಮ್ಮ ಬೆಂಬಲಿಗರು ಸಿಐಡಿ ತನಿಖೆಯಲ್ಲಿ ಸಿಕ್ಕಿಬೀಳುವುದಿಲ್ಲ ಎಂಬ ಹುಸಿ ನಂಬಿಕೆ ಇತ್ತೇ. ಅಷ್ಟಕ್ಕೂ ಕಿಂಗ್ ಪಿನ್ ಗಳಾದ ಮಹಾಂತೇಶ ಪಾಟೀಲ ಹಾಗೂ ರುದ್ರಗೌಡ ಪಾಟೀಲ್ ಗೆ" ಗಾಢ್ ಫಾದರ್ " ಯಾರು ? ಮುಂದಿನ ವಿಧಾನಸಭೆಯ ಚುನಾವಣೆಯಲ್ಲಿ ಅಫಜಲಪುರ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಟಿಕೆಟ್ ಬೇಕಾದರೆ ಅಭ್ಯರ್ಥಿಗಳಿಂದ ಕಲೆಕ್ಷನ್ ಮಾಡುವಂತೆ...ಈ ಇಬ್ಬರು ಸಹೋದರರಿಗೆ ಸಲಹೆ ಕೊಟ್ಟ ಮಹಾನ್ ನಾಯಕರು ಯಾರೆಂಬುದು ಸದ್ಯದಲ್ಲೇ ತೆರೆಯ ಮೇಲೆ ಮೂಡಿ ಬರಲಿದೆ ಕಾದು ನೋಡಿ! ಎಂದು ಹೇಳಿದ್ದರು.