ಎಸ್‌ಐ ಕೇಸಲ್ಲಿ ಸಚಿವರ ಹೆಸರು ದಾಖಲಿಗೆ ಸಿಐಡಿ ನಕಾರ: ಡಿಕೆಶಿ

Published : Jul 07, 2022, 04:30 AM IST
ಎಸ್‌ಐ ಕೇಸಲ್ಲಿ ಸಚಿವರ ಹೆಸರು ದಾಖಲಿಗೆ ಸಿಐಡಿ ನಕಾರ: ಡಿಕೆಶಿ

ಸಾರಾಂಶ

*  ತನಿಖೆಯಲ್ಲಿ ಆಂತರಿಕವಾಗಿ ಏನೆಲ್ಲಾ ಆಗುತ್ತಿದೆ ಎಂಬುದು ಗೊತ್ತಿದೆ *  ಇಂತಹ ತನಿಖೆಯಿಂದ ನ್ಯಾಯ ಸಿಗುವುದಿಲ್ಲ *  ಹೈಕೋರ್ಟ್‌ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು 

ಬೆಂಗಳೂರು(ಜು.07): ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್‌ ಪಾಲ್‌ ಅವರು ಹಗರಣದಲ್ಲಿ ಭಾಗಿಯಾಗಿರುವ ಸಚಿವರು, ನಾಯಕರ ಹೆಸರನ್ನು ಬಹಿರಂಗಪಡಿಸಲು ಸಿದ್ಧವಿದ್ದರೂ ತನಿಖಾಧಿಕಾರಿಗಳು ಅದನ್ನು ದಾಖಲಿಸಿಕೊಳ್ಳುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಕರ್ನಾಟಕ ಭ್ರಷ್ಟಾಚಾರದ ರಾಜಧಾನಿಯಾಗಿದೆ. ಈ ಕುರಿತು ಹೈಕೋರ್ಚ್‌ ನ್ಯಾಯಮೂರ್ತಿ ಏನು ಹೇಳಿದ್ದಾರೆ ಎಂಬುದನ್ನು ಎಲ್ಲರೂ ಗಮನಿಸಿದ್ದಾರೆ. ಪಿಎಸ್‌ಐ ಹಗರಣದಲ್ಲಿ ರಾಜ್ಯದ ಐಪಿಎಸ್‌ ಅಧಿಕಾರಿಗಳು, ರಾಜಕಾರಣಿಗಳು, ಸಚಿವರು ಭಾಗಿಯಾಗಿದ್ದಾರೆ. ಸಚಿವರೇ ನಮ್ಮ ಜಿಲ್ಲೆಯ ಅಭ್ಯರ್ಥಿಗಳಿಗೆ ಶರಣಾಗುವಂತೆ ಹೇಳಿದ್ದಾರೆ. ಈವರೆಗೆ 50ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದ್ದು, ಅವರ ಹೇಳಿಕೆ, ಬಂಧನವಾಗಿರುವ ಎಡಿಜಿಪಿ ಅವರ ಹೇಳಿಕೆಯನ್ನು ಪೂರ್ಣ ಪ್ರಮಾಣದಲ್ಲಿ ತನಿಖಾಧಿಕಾರಿಗಳು ದಾಖಲೆ ಮಾಡಿಕೊಳ್ಳುತ್ತಿಲ್ಲ ಎಂದು ದೂರಿದರು.

PSI Recruitment Scam: ಕಿಂಗ್‌ಪಿನ್‌ಗಳನ್ನು ಸಿಐಡಿ ಬಂಧಿಸಲಿ: ಎಚ್‌ಡಿಕೆ ಆಗ್ರಹ

ತನಿಖೆಯಲ್ಲಿ ಆಂತರಿಕವಾಗಿ ಏನೆಲ್ಲಾ ಆಗುತ್ತಿದೆ ಎಂಬುದು ಗೊತ್ತಿದೆ. ಇಂತಹ ತನಿಖೆಯಿಂದ ನ್ಯಾಯ ಸಿಗುವುದಿಲ್ಲ. ಹೈಕೋರ್ಟ್‌ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದ ಅವರು, ರಾಜ್ಯದಲ್ಲಿ ಯಾವುದೇ ಯೋಜನೆಗಳು ಜಾರಿಯಾಗುತ್ತಿಲ್ಲ. ಬಿಜೆಪಿ ಜನರಿಗೆ ಕೊಟ್ಟಭರವಸೆಗಳನ್ನು ಈಡೇರಿಸಿಲ್ಲ. ಅವರ ಕಥೆ ಮುಕ್ತಾಯದ ಹಂತದಲ್ಲಿದ್ದು, ಜನ ಅವರನ್ನು ಅಧಿಕಾರದಿಂದ ಕಿತ್ತೊಗೆಯಲಿದ್ದಾರೆ. ಅಧ್ಯಯನದ ಹೆಸರಲ್ಲಿ ಬಿಜೆಪಿ ಶಾಸಕರು ಪ್ರವಾಸ ಮಾಡುತ್ತಿದ್ದಾರೆ. ಇದು ಅವರ ಇಚ್ಛೆ, ನಾವು ನಮ್ಮ ಶಾಸಕರನ್ನು ಅಧ್ಯಯನ ಪ್ರವಾಸಕ್ಕೆ ಕಳುಹಿಸಲು ಮುಂದಾದಾಗ ಅವರು ಟೀಕಿಸಿದ್ದರು ಎಂದು ಕಿಡಿಕಾರಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಳ್ತಂಗಡಿ ಬಾಲಕ ಸುಮಂತ್ ಸಾವು ಪ್ರಕರಣಕ್ಕೆ ರೋಚಕ ಟ್ವಿಸ್ಟ್ : ಶವ ಪತ್ತೆಯಾದ ಕೆರೆಯಲ್ಲಿ ಕತ್ತಿ ಟಾರ್ಚ್ ಪತ್ತೆ
ಚಾಮರಾಜ ಕ್ಷೇತ್ರಕ್ಕೆ ಉಪಕಾರ ಮಾಡದಿದ್ದರೂ ಪರವಾಗಿಲ್ಲ, ಉಪದ್ರ ನೀಡುವ ಜನಪ್ರತಿನಿಧಿ ಬೇಡ, ನಾನು ಆಕ್ಷಾಂಕ್ಷಿ:ಪ್ರತಾಪ್ ಸಿಂಹ