
ಚಿಕ್ಕಮಗಳೂರು (ಡಿ.13): ಹೈಟೆಕ್ ಕಾರ್‌ನಲ್ಲಿ ಗೋವುಗಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ಗೋ ಕಳ್ಳರನ್ನು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಮತ್ತೊಂದು ಕಾರ್‌ನಲ್ಲಿ ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಕೊಪ್ಪದಿಂದ ಕುದುರೆಗುಂಡಿವರೆಗೂ ನಡೆದ ಈ ಚೇಸಿಂಗ್ ವಿಫಲವಾಗಿದೆ.
ಕೊಪ್ಪ ತಾಲೂಕಿನಲ್ಲಿ ಗೋ ಕಳ್ಳರು ಹೈಟೆಕ್ ಕಾರ್‌ನಲ್ಲಿ ಗೋವುಗಳನ್ನು ತುಂಬಿಕೊಂಡು ಹೋಗುತ್ತಿದ್ದರು. ಈ ವಿಷಯ ತಿಳಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ತಕ್ಷಣವೇ ಮತ್ತೊಂದು ಕಾರ್‌ನಲ್ಲಿ ಅವರನ್ನು ಬೆನ್ನತ್ತಿದ್ದಾರೆ. ಕಳ್ಳರನ್ನು ಹಿಡಿಯುವ ಪ್ರಯತ್ನದಲ್ಲಿ ಕಾರ್ಯಕರ್ತರು ತಮ್ಮ ಕಾರ್‌ನಲ್ಲಿ ಚೇಸಿಂಗ್ ವಿಡಿಯೋ ಮಾಡಿಕೊಂಡೇ ಮುಂದುವರೆದಿದ್ದಾರೆ.
ಗೋ ಕಳ್ಳರ ಕಾರ್ ಮತ್ತು ಬೆನ್ನತ್ತಿದ್ದ ಹಿಂದೂಪರ ಸಂಘಟನೆಯ ಕಾರ್ಯಕರ್ತರ ಕಾರ್ ಎರಡೂ ರಸ್ತೆಯಲ್ಲಿ ಅತೀ ವೇಗವಾಗಿ ಚಲಿಸಿದ್ದು, ಕೊಪ್ಪದಿಂದ ಕುದುರೆಗುಂಡಿಯವರೆಗೂ ಸಿನಿಮಾಶೈಲಿಯ ಕಾರ್ ರೇಸ್‌ನಂತೆ ಭಾಸವಾಗಿತ್ತು. ಆದರೂ, ಅತೀ ವೇಗದಿಂದ ಚಲಾಯಿಸಿದ ಕಾರಣ ಗೋ ಕಳ್ಳರ ಕಾರನ್ನು ಹಿಡಿಯಲು ಸಾಧ್ಯವಾಗದೆ ಕಾರ್ಯಕರ್ತರು ವಾಪಸ್ಸು ಬಂದಿದ್ದಾರೆ. ಕಳ್ಳರ ಕಾರ್ ತೀರ್ಥಹಳ್ಳಿ ಮಾರ್ಗವಾಗಿ ಹೋಗಿರುವ ಸಾಧ್ಯತೆ ಇದೆ ಎಂದು ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ರೀತಿಯ ಗೋ ಕಳ್ಳತನಗಳು ಹಲವು ಬಾರಿ ನಡೆದಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಈ ಸಂಬಂಧ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಕಿಡಿಕಾರಿ ಪೋಸ್ಟ್‌ಗಳನ್ನು ಹಾಕಿದ್ದು, ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಆಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ