
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕರು ಎಸ್‌ಐಟಿ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮುಖ್ಯಮಂತ್ರಿ, ಗೃಹ ಸಚಿವರು, ಎಸ್‌ಐಟಿ ಅಧಿಕಾರಿಗಳು ಹಾಗೂ ಪೊಲೀಸ್ ವೃತ್ತ ನಿರೀಕ್ಷಿಕರಿಗೆ ವೇದಿಕೆಯಿಂದ ಮನವಿ ಸಲ್ಲಿಸಿದ್ದು, ಅವಹೇಳನದಿಂದ ನಿರ್ಮಾಣವಾದ ಅಹಿತಕರ ವಾತಾವರಣ ತಿಳಿಗೊಳಿಸಬೇಕು. ಕ್ಷೇತ್ರದ ವಿರುದ್ಧ ಷಡ್ಯಂತ್ರ ಮಾಡಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಧರ್ಮಸ್ಥಳದ ಬಗ್ಗೆ ಭಕ್ತರ ಮನಸಲ್ಲಿ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ಕ್ಷೇತ್ರದ ವಿರುದ್ಧ ಹಲವು ಸುಳ್ಳು ಮತ್ತು ಕಪೋಲಕಲ್ಪಿತ ಆರೋಪ ಮಾಡಿದ್ದು, ತನಿಖೆ ನಡೆಯುತ್ತಿರುವ ಸಂದರ್ಭ ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.
ಷಡ್ಯಂತ್ರದ ಪರಿಣಾಮವಾಗಿ ತನಿಖೆಗೆ ರಾಜ್ಯ ಸರ್ಕಾರ ಅನಗತ್ಯವಾಗಿ ವೆಚ್ಚ ಮಾಡಿರುವ ಎಲ್ಲಾ ಮೊತ್ತವನ್ನೂ, ಈ ಷಡ್ಯಂತ್ರಕ್ಕೆ ಭಾಗಿಗಳಾದವರಿಂದ ವಸೂಲಿ ಮಾಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ