
ಬೆಂಗಳೂರು(ಆ.20): ಕಳೆದ ವಾರ ಗಲಭೆಗೆ ತುತ್ತಾಗಿದ್ದ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯ ಪ್ರದೇಶಗಳಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಬುಧವಾರ ಭೇಟಿ ಪರಿಶೀಲನೆ ನಡೆಸಿದ್ದಾರೆ.
"
ಗಲಭೆ ಬಳಿಕ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಹಾಗೂ ಗಲಭೆ ಪ್ರಕರಣದ ತನಿಖೆ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಆಯುಕ್ತರು, ಯಾವುದೇ ಕಾರಣಕ್ಕೂ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ತನಿಖೆ ಬಗ್ಗೆ ಮಾಹಿತಿ ಪಡೆದ ಕಮಿಷನರ್
ಈ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತ ಕಮಲ್ ಪಂತ್ ಅವರು, ಗಲಭೆ ಪ್ರಕರಣದ ತನಿಖೆ ಎಲ್ಲ ಆಯಾಮದಲ್ಲೂ ನಡೆದಿದೆ. ಯಾರೇ ತಪ್ಪಿತಸ್ಥರಾಗಿದ್ದರೂ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುತ್ತದೆ. ಗಲಾಟೆ ಬಳಿಕ ಎರಡು ಠಾಣೆಗಳ ಸರಹದ್ದಿನ ಪರಿಸ್ಥಿತಿ ಅವಲೋಕಿಸಿದ್ದೇನೆ. ವಾತಾವರಣ ಸಹಜ ಸ್ಥಿತಿಗೆ ಮರಳಿದೆ. ಗಲಭೆಯಲ್ಲಿ ಪೊಲೀಸ್ ಇಲಾಖೆಗೆ ತುಂಬಾ ನಷ್ಟವಾಗಿದೆ. ಹಾನಿ ಬಗ್ಗೆ ವರದಿ ಸಿದ್ಧಪಡಿಸಲಾಗಿದ್ದು, ಸರ್ಕಾರದ ಗಮನಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.
ಈ ವೇಳೆ ಹೆಚ್ಚುವರಿ ಪೊಲೀಸ್ ಆಯುಕ್ತ (ಪೂರ್ವ) ಎಸ್.ಮುರುಗನ್ ಹಾಗೂ ಡಿಸಿಪಿ ಡಾ. ಎಸ್.ಡಿ.ಶರಣಪ್ಪ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ