
ಬೆಂಗಳೂರು (ಏ.21): ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಖ್ಯಾತ ಉದ್ಯಮಿ ಸಿ.ಜೆ.ರಾಯ್ ಜೊತೆಗೆ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ವ್ಯವಹಾರಿಕ ಸಂಬಂಧ ಹೊಂದಿದ್ದರು. ಈ ಹಿನ್ನೆಲೆಯಲ್ಲಿಯೂ ಇ.ಡಿ. ಅಧಿಕಾರಿಗಳು ಈ ಇಬ್ಬರ ಮೇಲೆ ದಾಳಿ ನಡೆಸಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ರಾಯ್ ಅವರು ಕರ್ನಾಟಕ, ಕೇರಳ, ದುಬೈ ಸೇರಿ ಹಲವು ಕಡೆ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿದ್ದರು. ಹಣಕಾಸು ವ್ಯವಹಾರ ಸಂಬಂಧ ಕೇರಳ ಐಟಿ ಅಧಿಕಾರಿಗಳು ರಾಯ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆಯೇ ರಾಯ್ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಸಿ.ಜೆ.ರಾಯ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವ್ಯವಹಾರಿಕ ನಷ್ಟ, ತೆರಿಗೆ ವಂಚನೆ ಸೇರಿ ಹಲವು ವಿಷಯಗಳು ಚರ್ಚೆಗೆ ಬಂದಿದ್ದವು. ಈ ರಾಯ್ ಜೊತೆಗೆ ಹ್ಯಾರಿಸ್ ನಲಪಾಡ್ ಕುಟುಂಬ ವ್ಯವಹಾರಿಕ ಸಂಬಂಧ ಇರಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲೂ ಇ.ಡಿ. ಅಧಿಕಾರಿಗಳು ದಾಳಿ ನಡೆಸಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ