ಮೋಡ ಬಿತ್ತನೆ ಕನಸು ಈಡೇರಿಕೆ: ಸಚಿವ ಸತೀಶ ಜಾರಕಿಹೊಳಿ ಹರ್ಷ

By Kannadaprabha News  |  First Published Sep 30, 2023, 11:03 PM IST

ಬರದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾಂ ಶುಗರ್ಸ್‌ ವತಿಯಿಂದ ಕೈಗೊಳ್ಳಲಾದ ಮೋಡ ಬಿತ್ತನೆ ಯಶಸ್ವಿಯಾದರೇ ಸರ್ಕಾರ ಅನುಮತಿ ಕೊಟ್ಟರೆ ಮಡಿಕೇರಿ, ಹಾಸನ ಜಿಲ್ಲೆಯಲ್ಲಿ (ಕಾವೇರಿ ಭಾಗದಲ್ಲಿ) ಮೋಡ ಬಿತ್ತನೆ ಮಾಡಲಾಗುವುದು ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. 


ಬೆಳಗಾವಿ (ಸೆ.30): ಬರದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾಂ ಶುಗರ್ಸ್‌ ವತಿಯಿಂದ ಕೈಗೊಳ್ಳಲಾದ ಮೋಡ ಬಿತ್ತನೆ ಯಶಸ್ವಿಯಾದರೇ ಸರ್ಕಾರ ಅನುಮತಿ ಕೊಟ್ಟರೆ ಮಡಿಕೇರಿ, ಹಾಸನ ಜಿಲ್ಲೆಯಲ್ಲಿ (ಕಾವೇರಿ ಭಾಗದಲ್ಲಿ) ಮೋಡ ಬಿತ್ತನೆ ಮಾಡಲಾಗುವುದು ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹುದಲಿಯ ಬೆಳಗಾಂ ಶುಗರ್ಸ್ ಪ್ರೈ.ಲಿಮಿಟಡ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಮೋಡ ಬಿತ್ತನೆ ಮಾಡಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಧರಿಸಿದ್ದೆ, ಆದರೆ, ಮೋಡ ಬಿತ್ತನೆ ಕನಸು ಇಂದು ಈಡೇರಿದೆ.ಮೋಡ ಬಿತ್ತನೆಗೆ ಕೇಂದ್ರದಿಂದ ಅನುಮತಿ ಪಡೆಯಲು 20 ದಿನ ಬೇಕಾಯಿತು. ಸೆ.28ಕ್ಕೆ ಅನುಮತಿ ದೊರೆತಿದೆ. ಬೆಳಗಾವಿ ಜಿಲ್ಲಾದ್ಯಂತ 3 ದಿನ ಮೋಡ ಬಿತ್ತನೆಯ ಗುರಿ ಇಟ್ಟುಕೊಂಡಿದ್ದು, ಮೊದಲ ದಿನ ಗೋಕಾಕ ಮತ್ತು ಖಾನಾಪುರದಲ್ಲಿ ಬಿತ್ತನೆ ಕಾರ್ಯಾಚರಣೆ ನಡೆದಿದೆ. ನಾಳೆ, ನಾಡಿದ್ದು ಎಲ್ಲಿ ಮೋಡ ಇರುತ್ತವೆ ಅಲ್ಲಿ ಕಾರ್ಯಾಚರಣೆ ನಡೆಸಲಿದ್ದಾರೆ ಎಂದು ತಿಳಿಸಿದರು.

Tap to resize

Latest Videos

ಇಂಡಿಯಾ ಒಕ್ಕೂಟಕ್ಕಾಗಿ ತಮಿಳುನಾಡಿಗೆ ಕಾವೇರಿ ನೀರು: ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ

ಕೆಲವೊಂದು ಬಾರಿ ಒಂದು ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಿದಾಗ ಮತ್ತೊಂದು ಜಿಲ್ಲೆಯಲ್ಲಿ ಮಳೆಯಾದ ಉದಾಹರಣೆಗಳು ಇವೆ. ಒಟ್ಟಾರೆ ಎಲ್ಲಿ ಮಳೆಯಾದರು ಅಲ್ಲಿಯ ರೈತರಿಗೆ ಅನುಕೂಲವಾದರೆ ಸಾಕು. ಪ್ರತಿ ದಿನ ಮೂರು ಗಂಟೆ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. ಒಂದು ಬಾರಿ ವಿಮಾನ ಮೇಲೆ ಹೋದರೆ 3 ಗಂಟೆ ಆಕಾಶದಲ್ಲಿ ಇರುವ ಸಾಮರ್ಥ್ಯ ಇದೆ. 9 ರಿಂದ 10 ಗಂಟೆ ಮೋಡ ಬಿತ್ತನೆ ಮಾಡಬೇಕೆಂದು ನಮ್ಮ ಗುರಿ ಇದೆ. ಮೋಡ ಬಿತ್ತನೆಯಿಂದ ಜಿಲ್ಲೆಯಲ್ಲಿ ಮಳೆಯಾದರೆ ಬಹಳ ಒಳ್ಳೆಯದು ಎಂದರು. ರಾಣೆಬೆನ್ನೂರ ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆಯಿಂದ 5 ರಿಂದ 30 ಎಂಎಂ ವರೆಗೆ ಮಳೆಯಾಗಿದೆ. 

ಇಲ್ಲಿಯೂ ಅದೇ ರೀತಿ ಮೋಡ ಬಿತ್ತನೆ ನಡೆಯುತ್ತಿದೆ. ಕ್ಯಾಪ್ಟನ್ ವೀರೇಂದ್ರ ಸಿಂಗ್, ಕ್ಯಾಪ್ಟನ್ ಆದರ್ಶ ಪಾಂಡೆ ನೇತೃತ್ವದಲ್ಲಿ ವಿಟಿ-ಕೆಸಿಎಂ ವಿಮಾನವು ಮೋಡ ಬಿತ್ತನೆ ಮಾಡಲಿದೆ. ಒಂದು ವೇಳೆ ನಿರ್ದಿಷ್ಟ ಪ್ರದೇಶದ ವ್ಯಾಪ್ತಿಯಲ್ಲಿ ಮೋಡಗಳು ಇದ್ದರೇ ರಾಸಾಯನಿಕ ಸಿಂಪಡಣೆ ಮಾಡಿದ 5 ನಿಮಿಷಗಳಲ್ಲಿ ಮಳೆ ಬರಬಹುದು ಎಂದು ಮಾಹಿತಿ ನೀಡಿದರು. ಬೆಳಗಾವಿ ಉತ್ತರ ಶಾಸಕ ಆಸೀಫ್‌ (ರಾಜು) ಸೇಠ್‌, ವಿಧಾನ ಪರಿಷತ್‌ ಸದಸ್ಯ ಚೆನ್ನರಾಜ ಹಟ್ಟಿಹೊಳಿ, ಮಾಜಿ ಶಾಸಕ ಎಸ್.ಬಿ.ಘಾಟಗೆ, ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಸತೀಶ್‌ ಶುಗರ್ಸ್‌ ಲಿ. ನಿರ್ದೇಶಕ ರಾಹುಲ್‌ ಜಾರಕಿಹೊಳಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್‌ ಹಣಮನ್ನವರ್‌ ಇತರರು ಇದ್ದರು.

ಬೆಳಗಾವಿಯಲ್ಲಿ ಮೋಡ ಬಿತ್ತನೆಗೆ ಸಚಿವ ಸತೀಶ್ ಚಾಲನೆ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಹುದಲಿಯ ಬೆಳಗಾಂ ಶುಗರ್ಸ್ ಪ್ರೈ.ಲಿಮಿಟಡ್ ಮೋಡ ಬಿತ್ತನೆಗೆ ಮುಂದಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು. ಮೋಡ ಬಿತ್ತನೆ ಕಾರ್ಯಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರ(ಡಿಜಿಸಿಎ) ಕಚೇರಿಯು ಗ್ರೀನ್ ಸಿಗ್ನಲ್ ನೀಡಿದೆ. ಸೆ.29 ಹಾಗೂ ಸೆ.30 ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ.

ಕ್ಯಾಪ್ಟನ್ ವೀರೇಂದ್ರ ಸಿಂಗ್ ಹಾಗೂ ಕ್ಯಾಪ್ಟನ್ ಆದರ್ಶ ಪಾಂಡೆ ನೇತೃತ್ವದಲ್ಲಿ ವಿಟಿ-ಕೆಸಿಎಂ ವಿಮಾನವು ಮೋಡ ಬಿತ್ತನೆ ಮಾಡಲಿದೆ. ಕಡಿಮೆ ಎತ್ತರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಎಸಿಎಲ್-2 ಅಯೋಡೈಡ್ ಹಾಗೂ 20 ಸಾವಿರ ಅಡಿ ಮೇಲೆ ಎತ್ತದರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಲ್ವರ್ ಐಯೋಡೈಡ್ ರಾಸಾಯನಿಕ ಸಿಂಪಡಿಸಲಾಗುತ್ತದೆ. ಒಂದು ವೇಳೆ ನಿರ್ದಿಷ್ಟ ಪ್ರದೇಶದ ವ್ಯಾಪ್ತಿಯಲ್ಲಿ ಮೋಡಗಳು ಇದ್ದರೇ ರಾಸಾಯನಿಕ ಸಿಂಪಡಣೆ ಮಾಡಿದ 5 ನಿಮಿಷಗಳಲ್ಲಿ ಮಳೆ ಬರಬಹುದು. ಒಂದು ವೇಳೆ ಮೋಡಗಳು ಇರದಿದ್ದಲ್ಲಿ ಹಾಗೇ ಹಿಂದಿರುಗಲಾಗುತ್ತದೆ ಎಂದು ಮೋಡ ಬಿತ್ತನೆ ವಿಮಾನದ ತಾಂತ್ರಿಕ ಸಿಬ್ಬಂದಿ ತಿಳಿಸಿದರು.

ರಾಜಕಾರಣವು ಚುನಾವಣೆಗೆ ಮಾತ್ರ ಮೀಸಲಾಗಿರಲಿ: ಸಚಿವ ಬೈರತಿ ಸುರೇಶ್‌

ಬೆಳಗಾವಿಯಲ್ಲಿ ಮೋಡಗಳು ಕಂಡುಬಂದಿರುವುದರಿಂದ ಮೋಡ ಬಿತ್ತನೆಗೆ ಪೂರಕ ವಾತಾವರಣವಿದೆ. 5 ರಿಂದ 10 ಸಾವಿರ ಅಡಿಗಳ ಮೇಲೆ ಮೋಡಗಳನ್ನು ಆಕರ್ಷಿಸಲು ಸಿಲ್ವರ್ ಐಯೋಡೈಡ್ ರಾಸಾಯನಿಕವನ್ನು ಆಗಸದಲ್ಲಿ ಸಿಂಪಡಣೆ ಮಾಡಲಾಗುತ್ತದೆ ಎಂದು ಸಂಸ್ಥೆಯ ಅಧಿಕಾರಿಗಳು ವಿವರಿಸಿದರು. ಈ ಸಂದರ್ಭದಲ್ಲಿ ಶಾಸಕ ಆಸಿಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕಾಂಗ್ರೆಸ್‌ನ ಬೆಳಗಾವಿ ಗ್ರಾಮೀಣ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಮಾಜಿಶಾಸಕ ಶ್ಯಾಮ್ ಘಾಟಗೆ, ರಾಹುಲ್ ಜಾರಕಿಹೊಳಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

click me!