
ಬೆಂಗಳೂರು [ನ.08]: ಸರ್ಕಾರಿ ನೌಕರರ ವರ್ಗಾವಣೆಯನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಅಗತ್ಯವಿದ್ದಲ್ಲಿ ಮಾತ್ರ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ನಡೆಸುವಂತೆ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳಿಗೂ ಸೂಚನೆ ನೀಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದ ನಂತರ ಮಾಡುವ ನೌಕರರು ಅಥವಾ ಅಧಿಕಾರಿಗಳ ವರ್ಗಾವಣೆಗೆ ಮುಖ್ಯಮಂತ್ರಿ ಗಳ ಪೂರ್ವಾನುಮತಿ ಅಗತ್ಯ ಎಂದು ಹಿಂದೆ 2013 ರಲ್ಲಿಯೇ ಈ ಸಂಬಂಧ ನಿರ್ಧಾರ ಕೈಗೊಂಡು ಆದೇಶ ಹೊರಡಿಸಲಾಗಿತ್ತು.
ಸಿಎಂ ಒಪ್ಪಿದರೆ ಮಾತ್ರ ಸರ್ಕಾರಿ ನೌಕರರ ವರ್ಗ
ಈ ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿ ಜುಲೈ 10 ರಂದು ಮುಗಿದ ನಂತರ ಅಕ್ಟೋಬರ್ 10 ರವರೆಗೆ ಆಯಾ ಸಚಿವರೇ ವರ್ಗಾವಣೆ ವಿಷಯದಲ್ಲಿ ನಿರ್ಧಾರ ಕೈಗೊಳ್ಳುವ ಅಧಿಕಾರ ನೀಡಲಾಗಿತ್ತು.
ಇದೀಗ ಆ ಅಧಿಕಾರವನ್ನು ಮೊಟಕುಗೊಳಿಸಿ ವರ್ಗಾವಣೆ ಅನಿವಾರ್ಯ ಇದ್ದಲ್ಲಿ ಮಾತ್ರ ಮುಖ್ಯಮಂತ್ರಿಗಳ ಅನುಮೋದನೆ ಪಡೆಯಬೇಕು ಎಂದು ಸೂಚಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ