ದೀಪಾವಳಿ ನೆಪ ಹೇಳದೆ ಸಂತ್ರಸ್ತರಿಗೆ ನೆರವಾಗಿ: ಸಿಎಂ ಸೂಚನೆ

By Kannadaprabha NewsFirst Published Oct 24, 2019, 11:35 AM IST
Highlights

ಪ್ರವಾಹಪೀಡಿತ 16 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಪ್ರವಾಹಪೀಡಿತ 16 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚುಟುಕು ವಿಡಿಯೋ ಸಂವಾದ ನಡೆಸಿದ್ದಾರೆ. ಸಿಎಂ ಏನೇನು ಸೂಚನೆ ನೀಡಿದ್ದಾರೆ, ಅವರು ನೀಡಿದ ನಿರ್ದೇಶನಗಳೇನೇನು ಎಂದು ತಿಳಿಯಲು ಈ ಸುದ್ದಿ ಓದಿ.

ಬೆಂಗಳೂರು(ಅ.24): ರಾಜ್ಯದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಎದುರಾಗಿರುವುದರಿಂದ ಪ್ರವಾಹ ಪಿಡೀತ ಪ್ರದೇಶಗಳಲ್ಲಿ ದೀಪಾವಳಿ ರಜೆಯ ನೆಪ ಹೇಳಿ ಕರ್ತವ್ಯದಿಂದ ವಿಮುಖವಾಗದೆ ಜನತೆಯ ಸಂಕಷ್ಟಕ್ಕೆ ಸ್ಪಂದಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸರ್ಕಾರದ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ರಾಜ್ಯದಲ್ಲಿ ಮತ್ತೆ ಎದುರಾಗಿರುವ ಪ್ರವಾಹ ಪರಿಸ್ಥಿತಿ ಮತ್ತು ಪರಿಹಾರ ಕಾರ್ಯಗಳ ಕುರಿತು ಚರ್ಚಿಸುವ ಸಂಬಂಧ ವಿಧಾನಸೌಧದಲ್ಲಿ ಪ್ರವಾಹಪೀಡಿತ 16 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚುಟುಕು ವಿಡಿಯೋ ಸಂವಾದ ನಡೆಸಿದ ಯಡಿಯೂರಪ್ಪ ಅವರು ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಕನ್ನಡಿಗರಿಗೆ ಕ್ಲರ್ಕ್ ಪರೀಕ್ಷೆಯಲ್ಲೂ ‘ಕೇರಳ’ ತಾರತಮ್ಯ!

ಪ್ರವಾಹದಿಂದಾಗಿ 13 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 10038 ಮನೆಗಳಿಗೆ ಹಾನಿಯಾಗಿದೆ. ಮೃತರ ಕುಟುಂಬಗಳಿಗೆ ಮತ್ತು ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರ ವಿತರಿಸಬೇಕು. ಸಂತ್ರಸ್ತರ ರಕ್ಷಣಾ ಕಾರ್ಯ ಚುರುಕುಗೊಳಿಸಿ ಹೆಚ್ಚುವರಿ ನೆರವು ಬೇಕಾದಲ್ಲಿ ಕೂಡಲೇ ಒದಗಿಸಲಾಗುವುದು. ಈಗಾಗಲೇ ಎನ್‌ಡಿಆರ್‌ಎಫ್‌ ಆರು ತಂಡಗಳು ಮತ್ತು ರಾಯಚೂರಿನಲ್ಲಿ ಸೇನೆಯ ತಂಡವೂ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.

ಸಂತ್ರಸ್ತರಿಗಾಗಿ 28 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು, ಔಷಧಿ, ವೈದ್ಯಕೀಯ ನೆರವು ಇತ್ಯಾದಿಗಳನ್ನು ಒದಗಿಸಬೇಕು. ಹಿಂದಿನ ದೂರುಗಳನ್ನು ಗಮನದಲ್ಲಿಟ್ಟುಕೊಂಡು ವ್ಯವಸ್ಥಿತವಾಗಿ ಸೌಲಭ್ಯಗಳನ್ನು ಕಲ್ಪಿಸಬೇಕು. ಇದಕ್ಕಾಗಿ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಪ್ರತಿ ಪರಿಹಾರ ಕೇಂದ್ರಕ್ಕೆ ನಿಯೋಜಿಸಬೇಕು. ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ಒಟ್ಟು 1027.54 ಕೊಟಿ ರು. ಲಭ್ಯ ಇದ್ದು, ಪರಿಹಾರ ಕಾರ್ಯಕ್ಕೆ ಅನುದಾನದ ಕೊರತೆ ಇಲ್ಲ. ಹೆಚ್ಚುವರಿ ಅನುದಾನ ಬೇಕಾದರೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಲ್ಲಿ ಬಿಡುಗಡೆಗೆ ಕ್ರಮಕೈಗೊಳ್ಳಲಾಗುತ್ತದೆ ಎಂದರು.

ಹರಿಯಾಣದ ಕುಮಾರಸ್ವಾಮಿ ಆಗ್ತಾರಾ ದುಷ್ಯಂತ್: ದೋಸ್ತಿ ಬಯಸಿದೆ ಕಾಂಗ್ರೆಸ್!

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮೇ ನಾರಾಯಣ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌, ಕಾರ್ಯದರ್ಶಿ ಎಸ್‌.ಸೆಲ್ವಕುಮಾರ್‌, ಕಂದಾಯ ಇಲಾಖೆ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ಅನಿಲ್‌ ಕುಮಾರ್‌ ಇತರರು ಉಪಸ್ಥಿತರಿದ್ದರು.

10 ನಿಮಿಷದ ತರಾತುರಿ ಸಂವಾದ

ರಾಜ್ಯದಲ್ಲಿ ಮತ್ತೆ ಎದುರಾಗಿರುವ ಪ್ರವಾಹ ಪರಿಸ್ಥಿತಿ ಮತ್ತು ಪರಿಹಾರ ಕಾರ್ಯಗಳ ಕುರಿತು ಚರ್ಚಿಸುವ ಸಂಬಂಧ ಕರೆಯಲಾಗಿದ್ದ ಜಿಲ್ಲಾಧಿಕಾರಿಗಳೊಂದಿಗಿನ ವಿಡಿಯೋ ಸಂವಾದವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಕೇವಲ ಹತ್ತು ನಿಮಿಷಗಳಲ್ಲೇ ಮುಗಿಸಿದರು.

ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ಸಭೆ ಕರೆಯಲಾಗಿತ್ತು. ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾದ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತ್ಯುತ್ಸವ ಮುಗಿಸಿ ವಿಡಿಯೋ ಸಂವಾದ ಕಾರ್ಯಕ್ರಮಕ್ಕೆ ಆಗಮಿಸಿದರು. ಪ್ರವಾಹ ಪೀಡಿತ 16 ಜಿಲ್ಲೆಯ ಜಿಲ್ಲಾಧಿಕಾರಿಗಳು ಪ್ರವಾಹದಿಂದಾಗಿರುವ ನಷ್ಟಮತ್ತು ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿಗಳಿಗೆ ಮಾಹಿತಿ ಒದಗಿಸಲು ವರದಿಯನ್ನು ಸಿದ್ಧಪಡಿಸಿಕೊಂಡಿದ್ದರು.

ಡಿಕೆಶಿಗೆ ಬೇಲ್: ಎಲ್ಲರಿಗೂ ಒಳ್ಳೆಯ ಕಾಲ, ಕೆಟ್ಟ ಕಾಲ ಬರುತ್ತೆ ಎಂದ ಡಿಸಿಎಂ

ಸಭೆ ಆರಂಭವಾಗುತ್ತಿದ್ದಂತೆ ಮುಖ್ಯಮಂತ್ರಿಗಳಿಗೆ ಬಿಜೆಪಿ ಕಚೇರಿಯಿಂದ ನಿರಂತರವಾಗಿ ಕರೆ ಬರಲಾರಂಭಿಸಿತು. ಉಪಚುನಾವಣೆ ಹಿನ್ನೆಲೆಯಲ್ಲಿ ಚರ್ಚಿಸುವ ಸಂಬಂಧ ಕಚೇರಿಯಿಂದ ಆಹ್ವಾನ ಬಂದಿದ್ದ ಕಾರಣಕ್ಕಾಗಿ ಜಿಲ್ಲಾಧಿಕಾರಿಗಳೊಂದಿಗಿನ ಸಭೆಯಿಂದ 10 ನಿಮಿಷಗಳಲ್ಲಿಯೇ ನಿರ್ಗಮಿಸಿದರು. ಬಳಿಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್‌ ಅವರು ಸಭೆ ಮುಂದುವರಿಸಿ ಪ್ರವಾಹ ಪೀಡಿತ ಸ್ಥಳದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ದೇಶನ ನೀಡಿದರು.

click me!