ಕುಡಿಯುವ ನೀರಿನ ಯೋಜನೆಗೆ 1810 ಕೋಟಿ: ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ

By Govindaraj S  |  First Published Jul 23, 2022, 12:20 PM IST

ಜಲಜೀವನ್‌ ಮಿಷನ್‌ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜಿನ ಯೋಜನೆಯನ್ನು 1810.96 ಕೋಟಿ ರು. ಮೊತ್ತದಲ್ಲಿ ಅನುಷ್ಠಾನಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ಅನುಮೋದನೆ ನೀಡಿದೆ. 


ಬೆಂಗಳೂರು (ಜು.23): ಜಲಜೀವನ್‌ ಮಿಷನ್‌ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜಿನ ಯೋಜನೆಯನ್ನು 1810.96 ಕೋಟಿ ರು. ಮೊತ್ತದಲ್ಲಿ ಅನುಷ್ಠಾನಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ಅನುಮೋದನೆ ನೀಡಿದೆ. ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. 

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇರೂರು ಮತ್ತು ಇತರೆ 14 ಗ್ರಾಮಗಳ ಮತ್ತು ಹುಲಿಹೈದರ್‌ ಮತ್ತು ಇತರೆ 12 ಗ್ರಾಮಗಳ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ಯೋಜನೆಯನ್ನು 43.15 ಕೋಟಿ ರು. ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಯಿತು ಎಂದು ಹೇಳಿದರು. ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಸತ್ತಿ ಮತ್ತು ಇತರೆ 8 ಗ್ರಾಮಗಳಿಗೆ ಯೋಜನೆಗೆ 71 ಕೋಟಿ ರು. ಪರಿಷ್ಕೃತ ಅಂದಾಜಿಗೆ ಒಪ್ಪಿಗೆ ನೀಡಲಾಗಿದೆ. 

Tap to resize

Latest Videos

ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನ: ಶಾಲಾ ಮಕ್ಕಳಿಗೆ ಸಿಕ್ತು ಗುಡ್‌ ನ್ಯೂಸ್

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಹನೂರು ವಿಧಾನಸಭಾ ಕ್ಷೇತ್ರದ 291 ಜನವಸತಿಗಳಿಗೆ 268 ಕೋಟಿ ರು. ಪರಿಷ್ಕೃತ ಅಂದಾಜಿಗೆ ಅನುಮೋದನೆ ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹೊಸಹಳ್ಳಿ ಮತ್ತು ಇತರೆ 20 ಜನವಸತಿಗಳು ಮತ್ತು ಚನ್ನಗಿರಿ ತಾಲೂಕಿನ ಜೆ.ಬಿ.ಹಳ್ಳಲಿ ಮತ್ತು ಇತರೆ 6 ಜನವಸತಿಗಳಿಗೆ 49 ಕೋಟಿ ರು. ಮೊತ್ತವನ್ನು ಯೋಜನೆಗೆ ಒಪ್ಪಿಗೆ ದೊರೆತಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಹಾರಕನಾಳು ಮತ್ತು ಇತರೆ 29 ಗ್ರಾಮಗಳಿಗೆ ಯೋಜನೆಯನ್ನು 34.81 ಕೋಟಿ ರು. ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್‌ ಮತ್ತು 61 ಜನವಸತಿಗಳಿಗೆ ಕುಡಿಯುವ ನೀರು ಯೋಜನೆಗೆ 110 ಕೋಟಿ ರು. ಮೊತ್ತದಲ್ಲಿ ಅನುಷ್ಠಾನಗೊಳಿಸಲು ಒಪ್ಪಿಗೆ ಸಿಕ್ಕಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯರಝರ್ವಿ ಮತ್ತು ಇತರೆ 30 ಗ್ರಾಮಗಳಿಗೆ, ಬೆಳಗಾವಿಗೆ ತಾಲೂಕಿನ 11 ಗ್ರಾಮಗಳಿಗೆ ಯೋಜನೆಯ ಅನುಷ್ಠಾನಕ್ಕಾಗಿ 410 ಕೋಟಿ ರು. ಮತ್ತು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೇಗಾಂವ ಮತ್ತು ಇತರೆ 16 ಗ್ರಾಮಗಳಿಗೆ, ಖಾನಾಪೂರ ತಾಲೂಕಿನ 104 ಗ್ರಾಮಗಳಿಗೆ ಯೋಜನೆ ಜಾರಿಗಾಗಿ 565 ಕೋಟಿ ರು. ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಮಹದಾಯಿಗಾಗಿ ಸಿಎಂಗೆ ರಕ್ತದಲ್ಲಿ ಅನ್ನದಾತನ ಪತ್ರ

ಸನ್ನಡತೆ ಕೈದಿಗಳ ಬಿಡುಗಡೆ ಮಾರ್ಗಸೂಚಿಗೆ ತಿದ್ದುಪಡಿ: ರಾಜ್ಯದ ವಿವಿಧ ಕೇಂದ್ರ ಕಾರಾಗೃಹದಲ್ಲಿನ ಜೀವಾವಧಿ ಶಿಕ್ಷಾ ಬಂಧಿಗಳನ್ನು ಸನ್ನಡತೆಯ ಆಧಾರದಲ್ಲಿ ಅವಧಿಪೂರ್ವ ಬಿಡುಗಡೆಗೊಳಿಸುವ ಕುರಿತು ಹೊಸ ಮಾರ್ಗಸೂಚಿ ಹೊರಡಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಏಪ್ರಿಲ್‌ 2020ರ ಸರ್ಕಾರಿ ಆದೇಶಕ್ಕೆ ತಿದ್ದುಪಡಿ ಮಾಡಿ ಕೆಲವು ಹೆಚ್ಚುವರಿ ಅಂಶಗಳನ್ನು ಸೇರ್ಪಡೆ ಮಾಡಲು ತೀರ್ಮಾನಿಸಲಾಗಿದೆ. ಫೋಕ್ಸೋ, ಮಹಿಳೆಯರ ಮತ್ತು ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ, ಕೊಲೆ ಪ್ರಕರಣಗಳ ಕೈದಿಗಳನ್ನು ಹೊರತುಪಡಿಸಿ ಇತರೆ ಕೈದಿಗಳ ಬಿಡುಗಡೆಗೆ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

click me!