* ಸುಪ್ರೀಂನಿಂದ ಯಾವುದೇ ತಡೆಯಾಜ್ಞೆ ಇಲ್ಲ
* ತಮಿಳುನಾಡಿನ ಹೇಳಿಕೆಗೆ ಪ್ರತಿಕ್ರಿಯಿಸಬೇಕಿಲ್ಲ
* ಜಲ ನಿರ್ವಹಣೆ ಪ್ರಾಧಿಕಾರಕ್ಕೆ ಎಲ್ಲಾ ಅಧಿಕಾರವೂ ಇದೆ
ದಾವಣಗೆರೆ(ಜೂ.17): ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾವೇರಿ ಜಲ ನಿರ್ವಹಣೆ ಪ್ರಾಧಿಕಾರದ ಮುಂದೆ ರಾಜ್ಯದ ವಾದ ಮಂಡಿಸಿದ್ದು, ಮುಂದಿನ ವಾರ ನಡೆಯುವ ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ವಿಸ್ತೃತ ಯೋಜನಾ ವರದಿಗೆ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಿನ್ನೆ(ಗುರುವಾರ) ನಗರದ ಜಿಎಂಐಟಿ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಸುಪ್ರೀಂಕೋರ್ಟ್‌ನಲ್ಲಿ ಯಾವುದೇ ತಡೆಯಾಜ್ಞೆಯೂ ಇಲ್ಲ. ಈ ವಿಚಾರದಲ್ಲಿ ನೆರೆಯ ತಮಿಳನಾಡಿನ ಎಲ್ಲಾ ಹೇಳಿಕೆಗಳಿಗೆ ನಾವು ಪದೇಪದೇ ಉತ್ತರ ಕೊಡಬೇಕಾದ ಅವಶ್ಯಕತೆ ಇಲ್ಲ ಅಂತ ತಿಳಿಸಿದ್ದಾರೆ.
Davanagere: ಜನರೇ ಕಾಂಗ್ರೆಸನ್ನು ಮನೆಗೆ ಚಲೋ ಮಾಡಲಿದ್ದಾರೆ: ಸಿಎಂ ಬೊಮ್ಮಾಯಿ ವ್ಯಂಗ್ಯ
ಜಲ ನಿರ್ವಹಣೆ ಪ್ರಾಧಿಕಾರಕ್ಕೆ ಎಲ್ಲಾ ಅಧಿಕಾರವೂ ಇದೆ. ಮುಂದಿನ ವಾರ ಪ್ರಾಧಿಕಾರ ಸಭೆ ಕರೆಯುವ ಸಾಧ್ಯತೆ ಇದೆ. ಅಂದಿನ ಸಭೆಯಲ್ಲಿ ರಾಜ್ಯದ ಬೇಡಿಕೆಗೆ ಸಕಾರಾತ್ಮಕ ಸ್ಪಂದನೆ ಸಿಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.