ಬಿಎಸ್‌ವೈ ಅವಧಿಯ 19 ಮಂದಿ ಅಧಿಕಾರಿಗಳಿಗೆ ಸಿಎಂ ಗೇಟ್‌ಪಾಸ್‌

By Kannadaprabha News  |  First Published Aug 2, 2021, 7:46 AM IST
  • ಬಿ.ಎಸ್‌.ಯಡಿಯೂರಪ್ಪ ಅವರ ಅವಧಿಯ 19 ಅಧಿಕಾರಿಗಳಿಗೆ ಗೇಟ್ ಪಾಸ್
  • ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಗೇಟ್ ಪಾಸ್
  • ಕಾರ್ಯಮುಕ್ತಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ

ಬೆಂಗಳೂರು (ಆ.02): ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ನಿಯೋಜನೆ ಮತ್ತು ಗುತ್ತಿಗೆ ಆಧಾರದಲ್ಲಿ ಮುಖ್ಯಮಂತ್ರಿ ಸಚಿವಾಲಯದಲ್ಲಿ ಕರ್ತವ್ಯದಲ್ಲಿದ್ದ 19 ಅಧಿಕಾರಿಗಳನ್ನು ಸೋಮವಾರದಿಂದ ಜಾರಿಗೆ ಬರುವಂತೆ ಕಾರ್ಯಮುಕ್ತಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದರಿಂದ ಅವರ ಸಚಿವಾಲಯದ ಹಿಂದಿನ ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. 

Tap to resize

Latest Videos

undefined

ಕರ್ನಾಟಕ ಸಂಪುಟ ವಿಸ್ತರಣೆ : 3 ಹಳಬ ಔಟ್, 6 ಹೊಸಬರು ಇನ್

ಸಿಎಂ ಸಚಿವಾಲಯಕ್ಕೆ ಹೊಸದಾಗಿ ಅಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳಲು ಬೊಮ್ಮಾಯಿ ಅವರಿಗೆ ಇದರಿಂದ ಅನುಕೂಲವಾಗಲಿದೆ.

ಇನ್ನು ಇದೇ ವೇಳೆ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಚರ್ಚೆಯು ಜೋರಾಗಿದೆ. ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಸಿಎಂ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಶೀಘ್ರದಲ್ಲೇ ರಾಜ್ಯದಲ್ಲಿ ನೂತನ ಸಂಪುಟ ರಚನೆಯಾಗುವ ಸಾಧ್ಯತೆ ಇದ್ದು, ಇದೇ ವೇಳೆ ಕೆಲ ಅಧಿಕಾರಿಗಳಿಗೂ ಗೇಟ್ ಪಾಸ್ ನೀಡಲಾಗಿದೆ. 

click me!