Karnataka ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಸುಧಾರಣೆಗೆ ಸಿಎಂ ಮಹತ್ವದ ಸಭೆ

Kannadaprabha News   | Asianet News
Published : Mar 04, 2022, 02:08 AM IST
Karnataka ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಸುಧಾರಣೆಗೆ ಸಿಎಂ ಮಹತ್ವದ ಸಭೆ

ಸಾರಾಂಶ

ವೈದ್ಯಕೀಯ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗುವ ವಿದ್ಯಾರ್ಥಿಗಳು ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಸುಧಾರಣೆಗೆ ಕ್ರಮ ಆರೋಗ್ಯ ಸಚಿವ ಕೆ.ಸುಧಾಕರ್ ಅವರೊಂದಿಗೆ ಮುಖ್ಯಮಂತ್ರಿ ಸಭೆ

ಬೆಂಗಳೂರು (ಮಾ. 4): ದುಬಾರಿ ಶುಲ್ಕ, ದುಡ್ಡು ಕೊಟ್ಟರೂ ಸಿಗದ ಸೀಟುಗಳು ಈ ಎಲ್ಲ ಕಾರಣಗಳಿಂದಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ನಂಥ (Ukraine) ವಿದೇಶಗಳನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ (State Governament) ಸಿಹಿ ಸುದ್ದಿ ನೀಡಿದೆ. ಯುದ್ಧಪೀಡಿತ ಉಕ್ರೇನ್ ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟವನ್ನು ಕಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai), ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಸುಧಾರಣೆಯ (medical education reform) ನಿಟ್ಟಿನಲ್ಲಿ ಗುರುವಾರ ಮಹತ್ವದ ಸಭೆ ನಡೆಸಿದ್ದಾರೆ.

ರಷ್ಯಾ ಉಕ್ರೇನ್ ನಡುವಿನ ಯುದ್ದದಲ್ಲಿ ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳು ಹೆಚ್ಚು ಸಿಲುಕಿಕೊಂಡಿರುವ ನಡುವೆಯೇ ಸಿಎಂ ಬೊಮ್ಮಾಯಿ ಈ ಮಹತ್ವದ ಸಭೆ ನಡೆಸಿದ್ದು, ಮುಂದಾಗಲಿರುವ ಬದಲಾವಣೆಯ ಬಗ್ಗೆ ಕುತೂಹಲ ಉಳಿದುಕೊಂಡಿದೆ. ಮಧ್ಯಾಹ್ನ ರೇಸ್ ಕೋರ್ಸ್(Race Course Home) ನಿವಾಸದಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್ (Health Minister K Sudhakar) ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಸಿಎಂ ದೀರ್ಘ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯ ಸುಧಾರಣೆ, ಮೂಲಭೂತ ಸೌಕರ್ಯಗಳು, ಕಡಿಮೆ ದರದಲ್ಲಿ ಎಲ್ಲರಿಗೂ ವೈದ್ಯಕೀಯ ಶಿಕ್ಷಣ ದೊರೆಯುವ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

ಈ ವಿಚಾರವನ್ನು ಡಾ.ಕೆ.ಸುಧಾಕರ್ ಟ್ವಿಟರ್ (Twitter) ನಲ್ಲಿಯೂ ಹಂಚಿಕೊಂಡಿದ್ದಾರೆ. "ಕಳೆದ ಏಳು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಗುಣಾತ್ಮಕ ಬದಲಾವಣೆ ತಂದಿದೆ.  ರಾಜ್ಯದಲ್ಲಿಯೂ ಕಳೆದ ಎರಡು ವರ್ಷದ ಬಿಜೆಪಿ ಸರ್ಕಾರದ ಅವಧಿಯಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಹಲವಾರು ಕ್ರಮ ಕೈಗೊಂಡಿದೆ" ಎಂದು ಬರೆದುಕೊಂಡಿದ್ದಾರೆ.


ಏಮ್ಸ್ ಗಳ ಸಂಖ್ಯೆಯಲ್ಲಿ ಹೆಚ್ಚಳ: ವೈದ್ಯಕೀಯ ಶಿಕ್ಷಣ ವ್ಯವಸ್ಥೆಯಲ್ಲಿ ಸರ್ಕಾರ ಈಗಾಗಲೇ ತಂದಿರುವ ಬದಲಾವಣೆಗಳ ಬಗ್ಗೆ ಕೂಡ ಸುಧಾಕರ್ ಹೇಳಿದ್ದಾರೆ. 2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಬರುವ ಮುನ್ನ 387 ವೈದ್ಯಕೀಯ ಕಾಲೇಜುಗಳಿದ್ದವು (Medical Collage). ಕಳೆದ ಏಳು ವರ್ಷಗಳಲ್ಲಿ ಈ ಸಂಖ್ಯೆ 586ಕ್ಕೆ ಏರಿದೆ. ಒಟ್ಟಾರೆ ದೇಶದ ವೈದ್ಯಕೀಯ ಕಾಲೇಜುಗಳ ಸಂಖ್ಯೆಯಲ್ಲಿ ಶೇ. 54ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

NEET Exam ನವೀನ್ ಸಾವಿನ ಬೆನ್ನಲ್ಲೇ ನೀಟ್ ವಿರುದ್ಧ ಸಮರ ಸಾರಿದ ಕುಮಾರಸ್ವಾಮಿ
ಇನ್ನು ಇಡೀ ದೇಶದಲ್ಲಿ ಕೇವಲ 7 ಏಮ್ಸ್ ಗಳಿದ್ದ ಹಂತದಲ್ಲಿ ಇಂದು 22 ಏಮ್ಸ್ ಗಳಿವೆ (AIMS) ಎಂದು ಮಾಹಿತಿ ನೀಡಿದ್ದಾರೆ. ಇನ್ನು 2014ರವರೆಗೂ ದೇಶಲ್ಲಿ ಕೇವಲ 82 ಸಾವಿರ ವೈದ್ಯಕೀಯ ಪದವಿ ಹಾಗೂ ಸ್ನಾತಕೋತ್ತರ ಸೀಟ್ ಗಳಿದ್ದವು. ಈಗ ಅದರ ಸಂಖ್ಯೆಯನ್ನು 1.48 ಲಕ್ಷ ಸೀಟ್ ಗಳಗೆ ಏರಿಕೆ ಮಾಡಲಾಗಿದೆ ಎಂದಿದ್ದಾರೆ.

Karnataka Budget 2022 ಆರ್ಥಿಕ ಮುಗ್ಗಟ್ಟಿನ ಮಧ್ಯೆ ಬೊಮ್ಮಾಯಿ ಫಸ್ಟ್ ಬಜೆಟ್
ರಾಜ್ಯದಲ್ಲಿ ಸರ್ಕಾರ ವೈದ್ಯಕೀಯ ಕಾಲೇಜು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿದ ದಿನದಿಂದಲೂ ವೈದ್ಯಕೀಯ ಶಿಕ್ಷಣದ ಅಭಿವೃದ್ಧಿಗೆ ಶ್ರಮವಹಿಸಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಾವೇರಿ, ಚಿಕ್ಕಮಗಳೂರು, ಯಾದಗಿರಿ ಮತ್ತು ಚಿಕ್ಕಬಳ್ಳಾಾಪುರಗಳಲ್ಲಿ ನಾಲ್ಕು ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗಿದೆ ಎಂದು ಸುಧಾಕರ್ ಮಾಹಿತಿ ನೀಡಿದ್ದು, ಖಾಸಗಿಯವರ ಸಹಭಾಗಿತ್ವದಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಒಂದೊಂದು ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಪ್ರಯತ್ನಿಸಲಾಗಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಾಯಿ ಅವರ ನೇತೃತ್ವದ ಸರ್ಕಾರ ರಾಜ್ಯದಲ್ಲಿ  ಮೆರಿಟ್ ವಿದ್ಯಾರ್ಥಿಗಳಿಗೆ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣ ದೊರೆಯುವಂತೆ ಮಾಡಲು ಎಲ್ಲ ರೀತಿಯ ಪ್ರಯತ್ನ ಮಾಡಲಿದೆ ಎಂದು ತಮ್ಮ ಟ್ವಿಟರ್ ನಲ್ಲಿ‌ ಸುಧಾಕರ್ ಈ‌ ವಿಷಯ ಹಂಚಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ