ಸ್ವಾತಂತ್ರ್ಯದ 75ನೇ ಸಂಭ್ರಮಕ್ಕೆ ಅಮೃತ ಭಾರತಿಗೆ ಕನ್ನಡದಾರತಿ: ಸಿಎಂ ಬೊಮ್ಮಾಯಿ ಚಾಲನೆ

Published : May 29, 2022, 08:12 AM IST
ಸ್ವಾತಂತ್ರ್ಯದ 75ನೇ ಸಂಭ್ರಮಕ್ಕೆ ಅಮೃತ ಭಾರತಿಗೆ ಕನ್ನಡದಾರತಿ: ಸಿಎಂ ಬೊಮ್ಮಾಯಿ ಚಾಲನೆ

ಸಾರಾಂಶ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿರುವ ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನವು ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಒಟ್ಟು 45 ಕಡೆಗಳಲ್ಲಿ ಶನಿವಾರ ನಡೆಯಿತು.

ಬೆಂಗಳೂರು (ಮೇ.29): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿರುವ ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನವು ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಒಟ್ಟು 45 ಕಡೆಗಳಲ್ಲಿ ಶನಿವಾರ ನಡೆಯಿತು. ಜನರಿಗೆ ಸ್ವಾತಂತ್ರ್ಯ ಹೋರಾಟಗಾರರು, ಸ್ವಾತಂತ್ರ್ಯ ಹೋರಾಟಗಳು ನಡೆದ ಸ್ಥಳಗಳನ್ನು ಪರಿಚಯ ಮಾಡಿಕೊಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಅಭಿಯಾನಕ್ಕೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು. ಅದೇ ವೇಳೆ, ಯಾದಗರಿಯ ಸುರಪುರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ ಕುಮಾರ್‌ ಚಾಲನೆ ನೀಡಿದರು.

ರಾಜ್ಯದ ಅನೇಕ ಕಡೆ ಸಂಭ್ರಮ: ಕರ್ನಾಟಕದ ಜಲಿಯನ್‌ ವಾಲಾಬಾಗ್‌ ಎಂದೇ ಖ್ಯಾತವಾದ ಚಿಕ್ಕಬಳ್ಳಾಪುರ ಜಿಲ್ಲೆಯ ವಿಧುರಾಶ್ವತ್ಥದಲ್ಲಿ ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ಧ ತಾಲೂಕಿನ ಬಿದನೂರು ಕೋಟೆ ಆವರಣದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಚಿತ್ರದುರ್ಗದ ಐತಿಹಾಸಿಕ ಕೋಟೆಯ ಮುಂಭಾಗದಲ್ಲಿ ಶಾಸಕ ತಿಪ್ಪಾರೆಡ್ಡಿ ಅಭಿಯಾನವನ್ನು ಉದ್ಘಾಟಿಸಿದರು. ರಾಯಚೂರಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ದಾವಣಗೆರೆಯಲ್ಲಿ ಸಂಸದ ಸಿದ್ದೇಶ್ವರ, ಉಡುಪಿಯಲ್ಲಿ ಸಂಸದ ಪ್ರತಾಪಸಿಂಹ, ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಮಡಿಕೇರಿಯಲ್ಲಿ ಶಾಸಕ ಅಪ್ಪಚ್ಚು ರಂಜನ್‌ ಚಾಲನೆ ನೀಡಿದರು. ತುಮಕೂರು, ರಾಮನಗರ, ಕಲಬುರಗಿ, ಬೀದರ್‌, ರಾಯಚೂರುಗಳಲ್ಲೂ ವೈವಿಧ್ಯಮಯ ಕಾರ್ಯಕ್ರಮಗಳು ನಡೆದವು.

ಪಠ್ಯ ಪುಸ್ತಕ ಪರಿಷ್ಕರಣೆ, ದಿನಕ್ಕೊಂದು ತಿರುವು: ಸಿಎಂ ಮಧ್ಯಪ್ರವೇಶಕ್ಕೆ ಸಾಹಿತಿಗಳ ಆಗ್ರಹ!

75 ಮೀಟರ್‌ ತ್ರಿವರ್ಣ ಧ್ವಜ: ಬೆಂಗಳೂರಿನಲ್ಲಿ ನಡೆದ ಅಭಿಯಾನದಲ್ಲಿ 75 ಮೀಟರ್‌ ಉದ್ದದ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಲಾಯಿತು. ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ಸಂಕಲ್ಪ ವಿಧಿ ಬೋಧಿಸಿದರು. ಇದಕ್ಕೂ ಮುನ್ನ ಸ್ವಾತಂತ್ರ್ಯ ಚೌಕ, ಅಶೋಕ ರಸ್ತೆ ಮೂಲಕ ಜಾನಪದ ಕಲಾತಂಡಗಳೊಂದಿಗೆ ಭಾರತಾಂಬೆಯ ಪುತ್ಥಳಿಯನ್ನು ಬೆಳ್ಳಿ ರಥದಲ್ಲಿಟ್ಟು ವೇದಿಕೆಯವರೆಗೂ ಕರೆತರಲಾಯಿತು. ಮೇಲ್ಮನೆ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ 45 ಕಡೆಗಳಲ್ಲಿ ಈ ಅಭಿಯಾನ ನಡೆದಿದ್ದು, ಚುನಾವಣೆ ಬಳಿಕ 30 ಕಡೆಗಳಲ್ಲಿ ನಡೆಯಲಿದೆ. ಜು.1ರಿಂದ 15ರವರೆಗೆ ‘ಹೋರಾಟದ ನೆಲದಲ್ಲಿ ಒಂದು ದಿನ’ ಎಂಬ ಪ್ರೇರಣಾದಾಯಿ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ.

ಶಿಕ್ಷಣ ಸಂಸ್ಥೆಗಳ ಉನ್ನತೀಕರಣಕ್ಕೆ ಕೈಜೋಡಿಸುವಂತೆ ಆಕ್ಸಿಸ್ ಬ್ಯಾಂಕ್‌ಗೆ Basavaraj Bommai ಮನವಿ

31 ಜಿಲ್ಲೆಗಳಲ್ಲಿ ರಥಯಾತ್ರೆ: ಸ್ವಾತಂತ್ರ್ಯ ಹೋರಾಟ ನಡೆದ ನಾಡಿನ ಪ್ರಮುಖ 15 ಸ್ಥಳಗಳಲ್ಲಿ ದೇಶಭಕ್ತಿ ಬಿಂಬಿಸುವ ಬೀದಿ ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ಆ.1ರಿಂದ 8 ರವರೆಗೆ ರಾಜ್ಯದ ನಾಲ್ಕು ಕಂದಾಯ ಜಿಲ್ಲೆಗಳಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ರಥಯಾತ್ರೆ ನಡೆಸಲಾಗುವುದು. 31 ಜಿಲ್ಲೆಗಳಲ್ಲೂ ಸಂಚರಿಸುವ ರಥಯಾತ್ರೆಗಳು ಆ.9ರಂದು ಬೆಂಗಳೂರನ್ನು ತಲುಪಲಿವೆ. ಆ.9ರಿಂದ 11 ರವರೆಗೆ ಬೆಂಗಳೂರಿನಲ್ಲಿ ಮಹೋತ್ಸವದ ಸಮಾರೋಪ ಸಮಾರಂಭ ನಡೆಯಲಿದೆ. ರಾಜಧಾನಿಯಲ್ಲಿ ಭಾರೀ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಹಲವು ಸಮಿತಿಗಳನ್ನೂ ರಚಿಸಲಾಗಿದೆ. ಆ.9ರಂದು ರಾಜ್ಯದಲ್ಲಿ ಎಲ್ಲರ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ