Karnataka Cabinet Expansion ಸಂಪುಟ ಕಸರತ್ತು ಬೇಡ, ಸಿಎಂ ಬೊಮ್ಮಾಯಿಗೆ ಅಮಿತ್‌ ಶಾ ಸೂಚನೆ!

Published : Feb 08, 2022, 04:17 AM IST
Karnataka Cabinet Expansion ಸಂಪುಟ ಕಸರತ್ತು ಬೇಡ,  ಸಿಎಂ ಬೊಮ್ಮಾಯಿಗೆ ಅಮಿತ್‌ ಶಾ ಸೂಚನೆ!

ಸಾರಾಂಶ

ಪಂಚರಾಜ್ಯ ಚುನಾವಣೆ ಮುಗಿವವರೆಗೆ ಕಾಯಿರಿ ಈಗ ಬದಲಾವಣೆ ಮಾಡಿ ಅನಗತ್ಯ ಗೊಂದಲ ಬೇಡ ಇಂದು ನಡ್ಡಾ-ಸಿಎಂ ಭೇಟಿ: ಬಳಿಕ ಸ್ಪಷ್ಟಚಿತ್ರಣ ಸಂಭವ

ನವದೆಹಲಿ(ಫೆ.07):  ಪಂಚ ರಾಜ್ಯಗಳ ಚುನಾವಣೆ(Five State Election 2022) ಮುಗಿಯುವವರೆಗೆ ರಾಜ್ಯ ಸಂಪುಟ(Karnataka Cabinet Expansion) ಕಸರತ್ತು ಕೈಗೊಳ್ಳುವುದು ಸೂಕ್ತವಲ್ಲ ಎಂಬ ಅಭಿಪ್ರಾಯವನ್ನು ಬಿಜೆಪಿ ಹೈಕಮಾಂಡ್‌(bjp high command) ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆ ಬೇಡಿಕೆ ಹೆಚ್ಚುತ್ತಿರುವ ನಡುವೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommai) ಅವರು ಸೋಮವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ(Amit Shah) ಅವರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದರು.

ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆ ಮಾಡುವ ಮೂಲಕ ಅನಗತ್ಯ ಗೊಂದಲಕ್ಕೆ ಅವಕಾಶ ನೀಡುವುದು ಸರಿಯಲ್ಲ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP nadda) ಅವರ ಜತೆಗೆ ಚರ್ಚೆ ನಡೆಸಿ ಎಂಬ ಸೂಚನೆಯನ್ನು ಅಮಿತ್‌ ಶಾ ಅವರು ಮುಖ್ಯಮಂತ್ರಿಗಳಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Bommai Press conference ದಿಲ್ಲಿಯಲ್ಲಿ ಬೊಮ್ಮಾಯಿ ಸುದ್ದಿಗೋಷ್ಠಿ, ಮೊದಲ ದಿನದ ದಿನಚರಿ ಬಗ್ಗೆ ಮಾಹಿತಿ

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿ ಹೆಚ್ಚುತ್ತಿರುವ ಒತ್ತಡ, ನಿಗಮ-ಮಂಡಳಿ ನೇಮಕ ಹಾಗೂ ರಾಜ್ಯರಾಜಕೀಯ ವಿದ್ಯಮಾನಗಳ ಕುರಿತು ಈ ವೇಳೆ ಉಭಯ ನಾಯಕರು ಪ್ರಮುಖವಾಗಿ ಚರ್ಚೆ ನಡೆಸಿದರು. ಇದರ ಜತೆಗೆ ಸದ್ಯದಲ್ಲೇ ರಾಜ್ಯ ಸರ್ಕಾರ ಮಂಡಿಸಲಿರುವ ಬಜೆಟ್‌(State Budget 2022) ಕುರಿತೂ ಮಾತುಕತೆ ನಡೆಸಿದರು ಎಂದು ಹೇಳಲಾಗಿದೆ.

ಪಂಚ ರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಡ್ಡಾ ಅವರು ಮಂಗಳವಾರ ಗೋವಾಗೆ ತೆರಳುವ ಸಾಧ್ಯತೆ ಇದೆ. ಹೀಗಾಗಿ, ಅದಕ್ಕೂ ಮೊದಲು ಅವರನ್ನು ಭೇಟಿಯಾಗಲು ಮುಖ್ಯಮಂತ್ರಿ ಬೊಮ್ಮಾಯಿ ಅವರು ಪ್ರಯತ್ನ ನಡೆಸುತ್ತಿದ್ದಾರೆ. ಆ ಮಾತುಕತೆ ಬಳಿಕ ಸಂಪುಟ ಕಸರತ್ತಿನ ಬಗ್ಗೆ ಸ್ಪಷ್ಟಚಿತ್ರಣ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.

Basavaraj Bommai: ಸ್ತ್ರೀಯರ ಆತ್ಮರಕ್ಷಣೆ ತರಬೇತಿಗೆ ಪೊಲೀಸ್‌ ಶಾಲೆ ಬಳಕೆ

ಸರ್ಕಾರದ ಸಾಧನೆ ಬಗ್ಗೆ ಶಾ ಶಹಬ್ಬಾಸ್‌:
ಸುಮಾರು 15 ನಿಮಿಷಕ್ಕೂ ಹೆಚ್ಚು ಕಾಲ ಅಮಿತ್‌ ಶಾ ಅವರೊಂದಿಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಇದೇ ವೇಳೆ ವೇಳೆ ತಮ್ಮ ನೇತೃತ್ವದ ರಾಜ್ಯ ಸರ್ಕಾರ(Karnataka Government) ಆರು ತಿಂಗಳ ಅವಧಿಯಲ್ಲಿ ಮಾಡಿರುವ ಸಾಧನೆಯ ಕಿರುಹೊತ್ತಿಗೆಯನ್ನು ಹಸ್ತಾಂತರಿಸಿದರು.

ಆ ಕಿರುಹೊತ್ತಿಗೆಯಲ್ಲಿರುವ ವಿವರಗಳ ಸಾರಾಂಶವನ್ನು ವಿವರಿಸಿದ ಬೊಮ್ಮಾಯಿ ಅವರು ತಮ್ಮ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳಿಂದ ಬಡವರಿಗೆ ಆಗುತ್ತಿರುವ ಲಾಭಗಳ ಕುರಿತು ಐಸಾಕ್‌ ಸಂಸ್ಥೆ ನಡೆಸಿರುವ ಅಧ್ಯಯನ ವರದಿಯನ್ನೂ ಇದೇ ಸಂದರ್ಭ ಶಾ ಅವರಿಗೆ ನೀಡಿದರು. ರಾಜ್ಯ ಸರ್ಕಾರದ ಸಾಧನೆ ಕುರಿತು ಅಮಿತ್‌ ಶಾ ಅವರು ಮೆಚ್ಚುಗೆ ವ್ಯಕ್ತಪಡಿಸಿದರು ಎನ್ನಲಾಗಿದೆ.

ನಾನು ಮಂತ್ರಿ ಸ್ಥಾನದ ಆಕಾಂಕ್ಷಿ: ಮುನವಳ್ಳಿ
ನಾನು ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಯಾಗಿದ್ದೇನೆ. ಈ ಬಾರಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮಂತ್ರಿ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿ ಸೇರಿದಂತೆ ಬಿಜೆಪಿ ವರಿಷ್ಠರಲ್ಲಿ ಬೇಡಿಕೆ ಇಟ್ಟಿರುವುದಾಗಿ ಶಾಸಕ ಪರಣ್ಣ ಮುನವಳ್ಳಿ ತಿಳಿಸಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಜೆಟ್‌ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ನನ್ನನ್ನು ಗಣನೆಗೆ ತೆಗೆದುಕೊಳ್ಳುವಂತೆ ಕೋರಿರುವುದಾಗಿ ಹೇಳಿದರು. ನಾನು ಪಕ್ಷಕ್ಕಾಗಿ ಶ್ರಮಿಸಿದ್ದೇನೆ. ಅಲ್ಲದೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ದುಡಿಯುತ್ತಿದ್ದೇನೆ. ಕಳೆದ ಬಾರಿ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ ಕೈ ತಪ್ಪಿದೆ. ಹೀಗಾಗಿ ತಮಗೆ ಅದ್ಯತೆ ನೀಡಬೇಕೆಂದು ಕೋರಿದರು. ಒಂದೊಂದು ಜಿಲ್ಲೆಯಲ್ಲಿ 4ರಿಂದ 5 ಸಚಿವರು ಇದ್ದಾರೆ. ಅದರಂತೆ ಕೊಪ್ಪಳ ಜಿಲ್ಲೆಗೆ ಇನ್ನೊಬ್ಬರಿಗೆ ಅವಕಾಶ ನೀಡಿದರೆ ತಪ್ಪೇನಿದೆ ಎಂದು ಪ್ರಶ್ನಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್