Letter To PM MOdi : 40% ಕಮಿಷನ್‌ ತನಿಖೆಗೆ ಸಿಎಂ ಬೊಮ್ಮಾಯಿ ಆದೇಶ

By Kannadaprabha News  |  First Published Nov 26, 2021, 6:17 AM IST
  •  ಟೆಂಡರ್‌ ಪ್ರಕ್ರಿಯೆಯಲ್ಲಿ ಶೇ.40ರಷ್ಟು ಕಮಿಷನ್‌ ಬೇಡಿಕೆ ವಿಚಾರ
  •  ಗುತ್ತಿಗೆದಾರರ ಸಂಘವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ವಿಷಯ
  •  ಗುತ್ತಿಗೆದಾರರ ಸಂಘವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ವಿಷಯ

 ಬೆಂಗಳೂರು (ನ.26):  ಟೆಂಡರ್‌  ಪ್ರಕ್ರಿಯೆಯಲ್ಲಿ ಶೇ.40ರಷ್ಟು ಕಮಿಷನ್‌ ಬೇಡಿಕೆ ವಿಚಾರವಾಗಿ ಗುತ್ತಿಗೆದಾರರ ಸಂಘವು ಪ್ರಧಾನಿ ನರೇಂದ್ರ ಮೋದಿ (Prime minister narendra Modi) ಅವರಿಗೆ ಪತ್ರ (Letter) ಬರೆದ ವಿಷಯವನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸಚಿವರೊಂದಿಗೆ ಚರ್ಚಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ  (CM Basavaraja bommai) ವಿಷಯ ಪ್ರಕಟಿಸಿದರು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಗೆ ಗುತ್ತಿಗೆದಾರರು ಬರೆದಿರುವ ಪತ್ರದಲ್ಲಿನ ಅಂಶಗಳ ಕುರಿತು ತನಿಖೆ ನಡೆಸಿ ವರದಿ (Report) ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ. ಅಲ್ಲದೇ, ಪತ್ರದಲ್ಲಿನ ಅಂಶಗಳ ಬಗ್ಗೆ ಸಂಬಂಧಪಟ್ಟಇಲಾಖೆಗಳ ಮುಖ್ಯಸ್ಥರಿಂದ ಮಾಹಿತಿ ಪಡೆದು ಅವುಗಳನ್ನು ಪರಿಶೀಲನೆ ನಡೆಸಬೇಕು. ಆ ಕುರಿತು ತನಿಖೆ ಮಾಡಿ ತಪ್ಪಿತಸ್ಥರು ಇದ್ದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ನಮ್ಮ ಸರ್ಕಾರದ (Govt) ಅವಧಿಯಲ್ಲಿ ಅಂತಿಮವಾಗಿರುವ ಟೆಂಡರ್‌ ಪ್ರಕ್ರಿಯೆಗಳ ಬಗ್ಗೆಯೂ ವಿಶೇಷವಾಗಿ ಪರಿಶೀಲನೆ ನಡೆಸುವಂತೆ ತಿಳಿಸಲಾಗಿದೆ. ನಿಗದಿತ ಅವಧಿಯಲ್ಲಿಯೇ ಟೆಂಡರ್‌ ಪ್ರಕ್ರಿಯೆಯನ್ನು ಮುಗಿಸಬೇಕು. ಯಾವುದೇ ಕಾರಣಕ್ಕೂ ತಡ ಮಾಡುವಂತಿಲ್ಲ. ಟೆಂಡರ್‌ ಪ್ರಕ್ರಿಯೆಯಲ್ಲಿ ತಡವಾಗುವುದರಿಂದ ಹಲವು ಅನುಮಾನಗಳಿಗೆ ಕಾರಣವಾಗಲಿದೆ. ಇದಕ್ಕೆ ಆಸ್ಪದ ನೀಡಬಾರದು. ಜು.6ರಂದು ಗುತ್ತಿಗೆದಾರರ ಸಂಘವು ಪ್ರಧಾನಿಗೆ ಪತ್ರ ಬರೆದಿದೆ. ಯಾವ ಕಾರಣಕ್ಕಾಗಿ ಬರೆದಿದ್ದಾರೋ ಗೊತ್ತಿಲ್ಲ. ಆದರೆ, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಗುತ್ತಿಗೆದಾರರು ಬರೆದಿರುವ ಪತ್ರದಲ್ಲಿನ ಅಂಶಗಳ ಕುರಿತು ತನಿಖೆ ನಡೆಸುವಂತೆ ಸೂಚಿಸಲಾಗಿದೆ ಎಂದರು.

Tap to resize

Latest Videos

undefined

ಸರ್ಕಾರದ ಎಲ್ಲಾ ಇಲಾಖೆಗಳ ಟೆಂಡರ್‌ನಲ್ಲಿ ಪಾರದರ್ಶಕ ಕಾಯ್ದುಕೊಳ್ಳಲು ಟೆಂಡರ್‌ (Tendor) ಅಂದಾಜು ಮತ್ತು ಪರಿಶೀಲನೆ ನಡೆಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಎರಡು ಸಮಿತಿಗಳನ್ನು ರಚನೆ ಮಾಡಲಾಗಿದೆ. ಸಮಿತಿಯು ತಕ್ಷಣ ಜಾರಿಗೆ ಬರುವ ನಿಟ್ಟಿನಲ್ಲಿ ಸರ್ಕಾರಿ ಆದೇಶ (govt Order) ಮಾಡಲು ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ. ಕಳೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಇದನ್ನು ಶೀಘ್ರದಲ್ಲಿಯೇ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದ ಅವರು, ಗುತ್ತಿಗೆದಾರರು ಪ್ರಧಾನಿಗೆ ಬರೆದ ಪತ್ರದಲ್ಲಿ ಯಾವುದೇ ಆಧಾರ ನೀಡಿಲ್ಲ. ಯಾವುದೇ ನಿಗದಿತ ಪ್ರಕರಣದ ಬಗ್ಗೆಯೂ ಉಲ್ಲೇಖ ಮಾಡಿಲ್ಲ. ಆದರೂ, ತನಿಖೆ ಮಾಡಲಾಗುವುದು. ಇದಕ್ಕಿಂತ ಪಾರದರ್ಶಕತೆ ಸಾಧ್ಯವೇ ಎಂದು ಬೊಮ್ಮಾಯಿ ಹೇಳಿದರು.

ರಾಜ್ಯಪಾಲಗೆ ಸಿದ್ದು,  ಡಿಕೆಶಿಯಿಂದ ದೂರು

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಹದಗೆಟ್ಟಿದೆ. ಸಂವಿಧಾನ, ಕಾನೂನು ಕುಸಿದುಬಿದ್ದಿದೆ. ಸರ್ಕಾರ ಕಾಮಗಾರಿಗಳಲ್ಲಿ ಶೇ.40ರಷ್ಟುಕಮಿಷನ್‌ ಪಡೆಯುತ್ತಿರುವುದಾಗಿ ಪ್ರಧಾನಿಗೆ ಗುತ್ತಿಗೆದಾರರು ದೂರು ನೀಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರವನ್ನು ವಿಸರ್ಜಿಸಿ ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ಒತ್ತಾಯಿಸಿ ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಎಸ್‌.ಆರ್‌.ಪಾಟೀಲ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದ ಕಾಂಗ್ರೆಸ್‌ ನಿಯೋಗವು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.
ಆಧಾರ ಇಲ್ಲ, ಆದರೂ ತನಿಖೆ

ಗುತ್ತಿಗೆದಾರರು ಪ್ರಧಾನಿಗೆ ಬರೆದ ಪತ್ರದಲ್ಲಿ ಯಾವುದೇ ಆಧಾರ ನೀಡಿಲ್ಲ. ಯಾವುದೇ ನಿಗದಿತ ಪ್ರಕರಣದ ಬಗ್ಗೆಯೂ ಉಲ್ಲೇಖ ಮಾಡಿಲ್ಲ. ಆದರೂ, ತನಿಖೆ ಮಾಡಲಾಗುವುದು. ಇದಕ್ಕಿಂತ ಪಾರದರ್ಶಕತೆ ಸಾಧ್ಯವೇ?

- ಬಸವರಾಜ ಬೊಮ್ಮಾಯಿ

  • 40% ಕಮಿಷನ್‌ ತನಿಖೆಗೆ ಸಿಎಂ ಆದೇಶ
  • - ಸಂಪುಟದಲ್ಲಿ ಚರ್ಚೆ ಬಳಿಕ ಬೊಮ್ಮಾಯಿ ಪ್ರಕಟ - ಮುಖ್ಯ ಕಾರ‍್ಯದರ್ಶಿಯಿಂದ ತನಿಖೆ
  • - ಟೆಂಡರ್‌ಗೆ 40% ಕಮಿಷನ್‌ ನೀಡಬೇಕೆಂದು ಪ್ರಧಾನಿಗೆ ಪತ್ರ ಬರೆದಿದ್ದ ಗುತ್ತಿಗೆದಾರರು
click me!