Latest Videos

Mekedatu Dispute: ತಮಿಳುನಾಡು ವಿಧಾನಸಭೆ ಮೇಕೆದಾಟು ನಿರ್ಣಯ ಕಾನೂನುಬಾಹಿರ: ಸಿಎಂ

By Girish GoudarFirst Published Mar 22, 2022, 5:23 AM IST
Highlights

*  ರಾಜಕೀಯ ಕಾರಣಕ್ಕೆ ಕ್ಯಾತೆ ತೆಗೆಯುತ್ತಿರುವ ತಮಿಳುನಾಡು ಸರ್ಕಾರ 
*  ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಆಕ್ರಮಿಸಿಕೊಳ್ಳುವಂತಹ ಜನ ವಿರೋಧಿ ನಿರ್ಣಯ
*  ಮೇಕೆದಾಟು ಯೋಜನೆ ಜಾರಿಗೆ ನಮ್ಮ ನಿರ್ಧಾರ ಅಚಲ: ಬೊಮ್ಮಾಯಿ 
 

ಬೆಂಗಳೂರು(ಮಾ.22): ತಮಿಳುನಾಡು(Tamil Nadu) ವಿಧಾನಸಭೆಯಲ್ಲಿ ಇಂದು ಮೇಕೆದಾಟು ಯೋಜನೆ ವಿರುದ್ಧ ಕೈಗೊಳ್ಳಲಾಗಿರುವ ನಿರ್ಣಯ ಕಾನೂನು ಬಾಹಿರವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ.

ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಆಕ್ರಮಿಸಿಕೊಳ್ಳುವಂತಹ ಜನ ವಿರೋಧಿ ನಿರ್ಣಯವಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ತಮಿಳುನಾಡಿಗೆ ನಂಬಿಕೆ ಇಲ್ಲದ ನಿರ್ಣಯ ಇದಾಗಿದೆ. ಈ ನಿರ್ಣಯವನ್ನು ಸಮಸ್ತ ಕರ್ನಾಟಕದ(Karnataka) ಜನತೆ ಹಾಗೂ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಮೇಕೆದಾಟು ಯೋಜನೆ(Mekedatu Project) ಜಾರಿಗೆ ನಮ್ಮ ನಿರ್ಧಾರ ಅಚಲವಾಗಿದೆ ಎಂದು ತಿಳಿಸಿದ್ದಾರೆ.

Mekedatu Row: ನಮ್ಮ ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ನಿರ್ಣಯ, ಬೆಂಬಲ ಕೊಟ್ಟ ಬಿಜೆಪಿ

ಮೇಕೆದಾಟು ಯೋಜನೆ ರಾಜ್ಯದಲ್ಲಿ ಹುಟ್ಟುವ ಕಾವೇರಿ(Kaveri River) ನದಿಗೆ ಸಂಬಂಧಿಸಿದ್ದಾಗಿದೆ. ಕಾವೇರಿ ನ್ಯಾಯಾಧಿಕರಣದ ಅನ್ವಯ ತಮಿಳುನಾಡಿಗೆ 177.25 ಟಿಎಂಸಿ ನೀರನ್ನು ಕೊಟ್ಟನಂತರ ಉಳಿದ ನೀರಿನ ಮೇಲೆ(water) ಕರ್ನಾಟಕದ ಹಕ್ಕು ಇದೆ. ತಮಿಳುನಾಡಿನ ಈ ರಾಜಕೀಯ ನಿರ್ಧಾರವನ್ನು ಲೆಕ್ಕಿಸದೆ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಲು ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಮೇಕೆದಾಟು: ತಮಿಳುನಾಡು ನಿರ್ಣಯಕ್ಕೆ ಸಿದ್ದು ಕಿಡಿ

ಬೆಂಗಳೂರು: ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡಿರುವ ಬಗ್ಗೆ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಅಸಮಾಧಾನ ವ್ಯಕ್ತಪಡಿಸಿದ್ದು, ಮೇಕೆದಾಟು ವಿಚಾರವಾಗಿ ತಮಿಳುನಾಡು ಹಾಗೂ ಕರ್ನಾಟಕ ನಡುವೆ ವಿವಾದವೇ ಇಲ್ಲ. ಕೇಂದ್ರ ಬಿಜೆಪಿ ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸಿ ಒಕ್ಕೂಟ ಧರ್ಮ ಪಾಲನೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮೇಕೆದಾಟು ಜಾರಿಯಾಗಬಾರದು ಎಂದು ಧರಣಿ ಕೂತಿದ್ದರು. ಬಿಜೆಪಿಯವರು ತಮ್ಮ ಮತ ಕ್ರೋಢೀಕರಣಕ್ಕಾಗಿ ಪರಿಸರ ಅನುಮತಿ ನೀಡದೆ ನಾಟಕವಾಗುತ್ತಿದ್ದಾರೆ. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಈ ಬಗ್ಗೆ ಅನುಮತಿ ನೀಡಿಲ್ಲ ಎಂದರೆ ಕೇಂದ್ರ ಸರ್ಕಾರ(Central Government)s ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂಬುದು ಸ್ಷಷ್ಟವಾಗುತ್ತದೆ ಎಂದರು.

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌(Supreme Court) ನೀಡಿರುವ ಅಂತಿಮ ತೀರ್ಪಿನಲ್ಲಿ ವರ್ಷಕ್ಕೆ 177.25 ಟಿಎಂಸಿ ನೀರು ತಮಿಳುನಾಡಿಗೆ ಬಿಡುವಂತೆ ಆದೇಶ ಮಾಡಿದೆ. ಇದರ ನಿರ್ವಹಣೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಸ್ತಿತ್ವದಲ್ಲಿದೆ. ಇಷ್ಟು ಪ್ರಮಾಣದ ನೀರು ಪಡೆಯುವುದು ಮಾತ್ರ ತಮಿಳುನಾಡಿಗಿರುವ ಹಕ್ಕು. ಈ ತೀರ್ಪು ಬಂದ ಮೇಲೆ ಸುಮಾರು 400 ಟಿ.ಎಂ.ಸಿ ಗೂ ಅಧಿಕ ನೀರು ಹೆಚ್ಚುವರಿಯಾಗಿ ತಮಿಳುನಾಡಿಗೆ ಹರಿದು ಹೋಗಿದೆ. ಹಾಗಾಗಿ ಕೇಂದ್ರ ಸರ್ಕಾರ ಈ ಕೂಡಲೇ ಪರಿಸರ ಇಲಾಖೆ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದರು.

ಮೇಕೆದಾಟು ಯೋಜನೆಗೆ ಕೇಂದ್ರದಿಂದಲೇ 'ವಿವಾದ' ಪದ ಬಳಕೆ, ಕುಮಾರಸ್ವಾಮಿ ಆಕ್ರೋಶ

ತಮಿಳುನಾಡು(Government of Tamil Nadu) ಸರ್ಕಾರ ರಾಜಕೀಯ ಕಾರಣಕ್ಕೆ ಕ್ಯಾತೆ ತೆಗೆಯುತ್ತಿದೆ. ತಮಿಳುನಾಡಿನ ಕ್ಯಾತೆಗೆ ಸೊಪ್ಪು ಹಾಕುವ ಅವಶ್ಯಕತೆ ಇಲ್ಲ. ಕೇಂದ್ರಕ್ಕೆ ರಾಜಕೀಯ ಇಚ್ಛಾಶಕ್ತಿ ಇದ್ದರೆ ಈ ಹಿಂದೆಯೇ ನಮಗೆ ಅನುಮತಿ ಕೊಡಬೇಕಿತ್ತು, ಆದರೆ ಕೊಟ್ಟಿಲ್ಲ. ಸಮಸ್ಯೆ ಜಟಿಲವಾಗುವ ಮೊದಲೇ ಅನುಮತಿ ಕೊಡಬೇಕು, ಈ ವಿಚಾರದಲ್ಲಿ ಬಿಜೆಪಿ ವೋಚ್‌ ಬ್ಯಾಂಕ್‌ ನಾಟಕ ಮಾಡಬಾರದು ಎಂದರು.

ಮೇಕೆದಾಟು ಡ್ಯಾಂ ವಿರುದ್ಧ ತ.ನಾಡು ಅಸೆಂಬ್ಲಿ ನಿರ್ಣಯ

ಚೆನ್ನೈ: ಕರ್ನಾಟಕ ಸರ್ಕಾರ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟು ಯೋಜನೆ ವಿರುದ್ಧ ತಮಿಳುನಾಡಿನ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಖಂಡನಾ ನಿಲುವಳಿ ಅಂಗೀಕಾರವಾಗಿದೆ. ಕರ್ನಾಟಕ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡು ಈ ಡ್ಯಾಂ ನಿರ್ಮಿಸುತ್ತಿದ್ದು, ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಅದನ್ನು ತಡೆಯಬೇಕು ಎಂದು ನಿಲುವಳಿಯಲ್ಲಿ ಆಗ್ರಹಿಸಲಾಗಿದೆ.

ತಮಿಳುನಾಡಿನ ಜಲಸಂಪನ್ಮೂಲ ಸಚಿವ ದುರೈಮುರುಗನ್‌ ಸೋಮವಾರ ವಿಧಾನಸಭೆಯಲ್ಲಿ ಈ ನಿಲುವಳಿ ಮಂಡಿಸಿದರು. ಬಿಜೆಪಿಯ ನಾಲ್ವರು ಶಾಸಕರು, ವಿರೋಧ ಪಕ್ಷದ ಎಐಎಡಿಎಂಕೆ ಶಾಸಕರೂ ಸೇರಿದಂತೆ ಎಲ್ಲರೂ ಅದನ್ನು ಬೆಂಬಲಿಸಿ ಅಂಗೀಕರಿಸಿದರು.ತೆಗೆಯುತ್ತಿರುವ ತಮಿಳುನಾಡು ಸರ್ಕಾರ 
 

click me!