ನೂಪುರ್ ಶರ್ಮಾ ಹೇಳಿಕೆ ಬೆನ್ನಲ್ಲೇ ಪ್ರತಿಭಟನೆ: ಶೂಟ್ ಆ್ಯಟ್ ಸೈಟ್ ಆರ್ಡರ್ ಬಗ್ಗೆ ಸಿಎಂ ಹೇಳಿದ್ದಿಷ್ಟು

By Girish Goudar  |  First Published Jun 11, 2022, 1:11 PM IST

*  ಉತ್ತರ ಪ್ರದೇಶ ಮಾದರಿ ಅಗತ್ಯವಿಲ್ಲ
*  ರಾಜ್ಯದ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ
*  ಆಸಿಡ್ ದಾಳಿ ದುರದೃಷ್ಟಕರ
 


ಹುಬ್ಬಳ್ಳಿ(ಜೂ.11): ನೂಪುರ್ ಶರ್ಮಾ ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿದ್ದರೂ ಪರಿಸ್ಥಿತಿ ಹತೋಟಿಯಲ್ಲಿದೆ. ಹೀಗಾಗಿ ಉತ್ತರ ಪ್ರದೇಶ ಮಾದರಿ ಅಗತ್ಯವಿಲ್ಲ. ಶೂಟ್ ಆ್ಯಟ್ ಸೈಟ್ ಆರ್ಡರ್ ಕೊಡೋ ಪರಿಸ್ಥಿತಿ ನಮ್ಮ ರಾಜ್ಯದಲ್ಲಿಲ್ಲ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು(ಶನಿವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ರಾಜ್ಯದ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಹೀಗಾಗಿ ನಾವು ಉತ್ತರ ಪ್ರದೇಶದ ಮಾದರಿಯನ್ನು ಅಳವಡಿಸಿಕೊಳ್ಳಲು ಅಗತ್ಯವಿಲ್ಲ. ದೇಶದಲ್ಲಿ ವಿವಿಧೆಡೆ ನಡೆಯುತ್ತಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಪ್ರತಿಯೊಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ವಹಿಸಲು‌ ಸೂಚಿಸಲಾಗಿದೆ. ಆಯಾ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ ಸೌಹಾರ್ದತೆ ಕಾಪಾಡಬೇಕೆಂದು‌ ಸೂಚನೆ ನೀಡಲಾಗಿದೆ. ಈ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಜೊತೆಗೂ ಚರ್ಚೆ ಮಾಡಿದ್ದೇನೆ ಎಂದಿದ್ದಾರೆ.

Tap to resize

Latest Videos

ಮಸೀದಿ ಧ್ವನಿವರ್ಧಕ: ಸಿಎಂ ಬೊಮ್ಮಾಯಿ ಯುಪಿ ಸಿಎಂರಂತೆ ಧೈರ್ಯ ತೋರಲಿ, ಮುತಾಲಿಕ್‌

ಆಸಿಡ್ ದಾಳಿ ದುರದೃಷ್ಟಕರ

ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್‌ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಘಟನೆ ಮರುಕಳಿಸಿರೋದು ದುರದೃಷ್ಟಕರ. ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ತೇವೆ. ಕಠಿಣ ಕಾನೂನು ಕೈಗೊಳ್ಳಲು ಚಿಂತಿಸಲಾಗಿದೆ. ರಾಯಚೂರು ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ ಪ್ರಕರಣ ಬಗ್ಗೆ ಈಗಾಗಲೇ ತನಿಖೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನ ಅಮಾನತು ಮಾಡಲಾಗಿದೆ. ನಾಲ್ಕು ಪರಿಷತ್ ಚುನಾವಣೆಯಲ್ಲಿ ನಮ್ಮ ಗೆಲವು ನಿಶ್ಚಿತ ಅಂತ ಹೇಳಿದ್ದಾರೆ. 
 

click me!