
ಬೆಂಗಳೂರು(ನ.02): ಕರ್ನಾಟಕದ ರತ್ನನಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಧನ್ಯರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವುಕರಾಗಿ ನುಡಿದಿದ್ದಾರೆ.
ಮಂಗಳವಾರ ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ರಾಜ್ಯದೆಲ್ಲೆಡೆ ಪುನೀತ್ ರಾಜ್‌ಕುಮಾರ್ ಅವರಿಗೆ ಅಭಿಮಾನದ ಸಾಗರವೇ ಹರಿದಿದೆ. ಪುನೀತ್ ಅವರು ನಮ್ಮ ನಡುವೆಯೇ ಇದ್ದಾರೆ. ನಮ್ಮೆಲ್ಲರ ಮನದಲ್ಲಿದ್ದಾರೆ. ವರ್ಷಧಾರೆಯ ನಡುವೆಯೂ ವಿಚಲಿತರಾಗದೆ ಕಾರ್ಯಕ್ರಮ ವೀಕ್ಷಿಸಲು ಅಭಿಮಾನಿಗಳ ಸಾಗರವೇ ಹರಿದುಬಂದಿದೆ. ಕನ್ನಡ ನೆಲದಲ್ಲಿ ನಿಮ್ಮ ಮೇಲಿರುವ ಪ್ರೀತಿ, ಅಭಿಮಾನಿಗಳಿಗಾಗಿಯಾದರೂ ಮತ್ತೆ ಹುಟ್ಟಿಬನ್ನಿ’ ಎಂದು ಹೇಳಿದರು.
ಅಶ್ವಿನಿ ಆಸೀನರಾಗಬೇಕಿದ್ದ ಕುರ್ಚಿ ಸ್ವಚ್ಛಗೊಳಿಸಿದ ಜೂ. ಎನ್‌ಟಿಆರ್
‘ನಟ ಸಾರ್ವಭೌಮ ಡಾ.ರಾಜ್‌ಕುಮಾರ್ ಮತ್ತು ಪಾರ್ವತಮ್ಮ ಅವರ ಆರ್ಶೀವಾದದಿಂದ ಜನಿಸಿದ ಅಪ್ಪು ಇಂದು ಎಲ್ಲರ ಮನದಲ್ಲಿ ನೆಲೆಸಿದ್ದಾರೆ. ಕರ್ನಾಟಕ ಒಬ್ಬ ರತ್ನನಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದೆ. ಇದು ನಾಡಿನ ಹೆಮ್ಮೆ. ನಮಗೆ ಪ್ರಶಸ್ತಿ ನೀಡುವ ಸೌಭಾಗ್ಯ ಸಿಕ್ಕಿದ್ದು, ನನ್ನ ಮತ್ತು ನನ್ನ ಸರ್ಕಾರದ ಪುಣ್ಯ ಭಾಗ್ಯ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ