ಭಾರತ್ ಬಂದ್: ಕರ್ನಾಟಕ ರೈತ ಸಂಘಟನೆಗಳಿಗೆ ಸಿಎಂ ಮಹತ್ವದ ಮನವಿ

Published : Sep 26, 2021, 06:41 PM IST
ಭಾರತ್ ಬಂದ್: ಕರ್ನಾಟಕ ರೈತ ಸಂಘಟನೆಗಳಿಗೆ ಸಿಎಂ ಮಹತ್ವದ ಮನವಿ

ಸಾರಾಂಶ

* ಸೆ.27ರಂದು ಭಾರತ್​ ಬಂದ್​ * ಕರ್ನಾಟಕದಲ್ಲೂ ಸಹ ರೈತ ಸಂಘಟನೆಗಳು ಬಂದ್‌ಗೆ ಬೆಂಬಲ * ರೈತ ಸಂಘಟನೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ

ಬೆಳಗಾವಿ, (ಸೆ.26): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ವಿರುದ್ಧ  ರೈತಪರ ಸಂಘಟನೆಗಳು(Farmers Associations) ಮತ್ತೆ  ಸಿಡಿದೆದ್ದಿದ್ದು,  ನಾಳೆ ಅಂದರೆ ಸೆ.27ರಂದು ಭಾರತ್​ ಬಂದ್​ಗೆ(Bharat Bandh) ಕರೆ ನೀಡಿವೆ. 

ಹೀಗಾಗಿ ಕೆಲವು ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯೆತೆಗಳಿವೆ. ಸೋಮವಾರ ಭಾರತ್ ಬಂದ್​​ಗೆ ಕರೆ ನೀಡಿರುವ ಹಿನ್ನೆಲೆ, ಕರ್ನಾಟಕದಲ್ಲೂ ಸಹ ರೈತ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿವೆ. ಆ ಸಂಘಟನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಸೆ.27ಕ್ಕೆ ಭಾರತ್‌ ಬಂದ್‌ : ಯಾರ್ಯಾರ ಬೆಂಬಲ

ಈ ಬಗ್ಗೆ ಬೆಳಗಾವಿಯಲ್ಲಿ ಇಂದು (ಸೆ.26) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಯವಿಟ್ಟು ರೈತ ಸಂಘಟನೆಗಳು ಸಹಕಾರ ಮಾಡಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.

ನಾನು ಈಗಾಗಲೇ ಹೇಳಿದ್ದೇನೆ. ಈಗ ಕೋವಿಡ್​​ನಿಂದ ಎಲ್ಲರೂ ಹೊರಗೆ ಬಂದಿದ್ದಾರೆ. ಆರ್ಥಿಕ ಚಟುವಟಿಕೆಗಳು ಶುರುವಾಗಿವೆ. ಕೊರೋನಾ ಬಂದಾಗಿನಿಂದಾಗಿ ರೈತರಿಗೆ, ವ್ಯಾಪಾರಸ್ಥರಿಗೆ ತೊಂದರೆ ಆಗುತ್ತದೆ. ಜನ ಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಹೀಗಾಗಿ ರೈತ ಸಂಘಟನೆಗಳು ಸಹಕಾರ ಮಾಡಬೇಕು. ಕೋವಿಡ್​​ನಿಂದ ಹೊರಬರಲು, ಆರ್ಥಿಕ ಸಂಕಷ್ಟದಿಂದ ಹೊರ ಬರಲು ಅನುವು ಮಾಡಿ ಕೊಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ