* ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಪ್ರಕರಣ
* ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ಪ್ರತಿಕ್ರಿತೆ
* ಈಶ್ವರಪ್ಪ ಹೇಳಿಕೆ ಸಮರ್ಥಿಸಿಕೊಳ್ಳದ ಸಿಎಂ
ಬೆಂಗಳೂರು, (ಫೆ.21) : ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ‘ಮುಸ್ಲಿಂ ಗೂಂಡಾಗಳೇ ಕಾರಣಕರ್ತರು’ ಎಂಬ ಹೇಳಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮರ್ಥಿಸಿಕೊಳ್ಳಲು ನಿರಾಕರಿಸಿದರು.
ಬೆಂಗಳೂರಿನಲ್ಲಿ ಇಂದು(ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಅವರು ಹೇಳಿದ ಮಾತ್ರಕ್ಕೆ ನಾನು ಹೇಳಬೇಕು ಅಂತಿಲ್ಲ, ತನಿಖೆ ನಡೆದ ಬಳಿಕ ಎಲ್ಲವೂ ಹೊರಗೆ ಬರಲಿದೆ ಎಂದು ಸ್ಪಷ್ಟಪಡಿಸಿದರು. ಪರೋಕ್ಷವಾಗಿ ಈಶ್ವರಪ್ಪನವರಿಗೂ ಟಾಂಗ್ ಕೊಟ್ಟರು.
Shivamogga ಮುಸಲ್ಮಾನ ಗೂಂಡಾಗಳು ಹಿಂದೂ ಕಾರ್ಯಕರ್ತನನ್ನು ಹತ್ಯೆ ಮಾಡಿದ್ದಾರೆ, ಈಶ್ವರಪ್ಪ ಗಂಭೀರ ಆರೋಪ
ರಾತ್ರಿ ಹರ್ಷ ಅನ್ನೋ ಹುಡುಗ ಹತ್ಯೆಯಾಗಿದ್ದು, ಅವನ ಹೆಸರೇ ಹಿಂದೂ ಹರ್ಷ ಅಂತ. ಈಗಾಗಲೇ ತನಿಖೆ ನಡೆಯುತ್ತಿದೆ.ಯಾರೆಲ್ಲಾ ಭಾಗಿಯಾಗಿದ್ದಾರೆ ಅನ್ನೋ ಪ್ರಾಥಮಿಕ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ನಡುವೆ ಯಾವುದೇ ಅಹಿತ ಕರ ಘಟನೆ ನಡೆಯದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಶೀಘ್ರವೇ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು
ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ಸಂಘಟನೆಯ ಕಾರ್ಯಕರ್ತ ಹರ್ಷ ಅವರ ಕೊಲೆಯಾಗಿರುವುದು ಮನಸ್ಸಿಗೆ ಬೇಸರವಾಗಿದೆ. ತನಿಖೆ ಈಗಾಗಲೇ ಪ್ರಾರಂಭವಾಗಿದ್ದು,ಆರೋಪಿಗಳ ಸುಳಿವು ದೊರೆತಿದ್ದು, ಶೀಘ್ರದಲ್ಲಿಯೇ ಬಂಧಿಸಲಾಗುವುದು. ಶಿವಮೊಗ್ಗದ ಜನತೆ ಯಾವುದೇ ಉದ್ವೇಗಕ್ಕೆ,ಪ್ರಚೋದನೆಗೆ ಒಳಗಾಗದೇ ಶಾಂತಿಯನ್ನು ಕಾಪಾಡಬೇಕು ಎಂದು ಈ ಮೂಲಕ ಮನವಿ ಮಾಡುತ್ತೇನೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕಗ್ಗೊಲೆ, ಮೊದಲ ಪ್ರತಿಕ್ರಿಯೆ ಕೊಟ್ಟ SDPI ಸಂಘಟನೆ
ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ಸಂಘಟನೆಯ ಕಾರ್ಯಕರ್ತ ಹರ್ಷ ಅವರ ಕೊಲೆಯಾಗಿರುವುದು ಮನಸ್ಸಿಗೆ ಬೇಸರವಾಗಿದೆ. ತನಿಖೆ ಈಗಾಗಲೇ ಪ್ರಾರಂಭವಾಗಿದ್ದು,ಆರೋಪಿಗಳ ಸುಳಿವು ದೊರೆತಿದ್ದು, ಶೀಘ್ರದಲ್ಲಿಯೇ ಬಂಧಿಸಲಾಗುವುದು. ಶಿವಮೊಗ್ಗದ ಜನತೆ ಯಾವುದೇ ಉದ್ವೇಗಕ್ಕೆ,ಪ್ರಚೋದನೆಗೆ ಒಳಗಾಗದೇ ಶಾಂತಿಯನ್ನು ಕಾಪಾಡಬೇಕು ಎಂದು ಈ ಮೂಲಕ ಮನವಿ ಮಾಡುತ್ತೇನೆ.
1/2
ಈಶ್ವರಪ್ಪ ಹೇಳಿದ್ದೇನು
ಶಿವಮೊಗ್ಗದಲ್ಲಿ(Shivamogga) ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ(ಭಾನುವಾರ) ಮುಸಲ್ಮಾನ(Muslim) ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತಹವ ಹತ್ಯೆ ಆಗಿದೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡ್ತಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಕೆಲವೇ ಹೊತ್ತಿನಲ್ಲಿ ಶಿವಮೊಗ್ಗಕ್ಕೆ ಹೋಗುತ್ತೇನೆ. ಇದರ ಬಗ್ಗೆ ಸಿಎಂ ಮತ್ತು ಹೋಂ ಮಿನಿಸ್ಟರ್ ಜತೆ ಮಾತಾಡಿದೀನಿ. ಶಿವಮೊಗ್ಗದಲ್ಲಿ ಮುಸ್ಲಿಮರು ಬಾಲ ಬಿಚ್ಚಿರಲಿಲ್ಲ. ಡಿಕೆ ಶಿವಕುಮಾರ್ ಧ್ವಜದ ವಿಚಾರದಲ್ಲಿ ಪ್ರಚೋದನಾ ಹೇಳಿಕೆ ನೀಡಿದ್ದರು. ಸೂರತ್‌ನಿಂದ ಕೇಸರಿ ಶಾಲು ತರಿಸಿದ್ದಾಗಿ ಹೇಳಿಕೆ ನೀಡಿದ್ದರು. ಡಿಕೆ ಶಿವಕುಮಾರ್ ಆ ಹೇಳಿಕೆಯಿಂದ ಪ್ರೇರಣೆ ಪಡೆದು ಮುಸ್ಲಿಂ ಗೂಂಡಾಗಳು ನಿನ್ನೆ ರಾತ್ರಿ ನಮ್ಮ ಪ್ರಾಮಾಣಿಕ ಕಾರ್ಯಕರ್ತ ಹರ್ಷನ ಕೊಲೆ ಮಾಡಿದ್ದಾರೆ ಕಿಡಿಕಾರಿದ್ದರು.
ಯುವಕನ ಕಾರ್ಯವನ್ನು ನಾವೇ ಮುಂದೆ ನಿಂತು ಮಾಡ್ತೇವೆ. ಈಗಾಗಲೇ ಗೃಹ ಸಚಿವರಿಗೆ ಮಾತಾಡಿದ್ದೇನೆ. ಕೇಸರಿ ಶಾಲೆ ಹಚ್ಚಿದ್ದಾರೆ, ರಾಷ್ಟ್ರ ಧ್ವಜ ತೆಗೆದು ಭಗಧ್ವಜ ಹಾರಿಸಿದ್ದಾರೆ ಎಂಬಂತಹ ಡಿಕೆ ಶಿವಕುಮಾರ್ ಹೇಳಿಕೆಯಿಂದ ಕುಮ್ಮಕ್ಕು ಪಡೆದ ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಈಶ್ವರಪ್ಪ ನೇರ ಆರೋಪ ಮಾಡಿದ್ದರು.