ಅಂಜನಾದ್ರಿ ಅಭಿವೃದ್ಧಿ ಕೆಲಸ ಈ ವರ್ಷವೇ ಶುರು: ಸಿಎಂ ಬೊಮ್ಮಾಯಿ

Published : Apr 04, 2022, 03:15 AM IST
ಅಂಜನಾದ್ರಿ ಅಭಿವೃದ್ಧಿ ಕೆಲಸ ಈ ವರ್ಷವೇ ಶುರು: ಸಿಎಂ ಬೊಮ್ಮಾಯಿ

ಸಾರಾಂಶ

ಹಂಪಿ ಬಳಿಯ ಹನುಮನ ಜನ್ಮಸ್ಥಳ ಅಂಜನಾದ್ರಿ ಕ್ಷೇತ್ರ ಅಭಿವೃದ್ಧಿಪಡಿಸಲು 100 ಕೋಟಿ ರು.ಗಳನ್ನು ಮೀಸಲಿಟ್ಟಿದ್ದು, ಕ್ಷೇತ್ರದ ಅಭಿವೃದ್ಧಿಗೆ ಪ್ರಸಕ್ತ ವರ್ಷದಲ್ಲೇ ಯೋಜನೆ ಸಿದ್ಧಪಡಿಸಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು (ಏ.04): ಹಂಪಿ ಬಳಿಯ ಹನುಮನ ಜನ್ಮಸ್ಥಳ ಅಂಜನಾದ್ರಿ ಕ್ಷೇತ್ರ (Anjanadri Hill) ಅಭಿವೃದ್ಧಿಪಡಿಸಲು 100 ಕೋಟಿ ರು.ಗಳನ್ನು ಮೀಸಲಿಟ್ಟಿದ್ದು, ಕ್ಷೇತ್ರದ ಅಭಿವೃದ್ಧಿಗೆ ಪ್ರಸಕ್ತ ವರ್ಷದಲ್ಲೇ ಯೋಜನೆ ಸಿದ್ಧಪಡಿಸಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಶ್ರೀರಾಮ ಸೇವಾ ಮಂಡಳಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಯ ಕೆಲಸ ಇದೇ ವರ್ಷ ಪ್ರಾರಂಭವಾಗಲಿದೆ. ಪ್ರಮುಖರ ಸಲಹೆ ಮೇರೆಗೆ ಅಭಿವೃದ್ಧಿ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ.

ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ (Infosys Sudha Murthy) ಅವರಿಗೆ, ತಿಳಿದಿರುವ ತಜ್ಞರ ಹೆಸರುಗಳನ್ನು ಒದಗಿಸಲು ಮನವಿ ಮಾಡಲಾಗಿದೆ. ಅವರ ಸಲಹೆ ಪಡೆದು ಅಭಿವೃದ್ಧಿ ಮಾಡಲಾಗುವುದು ಎಂದರು. ಇತ್ತೀಚೆಗೆ ತಿರುಪತಿ ತಿರುಮಲ ದೇವಸ್ಥಾನ ಸಮಿತಿಯು ತಿರುಪತಿಯಲ್ಲಿನ ಅಂಜನಾದ್ರಿ ಬೆಟ್ಟವೇ ಹನುಮನ ನೈಜ ಜನ್ಮಸ್ಥಳ ಎಂದು ವಾದಿಸಿತ್ತು. ಇದಕ್ಕೆ ಕರ್ನಾಟಕದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಬೊಮ್ಮಾಯಿ ಅವರು ಹಂಪಿ ಬಳಿಯ ಅಂಜನಾದ್ರಿ ಅಭಿವೃದ್ಧಿ ಘೋಷಣೆ ಮಾಡಿದ್ದರು.

Reservation: ಎಸ್‌ಸಿ,ಎಸ್‌ಟಿ ಪಂಚಮಸಾಲಿ ಮೀಸಲಾತಿಗೆ ಬದ್ಧ: ಸಿಎಂ ಬೊಮ್ಮಾಯಿ

ಸರ್ಕಾರದ ಪ್ಲಾನ್‌ ಏನು?
* ಅಂಜನಾದ್ರಿ ಬೆಟ್ಟದಿಂದ ಕೆಳಕ್ಕೆ ಪ್ರವಾಸಿಗರ ಸಂಚಾರಕ್ಕೆ ರೋಪ್‌ ವೇ ನಿರ್ಮಾಣ.
* ಬೆಟ್ಟದ ತಪ್ಪಲಿನಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಭೂಸ್ವಾಧೀನ.
* ಅಂಜನಾದ್ರಿ ಬೆಟ್ಟದ ಕೆಳಗೆ ಪ್ರವಾಸಿಗರಿಗೆ ಯಾತ್ರಿ ನಿವಾಸ ನಿರ್ಮಾಣ.
* ಕೊಪ್ಪಳ ಮತ್ತು ಹೊಸಪೇಟೆಯಿಂದ ಅಂಜನಾದ್ರಿವರೆಗೆ ರಿಂಗ್‌ ರಸ್ತೆ ನಿರ್ಮಾಣ.

ಬಿಸಿಯೂಟ ಯೋಜನೆಗೆ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರಿಡಲು ಸರಕಾರದ ತೀರ್ಮಾನ: ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ವಿತರಿಸುವ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ನಡೆದಾಡುವ ದೇವರೆಂದೇ ಹೆಸರು ಪಡೆದ ತ್ರಿವಿಧ ದಾಸೋಹಿ ತುಮಕೂರಿನ ಸಿದ್ದಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿಗಳ (Siddaganga Mutt Shivakumara Swamiji) ಹೆಸರನ್ನಿಡಲು ನಿರ್ಧರಿಸಿದೆ. ತುಮಕೂರಿನಲ್ಲಿಂದು ಡಾ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಘೋಷಣೆ ಮಾಡಿದ್ದಾರೆ.

ಶಿವಕುಮಾರ ಸ್ವಾಮೀಜಿಗಳು ಕಷ್ಟದಲ್ಲಿರುವವರಿಗೆ ಬದುಕು ಕಟ್ಟಿಕೊಡುತ್ತಿದ್ದರು. ಲಕ್ಷಾಂತರ ಮಕ್ಕಳಿಗೆ ತ್ರಿವಿಧ ದಾಸೋಹಗಳಲ್ಲಿ ಒಂದಾಗಿರುವ ಅನ್ನ ದಾಸೋಹವನ್ನು ಕೂಡ ಮಾಡಿದವರು. ಮಧ್ಯಾಹ್ಯದ ಬಿಸಿ ಊಟದ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು ಇಡಲು ಸರ್ಕಾರ ಮುಂದಾಗುತ್ತದೆ. ಈ ಬಗ್ಗೆ ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಆದೇಶ ಹೊರಡಿಸುತ್ತೇನೆ ಎಂದು ತಿಳಿಸಿದರು. ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ನಡೆದಾಡಿದ ನೆಲದಲ್ಲಿ ಸ್ಪೂರ್ತಿ, ಹೆಮ್ಮೆ ಇದೆ. ಸುಮಾರು 88 ವರ್ಷ ಈ ಮಠದ ಸೇವೆ ಮಾಡಿದ್ದಾರೆ. ಇದು ದಾಖಲೆ. ಇಡಿ ದೇಶದಲ್ಲೇ ಈ ಕೆಲಸ ಯಾರು ಮಾಡಿಲ್ಲ. ಆ ದಾಖಲೆ ನಮ್ಮ‌ ಶಿವಕುಮಾರ ಸ್ವಾಮಿಗಳು ಮಾಡಿದ್ದಾರೆ. 

ರಾಜ್ಯದಲ್ಲಿ ಹಲಾಲ್ ವಿರೋಧಿ ಅಭಿಯಾನ: ಸಿಎಂ ಬೊಮ್ಮಾಯಿ ಕೊಟ್ಟ ಉತ್ತರವೇನು?

ಶ್ರೀಗಳು ಹಚ್ಚಿದ ಒಲೆಯ ಕಿಚ್ಚು ನಿರಂತರವಾಗಿ ನಡೆಯುತ್ತಿವೆ. ಅವರು ನಮ್ಮ‌ ನಡುವೆ ಜೀವಂತ ಆಗಿದ್ದಾರೆ. ಅವರು ದೈಹಿಕವಾಗಿ ಇಲ್ಲದೆ ಇದ್ದರೂ ಅವರ ನಡೆ ಗೌರವ ನಮ್ಮ‌ ಜೊತೆ ಸದಾ ಇರುತ್ತದೆ. ಇಂದು ಅವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಅಲ್ಲ, ಭಕ್ತನಾಗಿ ಭಾಗಿಯಾಗುತ್ತಿರುವುದು ನನ್ನ ಪಾಲಿನ ಪುಣ್ಯ ಎಂದು ಮುಖ್ಯಮಂತ್ರಿಗಳು ಹೇಳಿದರು. ಬದುಕನ್ನು ಕಟ್ಟಿಕೊಟ್ಟ ಪರಮಪೂಜ್ಯರು ಅವರು. ಎಲ್ಲಾ ಸಮುದಾಯದ ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಅದು ಸಾಮಾನ್ಯ ಮಾತಲ್ಲ. ಅದು ದೈವ ಶಕ್ತಿ. ಸ್ವಾಮೀಜಿಯವರು ಯಾವುದೇ ಜಾತಿ ಭೇದ ಮಾಡಿಲ್ಲ. ಸರ್ವೋದಯ ಅಂತ್ಯೋದಯ ಆಗಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌