ಸುಳ್ಳು ಹೇಳುತ್ತಿರುವುದು ನಾನಲ್ಲ, ಸಿದ್ದರಾಮಯ್ಯ: ಸಿಎಂ ಬೊಮ್ಮಾಯಿ

Published : Feb 26, 2023, 01:30 AM IST
ಸುಳ್ಳು ಹೇಳುತ್ತಿರುವುದು ನಾನಲ್ಲ, ಸಿದ್ದರಾಮಯ್ಯ: ಸಿಎಂ ಬೊಮ್ಮಾಯಿ

ಸಾರಾಂಶ

ಸಿದ್ದರಾಮಯ್ಯ ಅವರೇ ನೇಮಿಸಿದ್ದ ನ್ಯಾ.ಕೆಂಪಣ್ಣ ಅವರ ಆಯೋಗದ ವರದಿಯನ್ನು ಓದಿದ್ದೇನೆ. ಸುದೀರ್ಘವಾಗಿ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ತನಿಖೆ ನಡೆಸಿ ವರದಿ ನೀಡಲಾಗಿದೆ. ನಾನು ಸುಳ್ಳು ಹೇಳುವ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯನವರು ಸುಳ್ಳು ಹೇಳುತ್ತಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

ಬೆಂಗಳೂರು(ಫೆ.26): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟುಸತ್ಯ ಎದುರಿಸುವ ಕಾಲ ಬಂದಿದೆ. ಅರ್ಕಾವತಿ ಬಡಾವಣೆ ರೀ-ಡೂ ಬಗ್ಗೆ ಬೊಮ್ಮಾಯಿ ಹೇಳುತ್ತಿರುವುದಲ್ಲ, ನ್ಯಾ.ಕೆಂಪಣ್ಣ ಆಯೋಗ ಹೇಳಿರುವುದು. ನಾನು ಸುಳ್ಳು ಹೇಳುತ್ತಿಲ್ಲ. ಸಿದ್ದರಾಮಯ್ಯ ಅವರೇ ಸುಳ್ಳು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಕಂಚಿನ ಪ್ರತಿಮೆ ಅನಾವರಣ ಮಾಡಿದ ಬಳಿಕ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ನೇಮಿಸಿದ್ದ ನ್ಯಾ.ಕೆಂಪಣ್ಣ ಅವರ ಆಯೋಗದ ವರದಿಯನ್ನು ಓದಿದ್ದೇನೆ. ಸುದೀರ್ಘವಾಗಿ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ತನಿಖೆ ನಡೆಸಿ ವರದಿ ನೀಡಲಾಗಿದೆ. ನಾನು ಸುಳ್ಳು ಹೇಳುವ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯನವರು ಸುಳ್ಳು ಹೇಳುತ್ತಿದ್ದಾರೆ. ಅಧಿಕಾರಿಗಳು ಕಡತ ತಂದಿರುವುದಕ್ಕೆ ಅನುಮೋದಿಸಿದೆ ಎಂದು ಬರೆದಿರುವುದಾಗಿ ಅವರೇ ಹೇಳಿದ್ದಾರೆ. ಅದರ ಅರ್ಥ ಏನು? ಅವರು ತಪ್ಪು ಮಾಡಿರುವುದನ್ನು ಒಪ್ಪಿಕೊಂಡಂತೆ. ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾಗಿಲ್ಲ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸರ್ಕಾರದಿಂದ ಅರ್ಕಾವತಿ ಅಸ್ತ್ರ?

ಇದೇ ವೇಳೆ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿರುವ ವಿಚಾರವಾಗಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅಡ್ವೊಕೇಟ್‌ ಜನರಲ್‌ ಬಗ್ಗೆ ಹೇಳಿದ್ದಾರೆ. ಅವರ ವಾದದ ನಂತರ ನ್ಯಾಯಮೂರ್ತಿಗಳು ಏನು ಹೇಳಿದ್ದಾರೆ ಎನ್ನುವುದು ಮುಖ್ಯ. ತೀರ್ಪು ಮುಖ್ಯವಾಗಿದ್ದು, ರಾಜಕೀಯ ವ್ಯಕ್ತಿಗಳು, ಅಧಿಕಾರಿಗಳ ಭ್ರಷ್ಟಾಚಾರವನ್ನು ರಕ್ಷಿಸಲು ಎಂದು ತೀರ್ಪಿನಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಅದನ್ನೇ ನಾನು ಹೇಳಿದ್ದೇನೆ. ತೀರ್ಪು ಹಾಗೂ ಆಯೋಗದ ವರದಿಯನ್ನು ನಾನು ಓದಿದ್ದು. ಈಗಾಗಲೇ ಏನು ಕ್ರಮ ತೆಗೆದುಕೊಂಡಿದ್ದಾರೆ ಎಂದು ನಾವು ನೋಡಿದ್ದೇವೆ. ಇನ್ನು ಮುಂದೆ ನಾವೇನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?
ಮೆಕ್ಕೆಜೋಳ ಖರೀದಿಯ ಮಿತಿ 50 ಕ್ವಿಂಟಲ್‌ಗೇರಿಕೆ