* ರೈತರ ಪರ ರಾಜ್ಯ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ. ರೈತರ ಧ್ವನಿಗೆ ನಾವು ಧ್ವನಿಯಾಗಲಿದ್ದೇವೆ
* ರೈತರಿಗೆ ಮಹತ್ವದ ಭರವಸೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
* ಮೈಸೂರಿನಲ್ಲಿ ವಿಶ್ವ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಹೇಳಿಕೆ
ಮೈಸೂರು, (ಡಿ.26): ರೈತರ(Farmers) ಪರ ರಾಜ್ಯ ಸರ್ಕಾರ(Karnataka Government) ಗಟ್ಟಿಯಾಗಿ ನಿಲ್ಲಲಿದೆ. ರೈತರ ಧ್ವನಿಗೆ ನಾವು ಧ್ವನಿಯಾಗಲಿದ್ದೇವೆ. ಮುಂದಿನ ದಿನಗಳಲ್ಲಿ ಅವರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವಾರು ಕ್ರಮ ಕೈಗೊಂಡಿದ್ದು, ಅವುಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮವಹಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ರಾಜ್ಯ ರೈತ ಸಂಘಟನೆಗಳ ಒಕ್ಕೂಟ- ರಾಜ್ಯ ಬೆಳೆಗಾರರ ಸಂಘದ ಸಂಯುಕ್ತಾಶ್ರಯದಲ್ಲಿ ಇಂದು (ಭಾನುವಾರ) ಮೈಸೂರಿನ(Mysuru) ಕಲಾಮಂದಿರದಲ್ಲಿ ಆಯೋಜಿಸಿದ್ದ ವಿಶ್ವ ರೈತ ದಿನಾಚರಣೆ (World Farmers Day) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ಪಾದನೆ ಕಡಿಮೆ ಆದರೂ ಸಮಸ್ಯೆ, ಹೆಚ್ಚಾದರೂ ಸಮಸ್ಯೆಯಾಗಲಿದೆ. ಪ್ರಸ್ತುತ ಸನ್ನಿವೇಶದಲ್ಲಿ ಆಹಾರ ಉತ್ಪಾದನೆ ಜಾಸ್ತಿಯಾಗಿದೆ ಎಂದರು.
undefined
Crop Loss Compensation: 2.6 ಲಕ್ಷ ಬೆಳೆ ಹಾನಿ ಪರಿಹಾರ ಅರ್ಜಿ ತಿರಸ್ಕೃತ: ರೈತರ ಪರದಾಟ
ಕೃಷಿ (Agriculture) ಮತ್ತು ರೈತನ ಮೇಲೆ ನಮ್ಮ ಲಕ್ಷ್ಯ ಇರಬೇಕು. ರೈತರ ಆದಾಯ ಹೆಚ್ಚಾದರೆ ರೈತಾಪಿ ವರ್ಗದ ಸ್ಥಿತಿ ಸುಧಾರಿಸಲಿದೆ. ಕೇವಲ ಕೃಷಿಯ ಆದಾಯದಿಂದ ರೈತನ ಬದುಕು ಹಸನಾಗುತ್ತಿಲ್ಲಹಾಗಾಗಿ ಇತರ ಮೂಲಗಳಿಂದ ರೈತರ ಆದಾಯ ಹೆಚ್ಚಿಸುವ ಚಿಂತನೆಯನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.
ಬೆಳೆ ನಿಯಂತ್ರಣ, ಬೆಲೆ ನಿಗಧಿ ಬಹು ದೊಡ್ಡ ಸಮಸ್ಯೆಯಾಗಿದೆ. ಡಬ್ಯ್ಲುಟಿಒ ಒಪ್ಪಂದಕ್ಕೆ ಸಹಿ ಹಾಕಿದ ಪರಿಣಾಮ ನಮ್ಮ ಹಣೆ ಬರಹ ಬದಲಾಯಿತು.ಈ ರೀತಿಯ ಒಪ್ಪಂದಗಳಿಗೆ ಸಹಿ ಹಾಕಿದಾಗ ದೂರಗಾಮಿ ಪರಿಣಾಮಗಳು ಬೀರುತ್ತವೆ. ಇದೆಲ್ಲದರ ಪರಿಣಾಮ ಸಾಲದ ಸಂಕೋಲೆಯಲ್ಲಿ ರೈತ ಸಿಲುಕಿದ್ದಾನೆ. ಅಂತರರಾಷ್ಟ್ರೀಯ ಮಾರುಕಟ್ಟೆ ನಿಯಂತ್ರಣ ವ್ಯವಸ್ಥೆಯಿಂದ ಹೊರ ಬಂದರೆ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ತಿಳಿಸಿದರು.
Compensation For Crop loss : ಮುಂಗಾರಲ್ಲಿ ಬೆಳೆ ಪರಿಹಾರ ಪಡೆದಿದ್ರೆ ಹಿಂಗಾರಿಗೆ ಇಲ್ಲ!
ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ. ಮೈಷುಗರ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ಶ್ರೀರಾಮ ಸಕ್ಕರೆ ಕಾರ್ಖಾನೆಯ ಪುನರಾರಂಭಕ್ಕೆ ಎದುರಾಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಹ ಕ್ರಮ ಕೈಗೊಳ್ಳಲಾಗುವುದು. ರೈತರ ಪರ ರಾಜ್ಯ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ. ರೈತರ ಧ್ವನಿಗೆ ನಾವು ಧ್ವನಿಯಾಗಲಿದ್ದೇವೆ ಭರವಸೆ ನೀಡಿದರು.
ರಾಜಕಾರಣ ಹಾಗೂ ರೈತರ ನಡುವಿನ ಸಂಬಂಧ ಪ್ರಬಲವಾಗಿ ಇದ್ದಿದ್ದರೆ ರೈತರ ಸಮಸ್ಯೆ ಸರ್ಕಾರದ ಸಮಸ್ಯೆಯಾಗಿ ಇರುತ್ತಿತ್ತು. ರೈತರು ಎಲ್ಲಾ ರಾಜಕೀಯ ಪಕ್ಷಗಳ ಬೆನ್ನೆಲುಬಿದ್ದಂತೆ ಅಂತೆಯೇ ಚಳವಳಿ ಹಾಗೂ ರಾಜಕಾರಣದ ನಡುವೆ ಸಂಬಂಧ ಇರಬೇಕಿತ್ತು. ಆದರೆ, ವಾಸ್ತವದಲ್ಲಿ ಹಾಗಾಗಲಿಲ್ಲ ಎಂದರು.
ಸುತ್ತೂರು ಮಠದ ಪೀಠಾಧಿಪತಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ರೈತರು ಬೆಳೆದ ಬೆಳೆಗೆ ಯೋಗ್ಯ ಬೆಲೆ ಸಿಗಬೇಕು. ಅತಿವೃಷ್ಠಿಯಿಂದಾದ ಬೆಳೆ ಹಾನಿಗೆ ಸೂಕ್ತ ಪರಿಹಾರವನ್ನು ರೈತರು ಕೇಳುತ್ತಾರೆ. ಯಾವುದೇ ಗಂಭೀರ ಸಮಸ್ಯೆ ಎದುರಾದರೂ ರೈತರು ಎದೆಗುಂದಬಾರದು, ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ಆತ್ಮಹತ್ಯೆಯಂತಹ ಯೋಚನೆ ಮಾಡಬಾರದು ಕಿವಿ ಮಾತು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತಪರ ಕಾಳಜಿವುಳ್ಳವರಾಗಿದ್ದಾರೆ. ಅದಕ್ಕಾಗಿಯೇ ಅಧಿಕಾರಕ್ಕೆ ಬಂದ ಬಳಿಕ ರೈತರ ಮಕ್ಕಳ ಶಿಕ್ಷಣದ ಮಹತ್ವದ ನಿರ್ಣಯ ಕೈಗೊಂಡರು. ರೈತರಿದ್ದರಷ್ಟೇ ಜಗತ್ತು ಬದುಕಲಿದೆ, ಉಳಿಯಲಿದೆ.ಕೃಷಿಯಲ್ಲಿ ಅತಿಯಾದ ರಾಸಾಯನಿಕ ಬಳಕೆಯಿಂದ ಭೂಮಿಯ ಫಲವತ್ತತೆ ಕಡಿಮೆಯಾಗಲಿದೆ, ಅಲ್ಲದೇ ಬೆಳೆದ ಉತ್ಪನ್ನಗಳನ್ನು ಸೇವಿಸುವ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ, ಕೃಷಿಯಲ್ಲಿ ಅತಿಯಾದ ರಾಸಾಯನಿಕ ಬಳಕೆ ಮಾಡಬಾರದು ಎಂದು ಸಲಹೆ ನೀಡಿದರು.