ಸರ್ಕಾರಕ್ಕೆ ಮುಜುಗರ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ

Published : Jul 05, 2022, 05:15 AM IST
ಸರ್ಕಾರಕ್ಕೆ ಮುಜುಗರ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ

ಸಾರಾಂಶ

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕ ಹಗರಣದಲ್ಲಿ ಎಡಿಜಿಪಿ ಅಮೃತ್‌ ಪಾಲ್‌ ಅವರನ್ನು ಸಿಐಡಿ ಪೊಲೀಸರು ಬಂಧಿಸಿರುವ ಪ್ರಕರಣದಲ್ಲಿ ಸರ್ಕಾರಕ್ಕೆ ಮುಜುಗರ ಉಂಟಾಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು (ಜು.05): ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕ ಹಗರಣದಲ್ಲಿ ಎಡಿಜಿಪಿ ಅಮೃತ್‌ ಪಾಲ್‌ ಅವರನ್ನು ಸಿಐಡಿ ಪೊಲೀಸರು ಬಂಧಿಸಿರುವ ಪ್ರಕರಣದಲ್ಲಿ ಸರ್ಕಾರಕ್ಕೆ ಮುಜುಗರ ಉಂಟಾಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಗರಣ ಸಂಬಂಧ ತನಿಖೆಗೆ ಆದೇಶಿಸಿದ್ದೇ ನಮ್ಮ ಸರ್ಕಾರ. ಆದರೆ, ಬೇರೆ ಸರ್ಕಾರ ಅಧಿಕಾರದಲ್ಲಿದ್ದಿದ್ದರೆ ಹೀಗಾಗುತ್ತಿರಲಿಲ್ಲ. ಈ ಹಿಂದೆ ಪೊಲೀಸ್‌ ನೇಮಕಾತಿ ಅಕ್ರಮಗಳು ನಡೆದ ಆರೋಪ ಕೇಳಿಬಂದಾಗ ಯಾವುದೇ ಸರ್ಕಾರ ತನಿಖೆಗೆ ಆದೇಶಿಸಿರಲಿಲ್ಲ. ಈ ಪ್ರಕರಣದಲ್ಲಿ ಸರ್ಕಾರಕ್ಕೆ ಯಾವುದೇ ಮುಜುಗರ ಉಂಟಾಗುವುದಿಲ್ಲ ಎಂದು ಹೇಳಿದರು.

ಭ್ರಷ್ಟರನ್ನು ಸದೆ ಬಡಿಯಲು ನಮ್ಮ ಸರ್ಕಾರ ನಿಷ್ಪಕ್ಷಪಾತ ಮತ್ತು ನಿರ್ದಾಕ್ಷಿಣ್ಯವಾಗಿ ತನಿಖೆ ನಡೆಸುತ್ತಿದೆ. ಅಕ್ರಮ ಪ್ರಕರಣದಲ್ಲಿ ಭಾಗಿಯಾದ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ. ಜತೆಗೆ, ಇಡೀ ವ್ಯವಸ್ಥೆಯನ್ನು ವ್ಯವಸ್ಥೆಯನ್ನು ಸ್ವಚ್ಛಗೊಳಿಸುತ್ತೇವೆ ಎಂದು ಹೇಳಿದರು. ಪ್ರಕರಣದ ತನಿಖೆ ನಡೆಸಲು ಸಿಐಡಿಗೆ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಇದೇ ಕಾರಣದಿಂದ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಅಮೃತ್‌ ಪಾಲ್‌ ಅವರನ್ನು ಬಂಧಿಸಲಾಗಿದೆ. ಸಾಕ್ಷ್ಯಾಧಾರಗಳ ಆಧಾರದಲ್ಲಿ ಎಲ್ಲ ಆರೋಪಿಗಳನ್ನೂ ಬಂಧಿಸಿ ಕಾನೂನು ಪ್ರಕಾರ ಶಿಸ್ತು ಕ್ರಮ ಕೈಗೊಳ್ಳುವುದಕ್ಕೆ ಸೂಚನೆ ನೀಡಲಾಗಿದೆ. ಪ್ರಕರಣದಲ್ಲಿ ಎಷ್ಟೇ ದೊಡ್ಡವರು ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಬೊಮ್ಮಾಯಿ ಸರ್ಕಾರಕ್ಕೆ ಮತ್ತೊಂದು ಮೀಸಲಾತಿ ಸಂಕಟ..!

ಬೊಮ್ಮಾಯಿ ಜಿಎಸ್‌ಟಿ ವರದಿಗೆ ಮೆಚ್ಚುಗೆ: ಕೆಳಮುಖ ತೆರಿಗೆ ರಚನೆಯಲ್ಲಿ ತಿದ್ದುಪಡಿ ಮತ್ತು ತೆರಿಗೆ ವಿನಾಯಿತಿಗಳನ್ನು ಕಡಿಮೆ ಮಾಡುವ ಶಿಫಾರಸುಗಳನ್ನು ಒಳಗೊಂಡ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯ ಸಚಿವರ ಸಮಿತಿಯು ಮಂಗಳವಾರ ಚಂಡೀಗಢದಲ್ಲಿ ನಡೆದ ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಮಂಡಿಸಿದ್ದು, ಮೆಚ್ಚುಗೆ ವ್ಯಕ್ತವಾಗಿದೆ. ಅಪರೂಪಕ್ಕೆಂಬಂತೆ ಚರ್ಚೆ ನಡೆಸದೇ ಈ ವರದಿಯನ್ನು ಸರ್ವಾನುಮತದಿಂದ ಸಭೆ ಅಂಗೀಕರಿಸಿದೆ. ಬಸವರಾಜ ಬೊಮ್ಮಾಯಿ ಸಮಿತಿಯ ಅಧ್ಯಕ್ಷರಾಗಿದ್ದು, ಪಶ್ಚಿಮ ಬಂಗಾಳ, ಬಿಹಾರ, ಕೇರಳ, ರಾಜಸ್ತಾನ, ಉತ್ತರಪ್ರದೇಶ ಮತ್ತು ಗೋವಾ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿದ್ದಾರೆ.

ಪ್ರತಿಯೊಬ್ಬರು ಐದು ಗಿಡಗಳನ್ನು ಬೆಳೆಸಿ: ಸಿಎಂ ಬೊಮ್ಮಾಯಿ

ಕೌನ್ಸಿಲ್‌ ಸಭೆಯಲ್ಲಿ ಸಚಿವರ ಸಮಿತಿಯು ತೆರಿಗೆ ದರಗಳಲ್ಲಿನ ಪರಾಮರ್ಶೆಗೆ ಸಂಬಂಧಿಸಿದಂತೆ ಮಧ್ಯಂತರ ವರದಿಯನ್ನು ಸಲ್ಲಿಸಲಾಗಿದೆ. ಕೆಳಮುಖ ತೆರಿಗೆ ರಚನೆಯಲ್ಲಿ ತಿದ್ದುಪಡಿ, ತೆರಿಗೆ ವಿನಾಯಿತಿಯನ್ನು ಕಡಿಮೆ ಮಾಡುವಂತಹ ಎರಡು ಒತ್ತಾಯದ ಶಿಫಾರಸುಗಳನ್ನು ಒಳಗೊಂಡ ಮಧ್ಯಂತರ ವರದಿಯನ್ನು ಬಸವರಾಜ ಬೊಮ್ಮಾಯಿ ಅವರು ಜಿಎಸ್‌ಟಿ ಕೌನ್ಸಿಲ್‌ ಮುಂದೆ ಮಂಡಿಸಿದರು. ಸಚಿವರ ಸಮಿತಿಯು ತನ್ನ ವರದಿಯಲ್ಲಿ ಮಂಡಿಸಿರುವ ವಿವರವಾದ ವಿಶ್ಲೇಷಣೆ ಕುರಿತು ಕೌನ್ಸಿಲ್‌ನ ಸದಸ್ಯರು ಪ್ರಶಂಸೆ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ