ಮುಂಬರುವ ನವೆಂಬರ್‌ನಲ್ಲೇ ಹಾವೇರಿಯಲ್ಲಿ ‘ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿ (ಸೆ.30): ಮುಂಬರುವ ನವೆಂಬರ್‌ನಲ್ಲೇ ಹಾವೇರಿಯಲ್ಲಿ ‘ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಸಮ್ಮೇಳನದ ಪೂರ್ವಸಿದ್ಧತೆಗಳು ನಡೆಯುತ್ತಿವೆ. ಸಮ್ಮೇಳನಕ್ಕೆ ಬೇಕಿದ್ದ ಅಗತ್ಯ ನೆರವನ್ನೂ ಸರ್ಕಾರ ಕಲ್ಪಿಸಲಿದೆ. ಈ ಬಾರಿ ಅರ್ಥಪೂರ್ಣ ಮತ್ತು ಅದ್ಧೂರಿಯಾಗಿ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
ಅಕ್ಟೋಬರ್‌ನಲ್ಲಿ ಹಾವೇರಿ ವಿವಿ ಉದ್ಘಾಟನೆ: ನೂತನವಾಗಿ ಘೋಷಿಸಲಾದ ಹಾವೇರಿ ವಿಶ್ವವಿದ್ಯಾಲಯವನ್ನು ಅಕ್ಟೋಬರ್ ತಿಂಗಳಲ್ಲಿ ಉದ್ಘಾಟನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸವಣೂರಿನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಹಾವೇರಿ ಜಿಲ್ಲೆಯ ಶೈಕ್ಷಣಿಕ ಬೆಳವಣಿಗೆಗೆ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಈಗಾಗಲೇ ಸರ್ಕಾರಿ ವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಸಿದ್ಧತೆ ಮಾಡಲಾಗಿದೆ. ಬರುವ ಶೈಕ್ಷಣಿಕ ವರ್ಷದಿಂದ ಸವಣೂರಿನಲ್ಲಿ ಆಯುರ್ವೇದಿಕ್ ಕಾಲೇಜ್ ಶೈಕ್ಷಣಿಕ ಚಟುವಟಿಕೆ ಆರಂಭಿಸಲಾಗುವುದು.
undefined
ಚರ್ಮಗಂಟಿಗೆ ಬಲಿಯಾದ ಜಾನುವಾರಿಗೆ ಪರಿಹಾರ: ಸಿಎಂ ಬೊಮ್ಮಾಯಿ ಘೋಷಣೆ
ಹೊಸದಾಗಿ ಹಾವೇರಿಗೆ ಸರ್ಕಾರಿ ಕಾನೂನು ಕಾಲೇಜು ಮಂಜೂರು ಮಾಡಲಾಗಿದೆ ಎಂದು ಹೇಳಿದರು. ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರ ಸಚಿವರಾದ ಪ್ರಹ್ಲಾದ ಜೋಷಿ ಅವರು ಸವಣೂರ ಪಟ್ಟಣದಲ್ಲಿ ವೇದಾಂತ ಫೌಂಡೇಶನ್ ವತಿಯಿಂದ ಅಕ್ಷರ ಬಜಾರ್‌ನಲ್ಲಿ 18 ಲಕ್ಷ ರು.ಗಳ ವೆಚ್ಚದಲ್ಲಿ 139ನೇ ನೂತನ ಅಂಗನವಾಡಿ ಕೇಂದ್ರದ ಉದ್ಘಾಟನೆ ನೆರವೇರಿಸಿದರು. ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಅರಬೈಲ್ ಶಿವರಾಮ ಹೆಬ್ಬಾರ್ ಇದ್ದರು.
ಶೀಘ್ರದಲ್ಲಿ ಆಯುರ್ವೇದ ಕಾಲೇಜಿಗೆ ಅಡಿಗಲ್ಲು: ಸವಣೂರಿನ ಸಮಗ್ರ ಅಭಿವೃದ್ಧಿಯ ಕಲ್ಪನೆಯಿಂದ ಈ ಕೆಲಸ ಮಾಡಲಾಗುತ್ತಿದೆ. ಸವಣೂರಿಗೆ ಹೊಸ ಆಯುರ್ವೇದ ಕಾಲೇಜು ಮಂಜೂರು ಮಾಡಲಾಗಿದ್ದು, 2-3 ವಾರಗಳಲ್ಲಿ ಕಟ್ಟಡಕ್ಕೆ ಅಡಿಗಲ್ಲು ಹಾಕಲಾಗುವುದು. ಇಲ್ಲಿನ ಆಸ್ಪತ್ರೆ ಉನ್ನತೀಕರಣ, ಮಾಜಿ ಶಾಸಕ ಸಿಂಧೂರ ಅವರು ನೀಡಿರುವ ಸ್ಥಳದಲ್ಲಿ ಪದವಿ ಕಾಲೇಜು ಸ್ಥಾಪಿಸಲಾಗಿದೆ. ಇನ್ನೂ ಹೆಚ್ಚಿನ ಕೋರ್ಸುಗಳನ್ನು ಅಲ್ಲಿ ಸೇರ್ಪಡೆ ಮಾಡಲಾಗುವುದು. ಇಲ್ಲಿನ ಸಂಘಸಂಸ್ಥೆಗಳಿಗೆ ಸಹಾಯಧನ ಒದಗಿಸುವುದಾಗ ಹೇಳಿದರು.
ಕ್ಷೇತ್ರಕ್ಕಾಗಿ ದುಡಿಯುವ ಜವಾಬ್ದಾರಿ ನನ್ನ ಮೇಲಿದೆ: ಅಭಿವೃದ್ಧಿ ನಿರಂತರವಾದ ಪ್ರಕ್ರಿಯೆ. ರಾಜ್ಯದ ಸಮಗ್ರ ಅಭಿವೃದ್ಧಿಯ ಜೊತೆಗೆ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿಯುವ ಗುರುತರವಾದ ಜವಾಬ್ದಾರಿ ನನ್ನ ಮೇಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಟ್ಟಣದ ವಿದ್ಯಾಭಾರತಿ ಸಂಸ್ಥೆಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ಯಾರು ಭಾರತ್ ಜೋಡೋ ಮಾಡಿದ್ದಾರೆ, ತೋಡೋ ಮಾಡಿದ್ದಾರೆಂದು ಎಲ್ಲರಿಗೂ ಗೊತ್ತಿದೆ: ಸಿಎಂ ಬೊಮ್ಮಾಯಿ
ಸವಣೂರಿನಲ್ಲಿ ಐಟಿಐ ಕಾಲೇಜು ಮೇಲ್ದರ್ಜೆಗೇರಿಸಲು 30 ಕೋಟಿ ಮಂಜೂರು ಮಾಡಲಾಗಿದೆ. ಶಿಗ್ಗಾಂವಿ ಮತ್ತು ಸವಣೂರು ತಾಲೂಕಿನ ಕೆರೆಕಟ್ಟೆ, ರಸ್ತೆ, ಶಾಲೆಗಳ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ. ಮುಂದಿನ ಆಗಸ್ಟ್ 15ರೊಳಗೆ ರಾಜ್ಯದ ಎಲ್ಲ ಸರ್ಕಾರಿ ಹಿರಿಯ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಶೌಚಾಲಯಗಳನ್ನು ಹಾಗೂ 8000 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು. ಪಾಲಿಟೆಕ್ನಿಕ್, ಐಟಿಐ, ಜಿಟಿಟಿಸಿಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದರು.