
ಚಿತ್ರದುರ್ಗ(ಸೆ.25): ಸಾಲ ತೀರುವಳಿ ಸಂಬಂಧ ಬ್ಯಾಂಕುಗಳು ರೈತರ ಆಸ್ತಿಪಾಸ್ತಿ ಜಪ್ತಿ ಮಾಡುವುದನ್ನು ನಿಷೇಧಿಸಲು ಅಗತ್ಯ ಕಾನೂನು ತಿದ್ದುಪಡಿ ಮಾಡಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಿರಿಗೆರೆಯಲ್ಲಿ ಶನಿವಾರ ನಡೆದ ಲಿಂಗೈಕ್ಯ ತರಳಬಾಳು ಜಗದ್ಗುರು ಶಿವಕುಮಾರ ಶ್ರೀಗಳ 30ನೇ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಈ ಘೋಷಣೆ ಮಾಡಿದರು. ಈ ಸಂಬಂಧ ಶೀಘ್ರದಲ್ಲೇ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದು ಹೇಳಿದರು.
ರೈತ ಸಂಘಟನೆಗಳು ಆಸ್ತಿಪಾಸ್ತಿ ಜಪ್ತಿ ವಿಚಾರವನ್ನು ನನ್ನ ಗಮನಕ್ಕೆ ತಂದಿದ್ದಾರೆ. ನಾಡಿನ ಕೆಲವೆಡೆ ಪ್ರವಾಹದಿಂದ ರೈತರ ಬೆಳೆ ಹಾಳಾಗಿ ಸಂಕಷ್ಟದ ಸನ್ನಿವೇಶ ಎದುರಾಗಿದೆ. ರೈತರು ಸಂಕಷ್ಟದಲ್ಲಿರುವಾಗ ಸಾಲ ವಸೂಲಾತಿಗೆ ಹಣಕಾಸು ಸಂಸ್ಥೆಗಳು, ಬ್ಯಾಂಕುಗಳು ಮನೆ, ಜಮೀನು, ಆಸ್ತಿಗಳನ್ನು ಜಪ್ತಿ ಮಾಡುವುದು ಸೂಕ್ತವಲ್ಲ. ಇದಕ್ಕೆ ಅಂತ್ಯವಾಡಲು ಸರ್ಕಾರ ಬದ್ಧವಿದೆ. ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು ರೈತರ ಸಾಲ ಮರುಪಾವತಿಗೆ ಒತ್ತಾಯಿಸಿ ಜಪ್ತಿ ಮಾಡದಂತೆ ಕ್ರಮ ಕೈಗೊಳ್ಳಲಾಗುವುದು. ಸಾಲ ತೀರಿಸುವ ಸಂಬಂಧ ಮಾರ್ಗೋಪಾಯಗಳನ್ನು ಕಂಡುಕೊಳ್ಳಲಾಗುವುದು ಎಂದರು.
CHITRADURGA: ಸಿಎಂ ಬೊಮ್ಮಾಯಿ ಸಹ ಪ್ರಾಮಾಣಿಕ ಹೆಜ್ಜೆಯಿಡುತ್ತಿದ್ದಾರೆ: ಯಡಿಯೂರಪ್ಪ
ಜತೆಗೆ, ನಮ್ಮ ಸರ್ಕಾರ ರೈತರ ನೆರವಿಗೆ ಬರಲು ಸದಾ ಸಿದ್ಧವಿದೆ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ರಾಜ್ಯದಲ್ಲಿ 14 ಲಕ್ಷ ರೈತರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆ ಜಾರಿಗೊಳಿಸಲಾಗಿದೆ ಎಂದ ಅವರು, ಮುಂದಿನ ದಿನಗಳಲ್ಲಿ ಕೃಷಿ ಕಾರ್ಮಿಕರು, ನೇಕಾರರು, ಮೀನುಗಾರರು, ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳು ಸೇರಿದಂತೆ ಎಲ್ಲಾ ದುಡಿಯುವ ವರ್ಗದ ಮಕ್ಕಳಿಗೆ ರೈತವಿದ್ಯಾನಿಧಿ ಯೋಜನೆ ವಿಸ್ತರಿಸಲಾಗುವುದು ಎಂದು ಮಾಹಿತಿ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ