ಸ್ವಾಭಿಮಾನಿ ಕರ್ನಾಟಕ ಕಟ್ಟುವೆ: ಸಿಎಂ ಬೊಮ್ಮಾಯಿ

Published : Mar 24, 2023, 12:30 AM IST
ಸ್ವಾಭಿಮಾನಿ ಕರ್ನಾಟಕ ಕಟ್ಟುವೆ: ಸಿಎಂ ಬೊಮ್ಮಾಯಿ

ಸಾರಾಂಶ

ಒಂದು ವರ್ಷದ ಹಿಂದೆ ಕಂಡ ಕನಸು ನನಸಾಗಿದೆ. ವಿದ್ಯಾನಿಧಿಯಿಂದ 11 ಲಕ್ಷ ರೈತರ ಮಕ್ಕಳಿಗೆ, ಮೀನುಗಾರರು, ನೇಕಾರರ ಮಕ್ಕಳಿಗೆ ಅನುಕೂಲ ಆಗಿದೆ. ಅಭಿವೃದ್ಧಿಯ ಪಯಣ ಮುಂದುವರೆಯಲಿ. ಜನರ ಆಶೀರ್ವಾದ, ಬೆಂಬಲದಿಂದ ಮುಖ್ಯಮಂತ್ರಿ ಹುದ್ದೆಯಲ್ಲಿದ್ದು, ಜನರ ಆಶೀರ್ವಾದದಿಂದ ಸ್ವಾಭಿಮಾನಿ ಕರ್ನಾಟಕ ಕಟ್ಟಲು ಸಂಪೂರ್ಣ ಶಕ್ತಿಯನ್ನು ಬಳಕೆ ಮಾಡುವುದಾಗಿ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. 

ಬೆಂಗಳೂರು(ಮಾ.24): ಕುರಿಗಾರರು, ಕುಂಬಾರರು ಸೇರಿದಂತೆ ನಾಡಿನ ಎಲ್ಲಾ ವೃತ್ತಿ ವರ್ಗದ ಕುಟುಂಬ ಹಾಗೂ ಅವರ ಮಕ್ಕಳಿಗೆ ಭವ್ಯಭವಿಷ್ಯ ರೂಪಿಸುವುದರೊಂದಿಗೆ ಸ್ವಾಭಿಮಾನದ ಕರ್ನಾಟಕ ಕಟ್ಟಲು ಶ್ರಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಗುರುವಾರ ಆಯೋಜಿಸಿದ್ದ ಆಟೋ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ, ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಸ್ವಸಹಾಯ ಗುಂಪುಗಳಿಗೆ ಸಮುದಾಯ ಬಂಡವಾಳ ನಿಧಿ ವಿತರಣೆ, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಹಾಗೂ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಧಮ್, ತಾಕತ್ ಇದ್ರೆ ಜೆಡಿಎಸ್ ಯಾತ್ರೆ ನಿಲ್ಲಿಸಿ: ಸಿಎಂ ಬೊಮ್ಮಾಯಿಗೆ ಕಂದಕೂರ ಸವಾಲ್‌

ಒಂದು ವರ್ಷದ ಹಿಂದೆ ಕಂಡ ಕನಸು ನನಸಾಗಿದೆ. ವಿದ್ಯಾನಿಧಿಯಿಂದ 11 ಲಕ್ಷ ರೈತರ ಮಕ್ಕಳಿಗೆ, ಮೀನುಗಾರರು, ನೇಕಾರರ ಮಕ್ಕಳಿಗೆ ಅನುಕೂಲ ಆಗಿದೆ. ಅಭಿವೃದ್ಧಿಯ ಪಯಣ ಮುಂದುವರೆಯಲಿ. ಜನರ ಆಶೀರ್ವಾದ, ಬೆಂಬಲದಿಂದ ಮುಖ್ಯಮಂತ್ರಿ ಹುದ್ದೆಯಲ್ಲಿದ್ದು, ಜನರ ಆಶೀರ್ವಾದದಿಂದ ಸ್ವಾಭಿಮಾನಿ ಕರ್ನಾಟಕ ಕಟ್ಟಲು ಸಂಪೂರ್ಣ ಶಕ್ತಿಯನ್ನು ಬಳಕೆ ಮಾಡುವುದಾಗಿ ತಿಳಿಸಿದರು.

ಕುರಿಗಾಹಿಗಳಿಗೆ 355 ಕೋಟಿ ರು. ಮೀಸಲಿಡಲಾಗಿದ್ದು, 20 ಕುರಿ, ಒಂದು ಮೇಕೆ ಖರೀದಿಗೆ 20 ಸಾವಿರ ಕುರಿಗಾಹಿಗಳಿಗೆ ತಲಾ 1.31 ಲಕ್ಷ ರು. ನೀಡಲಾಗುವುದು. ಕುರಿ ಉಣ್ಣೆ ಉತ್ಪಾದನೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ಇದೆ. ಕುರಿ ಮಾಂಸ ಉತ್ಪಾದನೆ ಹೆಚ್ಚಳವಾಗಿ ಮಾಂಸ ವಿದೇಶಗಳಿಗೆ ರಪ್ತು ಆಗಬೇಕು. ಕುರಿಗಾಹಿಗಳ ಆದಾಯ ದ್ವಿಗುಣವಾಗಬೇಕು. ಉತ್ಪಾದನೆಯನ್ನು ಅಮೃತ ಕುರಿಗಾಹಿ ಯೋಜನೆ ಮಾರುಕಟ್ಟೆಗೆ ಜೋಡಿಸುತ್ತದೆ. ಇನ್ನೂ 50 ಸಾವಿರ ಕುರಿಗಾಹಿಗಳ ಸಂಘಗಳಿಗೆ ಯೋಜನೆಯ ಫಲ ನೀಡಲಿದೆ ಎಂದು ವಿವರಿಸಿದರು.

50 ಕನಕ ಹಾಸ್ಟೆಲ್‌:

ಕಳೆದ ಒಂದು ವರ್ಷದಲ್ಲಿ 50 ಕನಕದಾಸ ಹಾಸ್ಟೆಲ್‌ ನಿರ್ಮಾಣ ಮಾಡಲಾಗಿದೆ. 5 ಮೆಗಾ ಹಾಸ್ಟೆಲ್‌, ಮುಂದಿನ ವರ್ಷ ಐದು ಸಾವಿರ ಮಕ್ಕಳಿಗೆ ಹಾಸ್ಟೆಲ್‌ ತೆರೆಯಲಾಗುವುದು. ಶಿಕ್ಷಣದಿಂದ ಬದಲಾವಣೆ ಸಾಧ್ಯ. ಹಿಂದುಳಿದ ವರ್ಗಗಳಿಗೆ ಆರ್ಥಿಕ, ಶಿಕ್ಷಣ, ಮುಂತಾದ ಕಾರ್ಯಕ್ರಮಗಳನ್ನು ರೂಪಿಸಿ ಸಮಾಜದಲ್ಲಿ ಬದಲಾವಣೆ ತರಲಾಗಿದೆ ಎಂದರು.

ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯಡಿ 12 ಸಾವಿರ ಯುವ ಸಂಘಗಳನ್ನು ರಚಿಸಿ ತರಬೇತಿ, ಉತ್ಪಾದನೆ, ಮಾರುಕಟ್ಟೆ, ಬ್ಯಾಂಕ್‌ ಸಹಾಯ ನೀಡಿ ಸ್ವಯಂ ಉದ್ಯೋಗಿಗಳಾಗಲು ನೆರವು ನೀಡಲಾಗುತ್ತಿದೆ. ಇದೊಂದು ಕ್ರಾಂತಿಕಾರಿ ಯೋಜನೆಯಾಗಿದೆ. ಮಹಿಳೆಯರ ಸಾಮರ್ಥ್ಯ ರಾಜ್ಯಕ್ಕೆ ಉಪಯೋಗ ಆಗಬೇಕು ಎಂದು ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿಗೆ ತಂದಿದ್ದೇವೆ. ಮೊದಲ ಕಂತು 50 ಸಾವಿರ ರು.ಗಳನ್ನು 10 ಸಾವಿರ ಸಂಘಗಳಿಗೆ ನೀಡಿದ್ದು, ಎರಡನೇ ಕಂತಿನಲ್ಲಿ 50 ಸಾವಿರ ರು. ದೊರೆಯಲಿದೆ. 20 ಸಾವಿರ ಸಂಘಗಳಿಗೆ ನೇರವಾಗಿ ಅವರ ಖಾತೆಗಳಿಗೆ ಜಮಾ ಆಗಿದೆ. ತರಬೇತಿ ನೀಡಿ ಉತ್ಪಾದನೆಗೆ ಪೂರಕವಾಗಿ ನೆರವು ನೀಡಲಾಗುತ್ತಿದೆ ಎಂದು ಹೇಳಿದರು.

ಈ ವರ್ಷದ ಬಜೆಟ್‌ ನಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ಸಾವಿರ ರು. ನೀಡುವ ಯೋಜನೆಗೆ ಅನುದಾನ ಮೀಸಲಿಡಲಾಗಿದೆ. ಯೋಜನೆ ಕೂಡಲೇ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 2.5 ಲಕ್ಷ ಆಟೋ ಚಾಲಕರಿದ್ದಾರೆ. ಅವರಿಗೆ ವಿಮೆ ಯೋಜನೆ ಜಾರಿಗೆ ತರಲಾಗಿದೆ. ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾನಿಧಿ ಯೋಜನೆ ಜಾರಿಗೊಳಿಸಲಾಗಿದೆ. 15 ಸಾವಿರ ಆಟೋ ಚಾಲಕರ ಮಕ್ಕಳಿಗೆ ವಿದ್ಯಾನಿಧಿಯಡಿ 2,500 ರಿಂದ 11 ಸಾವಿರ ರು. ವರೆಗೆ ನೆರವು ದೊರೆಯಲಿದೆ. ದುಡಿಯುವ ವರ್ಗಗಳಲ್ಲಿ ಪ್ರತಿಯೊಬ್ಬರಿಗೆ 50 ಸಾವಿರ ರು. ನೀಡಿ ಅವರ ಉದ್ಯೋಗಕ್ಕೆ ಅನುಕೂಲ ಮಾಡುವ ಕಾಯಕ ಯೋಜನೆ ಜಾರಿಯಲ್ಲಿದೆ. ನಾಡು ಕಟ್ಟಲು ದುಡಿಯುವ ವರ್ಗದಿಂದ ಮಾತ್ರ ಸಾಧ್ಯ. ಕುರಿಗಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದರು.

ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ್‌, ಯುವ ಸಬಲೀಕರಣ ಸಚಿವ ಕೆ.ಸಿ.ನಾರಾಯಣಗೌಡ ಇತರರಿದ್ದರು.

ರೆಬೆಲ್‌ಸ್ಟಾರ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌: ರೇಸ್‌ ಕೋರ್ಸ್‌ ರಸ್ತೆಗೆ ಅಂಬರೀಶ್‌ ಹೆಸರು

ಮಾತನಾಡಿ, ರಾಜ್ಯದ ಒಂದು ಲಕ್ಷ ಮಹಿಳಾ ಸ್ವ ಸಹಾಯ ಗುಂಪುಗಳಿಗೆ 500 ಕೋಟಿ ರು.ಗಳನ್ನು ಸರ್ಕಾರ ನೀಡಿದೆ. ವಿವಿಧ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ರೈತರಿಗೆ ಅನುಕೂಲವಾಗುವ ತಂತ್ರಜ್ಞಾನ ಮತ್ತು ಸಂಶೋಧನೆಗಳನ್ನು ಮಾಡಲಾಗುತ್ತಿದೆ. ಹೀಗೆ, ಮಹಿಳಾ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ ಎಂದು ಹೇಳಿದರು. ಸಮಾರಂಭದಲ್ಲಿ ಯೋಜನೆಯ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ಈ ವೇಳೆ ಪಶುಸಂಗೋಪನೆ ಇಲಾಖೆ ಸಚಿವ ಪ್ರಭು ಚೌಹಾಣ್‌, ಶಾಸಕ ರಿಜ್ವಾನ್‌ ಅರ್ಷದ್‌ ಮೊದಲಾದವರಿದ್ದರು.

9548 ವಿವೇಕಾನಂದ ಗುಂಪು ರಚನೆ

ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಿಸಿದ್ದಂತೆ ರಾಜ್ಯದಲ್ಲಿ 9548 ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳನ್ನು ರಚಿಸಲಾಗಿದೆ. ನೋಂದಣಿ ಮಾಡಲಾಗಿದೆ. ನೋಂದಣಿಯಾಗಿರುವ 5 ಸಾವಿರ ಸಂಘಗಳಿಗೆ ಈಗಾಗಲೇ ತಲಾ 10 ಸಾವಿರ ರು. ಸುತ್ತು ನಿಧಿ ಬಿಡುಗಡೆ ಮಾಡಲಾಗಿದೆ. ಯೋಜನಾ ಚಟುವಟಿಕೆಗೆ 5 ಲಕ್ಷ ರು. ಬ್ಯಾಂಕ್‌ ಸಾಲ ಸೌಲಭ್ಯ ಹಾಗೂ ಒಂದು ಲಕ್ಷ ರು. ಸಬ್ಸಿಡಿ ನೀಡಲಾಗುತ್ತಿದೆ ಅಂತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ