ಗಡಿ ವಿಚಾರದಲ್ಲಿ ಕರ್ನಾಟಕದ ಹಿತರಕ್ಷಣೆಗೆ ಹಿಂದೇಟು ಇಲ್ಲ: ಸಿಎಂ ಬೊಮ್ಮಾಯಿ

By Kannadaprabha News  |  First Published Dec 23, 2022, 10:00 PM IST

ಗಡಿ ವಿವಾದ ಸುಪ್ರೀಂಕೋರ್ಟ್‌ನಲ್ಲಿದೆ. ವಿಚಾರ ನ್ಯಾಯಾಲಯದಲ್ಲಿರುವಾಗ ರಾಜಕೀಯ ಹೇಳಿಕೆಗಳನ್ನು ನೀಡುವುದನ್ನು ಮಹಾರಾಷ್ಟ್ರದ ನಾಯಕರು ಮಾಡಬಾರದು. ಅದರಲ್ಲೂ ಪ್ರಚೋದನೆ ನೀಡುವ ಅಸಂಬದ್ಧ ಹೇಳಿಕೆಗಳನ್ನು ನೀಡುವುದರಿಂದ ಏನೂ ಪ್ರಯೋಜನವಿಲ್ಲ ಎಂದ ಸಿಎಂ ಬೊಮ್ಮಾಯಿ 


ಸುವರ್ಣಸೌಧ(ಡಿ.23): ಗಡಿ ವಿವಾದ ಕುರಿತು ಕರ್ನಾಟಕದ ನಿಲುವು ಸಮರ್ಪವಾಗಿದ್ದು, ರಾಜ್ಯದ ಹಿತ ಕಾಪಾಡಲು ಯಾವುದೇ ಕಾರಣಕ್ಕೂ ಹಿಂದೇಟು ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗಡಿ ವಿವಾದ ಸುಪ್ರೀಂಕೋರ್ಟ್‌ನಲ್ಲಿದೆ. ವಿಚಾರ ನ್ಯಾಯಾಲಯದಲ್ಲಿರುವಾಗ ರಾಜಕೀಯ ಹೇಳಿಕೆಗಳನ್ನು ನೀಡುವುದನ್ನು ಮಹಾರಾಷ್ಟ್ರದ ನಾಯಕರು ಮಾಡಬಾರದು. ಅದರಲ್ಲೂ ಪ್ರಚೋದನೆ ನೀಡುವ ಅಸಂಬದ್ಧ ಹೇಳಿಕೆಗಳನ್ನು ನೀಡುವುದರಿಂದ ಏನೂ ಪ್ರಯೋಜನವಿಲ್ಲ ಎಂದು ತಿಳಿಸಿದರು.

ಮಹಾರಾಷ್ಟ್ರದ ವಿಪಕ್ಷದ ಸದಸ್ಯರು ಗಡಿಗೆ ನುಗ್ಗಿಸುವುದಾಗಿ ಹೇಳುತ್ತಾರೆ. ಅವರು ಚೀನಾ ಸೇನೆ ಭಾರತಕ್ಕೆ ನುಗ್ಗಿದಂತೆ ಬೆಳಗಾವಿಗೆ ನುಗ್ಗಿದರೆ ಕನ್ನಡಿಗರು ಭಾರತೀಯ ಸೈನ್ಯದಂತೆ ಅವರನ್ನು ಹಿಮ್ಮೆಟ್ಟಿಸುವರು ಎಂದು ಬೊಮ್ಮಾಯಿ ಅವರು ಪುನರುಚ್ಚರಿಸಿದರು.

Tap to resize

Latest Videos

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ರಾಜ್ಯ ಸರ್ಕಾರಕ್ಕೆ ಗಂಭೀರತೆ ಇಲ್ಲ, ಎಚ್‌ಕೆಪಿ

ಇನ್ನು ಕರ್ನಾಟಕಕ್ಕೆ ಕೃಷ್ಣಾ ನದಿ ನೀರು ಬಿಡಬಾರದು ಎಂಬ ಮಹಾರಾಷ್ಟ್ರ ವಿಪಕ್ಷ ಶಾಸಕರ ಹೇಳಿಯೂ ಅಸಂಬದ್ಧ. ದೇಶದ ಬಹುತೇಕ ನದಿಗಳು ಮೂರ್ನಾಲ್ಕು ರಾಜ್ಯಗಳಲ್ಲಿ ಹರಿಯುತ್ತಿವೆ. ಅಂತರ್‌ರಾಜ್ಯ ನದಿಗಳು ಅಂತರ್‌ರಾಜ್ಯ ಜಲ ವಿವಾದ ಕಾಯ್ದೆಯಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ರಾಜ್ಯಗಳು ಪರಸ್ಪರ ಸಹಕಾರ ನೀಡಬೇಕಿರುತ್ತದೆ. ರಾಜ್ಯಗಳ ನಡುವೆ ನಿಲುವುಗಳಲ್ಲಿ ವ್ಯತ್ಯಾಸವಿದ್ದರೂ ಇಂತಹ ಹೇಳಿಕೆಗಳನ್ನು ನೀಡಬಾರದು. ಇಂತಹ ಉದ್ಧಟತನದ ಮಾತುಗಳಿಂದ ಏನೂ ಪ್ರಯೋಜನವಿಲ್ಲ ಎಂದು ಅವರು ಹೇಳಿದರು.

click me!