ಅಭಿವೃದ್ಧಿಗೆ ಪ್ರೇರಣೆ ಆಗಲಿ ಎಂದು ಕೆಂಪೇಗೌಡ ಪ್ರತಿಮೆ ಸ್ಥಾಪನೆ: ಸಿಎಂ ಬೊಮ್ಮಾಯಿ

By Govindaraj S  |  First Published Nov 11, 2022, 6:21 AM IST

ನಮ್ಮ ಹೆಮ್ಮೆಯ ನಾಡಪ್ರಭು ಹೆಸರಿನಲ್ಲಿರುವ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಪ್ರಗತಿ ಪ್ರತಿಮೆಯನ್ನು ಅಭಿವೃದ್ಧಿಗೆ ಪ್ರೇರಣೆಯಾಗುವ ದೃಷ್ಟಿಯಿಂದ ನಿರ್ಮಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 


ಬೆಂಗಳೂರು (ನ.11): ನಮ್ಮ ಹೆಮ್ಮೆಯ ನಾಡಪ್ರಭು ಹೆಸರಿನಲ್ಲಿರುವ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಪ್ರಗತಿ ಪ್ರತಿಮೆಯನ್ನು ಅಭಿವೃದ್ಧಿಗೆ ಪ್ರೇರಣೆಯಾಗುವ ದೃಷ್ಟಿಯಿಂದ ನಿರ್ಮಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭಾ ವೇದಿಕೆ ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆ ಹಾಗೂ ವ್ಯವಸ್ಥೆಗಳನ್ನು ಗುರುವಾರ ಪರಿಶೀಲನೆ ನಡೆಸಿ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು ನಿರ್ಮಿಸಿದವರು ಭಾರತದ ಶ್ರೇಷ್ಠ ಶಿಲ್ಪಿ ರಾಮ್‌ ಸುತಾರಾ. ಇವರು ಅಹಮದಾಬಾದ್‌ನಲ್ಲಿರುವ ವಲ್ಲಭಭಾಯಿ ಪಟೇಲ್‌ ಅವರ ಐಕ್ಯತಾ ಮೂರ್ತಿ ಹಾಗೂ ಅಂಬೇಡ್ಕರ್‌ ಅವರ ಅತಿ ಎತ್ತರದ ಮೂರ್ತಿ ನಿರ್ಮಿಸಿದ ಖ್ಯಾತಿ ಹೊಂದಿದ್ದಾರೆ. ಶುಕ್ರವಾರ ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರು ರಾಮ್‌ ಸುತಾರಾ ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಅವರ ಕೈಚಳಕದಿಂದ ಇಷ್ಟು ಬೃಹತ್‌ ಮೂರ್ತಿ ಮೈದಳೆದಿದೆ. ಸಮಸ್ತ ಕನ್ನಡ ನಾಡಿನ ಜನತೆಯ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

Tap to resize

Latest Videos

ಸರ್ಕಾರಿ ನೌಕರರು 1 ತಾಸು ಹೆಚ್ಚು ಕೆಲಸ ಮಾಡಿ: ಸಿಎಂ ಬೊಮ್ಮಾಯಿ

ಕನಕ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನಗರಕ್ಕೆ ಆಗಮಿಸಿರುವುದು ಯೋಗಾಯೋಗಾ. ಒಬ್ಬ ಹಿಂದುಳಿದ ವರ್ಗಕ್ಕೆ ಸೇರಿದ ಪ್ರಧಾನಮಂತ್ರಿ ಸಮಸ್ತ ಮಾನವಕುಲಕ್ಕೆ ದಾರಿದೀಪವಾಗಿರುವ ಕನಕದಾಸರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವುದು ನಮ್ಮೆಲ್ಲರಿಗೂ ಸಂತೋಷ ತಂದಿದೆ. ಅಷ್ಟೇ ಅಲ್ಲದೆ, ಇದೇ ವೇಳೆ ಪಕ್ಕದಲ್ಲಿಯೇ ಇರುವ ವಾಲ್ಮೀಕಿ ಮೂರ್ತಿಗೂ ಪುಷ್ಪಾರ್ಚನೆ ಮಾಡಲಿದ್ದಾರೆ ಎಂದರು.

ಪುಷ್ಪಾರ್ಚನೆ ಬಳಿಕ ರೈಲ್ವೇ ನಿಲ್ದಾಣದಲ್ಲಿ ವಂದೇ ಭಾರತ್‌ ಹೈಸ್ಪೀಡ್‌ ರೈಲನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ರೈಲು ಸೇವೆಯಿಂದ ಬೆಂಗಳೂರು- ಮೈಸೂರು, ಚೆನ್ನೈ ಕಡೆ ಪ್ರಯಾಣಿಸುವವರು, ಬೆಂಗಳೂರು- ಮೈಸೂರು ಪ್ರಯಾಣದ ಅವಧಿಯನ್ನು ಅತ್ಯಂತ ಕಡಿಮೆ ಸಮಯದಲ್ಲಿ ತಲುಪಬಹುದು. ಇದು ಪ್ರಯಾಣಿಕರ ಬಹಳ ದಿನಗಳ ಬೇಡಿಕೆ ಇತ್ತು. ಅದನ್ನು ಪ್ರಧಾನಿಮಂತ್ರಿ ಅವರು ವಂದೇ ಮಾತರಂ ಯೋಜನೆಯಲ್ಲಿ ಸೇರಿಸಿದ್ದು, ಭಾರತದಲ್ಲಿ ಐದನೇ ರೈಲು ಹಾಗೂ ದಕ್ಷಿಣ ಭಾರತದಲ್ಲಿ ಮೊದಲ ಹೈಸ್ಪೀಡ್‌ ರೈಲನ್ನು ಉದ್ಘಾಟನೆ ಮಾಡುತ್ತಿರುವುದು ಆ ಭಾಗದ ಪ್ರಯಾಣಿಕರಿಗೆ ಹಾಗೂ ಆರ್ಥಿಕ ಬೆಳವಣಿಗೆಗೂ ಕೂಡ ಅನುಕೂಲವಾಗಲಿದೆ ಎಂದು ತಿಳಿಸಿದರು.

ವಂದೇ ಭಾರತ್‌ ರೈಲು ಸೇವೆ ಉದ್ಘಾಟನೆ ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಿ ಎರಡನೇ ಟರ್ಮಿನಲ್‌ ಉದ್ಘಾಟಿಸಲಿದ್ದಾರೆ. ಬಳಿಕ ಉದ್ಘಾಟನೆಯ ನಂತರ ನಾಡಪ್ರಭು ಕೇಂಪೇಗೌಡರ ಕಂಚಿನ ಪ್ರಗತಿ ಪ್ರತಿಮೆ ಅನಾವರಣ ಮಾಡಿ ಸಾರ್ವಜನಿಕ ಸಭೆಗೆ ತೆರಳುತ್ತಾರೆ. ಅಲ್ಲಿ ಭಾಷಣ ಮುಗಿಸಿ ಮುಂದಿನ ಪ್ರಯಾಣ ಮಾಡಲಿದ್ದಾರೆ ಎಂದು ಶುಕ್ರವಾರದ ಕಾರ್ಯಕ್ರಮದ ವಿವರ ನೀಡಿದರು. ಇದೇ ವೇಳೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌, ಸಚಿವರಾದ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಆರ್‌.ಅಶೋಕ್‌, ಸಿ.ಸಿ.ಪಾಟೀಲ್‌ ಮತ್ತಿತರರಿದ್ದರು.

ನಮ್ಮದು ಜನಸ್ಪಂದನೆಯ ಸರ್ಕಾರ: ಸಿಎಂ ಬೊಮ್ಮಾಯಿ

ಮೃತ್ತಿಕೆ ಸಮರ್ಪಿಸಿದ ಸಿಎಂ: ಕೆಂಪೇಗೌಡ ಪ್ರತಿಮೆ ಹಾಗೂ ಥೀಮ್‌ ಪಾರ್ಕ್ ನಿರ್ಮಾಣಕ್ಕಾಗಿ ರಾಜ್ಯಾದ್ಯಂತ ಸಂಗ್ರಹಿಸಿದ ಮೃತ್ತಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಂಕೇತಿಕವಾಗಿ ಗೋಪುರಕ್ಕೆ ಸಮರ್ಪಿಸಿದರು. ಇದಕ್ಕಾಗಿ ರಾಜ್ಯದ ಸುಮಾರು 18 ಸಾವಿರ ಗ್ರಾಮಗಳಿಂದ ಮೃತ್ತಿಕೆ (ಮಣ್ಣು) ಸಂಗ್ರಹಿಸಲಾಗಿದೆ. ಅದೆಲ್ಲವನ್ನೂ ಮಿಶ್ರಣಗೊಳಿಸಿ ಈ ಥೀಮ್‌ ಪಾರ್ಕ್ ನಿರ್ಮಾಣದಲ್ಲಿ ಬಳಸಿಕೊಳ್ಳಲಾಗುತ್ತದೆ.

click me!