ಅಂಜನಾದ್ರಿಗೆ ಇಂದು ಸಿಎಂ ಬೊಮ್ಮಾಯಿ ಭೇಟಿ: ವೈಮಾನಿಕ ಸಮೀಕ್ಷೆ

By Govindaraj S  |  First Published Aug 1, 2022, 5:16 AM IST

ಕೊಪ್ಪಳ ಜಿಲ್ಲೆಯಲ್ಲಿರುವ ಹನುಮನ ಜನ್ಮಸ್ಥಳ ಅಂಜನಾದ್ರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ತಿರುಪತಿಯಲ್ಲಿರುವ ಅಂಜನಾದ್ರಿಯೇ ಹನುಮನ ಜನ್ಮಸ್ಥಳ ಎಂದು ತಿರುಮಲ- ತಿರುಪತಿ ದೇಗುಲ (ಟಿಟಿಡಿ) ಮಂಡಳಿ ತಗಾದೆ ತೆಗೆದಿರುವಾಗಲೇ, ಮುಖ್ಯಮಂತ್ರಿಗಳ ಈ ಭೇಟಿ ಮಹತ್ವ ಪಡೆದುಕೊಂಡಿದೆ. 


ಗಂಗಾವತಿ (ಆ.01): ಕೊಪ್ಪಳ ಜಿಲ್ಲೆಯಲ್ಲಿರುವ ಹನುಮನ ಜನ್ಮಸ್ಥಳ ಅಂಜನಾದ್ರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ತಿರುಪತಿಯಲ್ಲಿರುವ ಅಂಜನಾದ್ರಿಯೇ ಹನುಮನ ಜನ್ಮಸ್ಥಳ ಎಂದು ತಿರುಮಲ- ತಿರುಪತಿ ದೇಗುಲ (ಟಿಟಿಡಿ) ಮಂಡಳಿ ತಗಾದೆ ತೆಗೆದಿರುವಾಗಲೇ, ಮುಖ್ಯಮಂತ್ರಿಗಳ ಈ ಭೇಟಿ ಮಹತ್ವ ಪಡೆದುಕೊಂಡಿದೆ. 

ಪಾದಗಟ್ಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮುಖ್ಯಮಂತ್ರಿಗಳು ಬೆಟ್ಟದ ಸುತ್ತಮುತ್ತ ವೈಮಾನಿಕ ಸಮೀಕ್ಷೆ ಮಾಡಲಿದ್ದಾರೆ. ಬಳಿಕ ಸಭೆ ನಡೆಯಲಿದ್ದು, ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಘೋಷಣೆ ಮಾಡಿದ ಅನುದಾನದಲ್ಲಿ ಏನೇನು ಸೌಲಭ್ಯಗಳನ್ನು ಕಲ್ಪಿಸಬೇಕು ಮತ್ತು ರಸ್ತೆಯ ನಿರ್ಮಾಣ ಸಂದರ್ಭದಲ್ಲಿ ರೈತರು ಹೊಲ-ಗದ್ದೆಗಳನ್ನು ಭೂಸ್ವಾಧೀನಪಡಿಸಿಕೊಳ್ಳಬೇಕೆಂಬ ವಿಷಯ ಚರ್ಚೆಯಾಗಲಿದೆ. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ, ಹಂಪಿ ಪ್ರಾಧಿಕಾರ, ಪ್ರಾಚ್ಯವಸ್ತು ಇಲಾಖೆ ಸೇರಿದಂತೆ ಜಿಲ್ಲಾಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

Tap to resize

Latest Videos

Anand Singh: ಅಂಜನಾದ್ರಿ ಅಭಿವೃದ್ಧಿಗೆ ಸರ್ಕಾರ ಬದ್ಧ: 15 ದಿನದೊಳಗೆ ನೀಲನಕ್ಷೆ ಸಿದ್ಧ

ಈಗಾಗಲೇ ರಾಜ್ಯ ಸರ್ಕಾರ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ .100 ಕೋಟಿ ಅನುದಾನ ಘೋಷಣೆ ಮಾಡಿದೆ. ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್‌. ಯಡಿಯೂರಪ್ಪ ಅವರೂ ಸಹ .20 ಕೋಟಿ ಘೋಷಣೆ ಮಾಡಿದ್ದರು. ಈಗ ಸರ್ಕಾರವು .100 ಕೋಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಬೆಟ್ಟದ ಅಭಿವೃದ್ಧಿಗೆ ಮತ್ತು ರಸ್ತೆ ಸೇರಿದಂತೆ ಬರುವ ಪ್ರವಾಸಿಗರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಕೊಪ್ಪಳ ಜಿಲ್ಲೆಯ ಅಂಜನಾದ್ರಿಯೇ ಹನುಮ ಜನ್ಮಸ್ಥಳ ಎಂದು ರಾಮಾಯಣ ಕಾಲದಿಂದಲೂ ನಂಬಿಕೊಂಡು ಬರಲಾಗಿದೆ. ಆದರೆ ಇತ್ತೀಚೆಗೆ ತಿರುಪತಿ ದೇವಸ್ಥಾನ ಮಂಡಳಿ, ತಿರುಪತಿಯಲ್ಲಿರುವ ಅಂಜನಾದ್ರಿ ಹನುಮ ಜನ್ಮಸ್ಥಳವೆಂದು ವಾದಿಸುತ್ತಿದೆ. ಹೀಗಾಗಿ ಕೊಪ್ಪಳದ ಅಂಜನಾದ್ರಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಥಮ ಬಾರಿಗೆ ಅಂಜನಾದ್ರಿಗೆ ಆಗಮಿಸುತ್ತಿದ್ದಾರೆ.

ತಾತ್ಕಾಲಿಕ ಶೆಡ್‌ ನಿರ್ಮಾಣ: ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಘೋಷಣೆ ಮಾಡಿದ ಅನುದಾನದಲ್ಲಿ ಏನೇನು ಸೌಲಭ್ಯಗಳನ್ನು ಕಲ್ಪಿಸಬೇಕು ಮತ್ತು ರಸ್ತೆಯ ನಿರ್ಮಾಣ ಸಂದರ್ಭದಲ್ಲಿ ರೈತರು ಹೊಲ- ಗದ್ದೆಗಳನ್ನು ಭೂಸ್ವಾಧೀನಪಡಿಸಿಕೊಳ್ಳ ಬೇಕೆಂಬ ವಿಷಯ ಚರ್ಚೆಯಾಗಲಿದೆ. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ, ಹಂಪಿ ಪ್ರಾಧಿಕಾರ, ಪ್ರಾಚ್ಯವಸ್ತು ಇಲಾಖೆ ಸೇರಿದಂತೆ ಜಿಲ್ಲಾಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಬಿಗಿ ಭದ್ರತೆ: ಅಂಜನಾದ್ರಿ ಬೆಟ್ಟಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆ ಪೊಲೀಸ್‌ ಇಲಾಖೆ ಬಿಗಿ ಭದ್ರತೆ ಕೈಗೊಂಡಿದೆ. ಮುಖ್ಯಮಂತ್ರಿಗಳು ಬಂದು ಹೋಗುವ ತನಕ ಮುನಿರಾಬಾದ್‌- ಗಂಗಾವತಿ ರಸ್ತೆ ಸಂಚಾರ ರದ್ದುಪಡಿಸಲಾಗಿದೆ. ಬಿಗಿ ಭದ್ರತೆಗಾಗಿ ಪೊಲೀಸ್‌ ಅಧಿಕಾರಿಗಳು ಸೇರಿದಂತೆ 300ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಲಾಗಿದೆ.

ಅಂಜನಾದ್ರಿ ಬೆಟ್ಟ ವೀಕ್ಷಣೆಗೆ ಸಿಎಂ ವೈಮಾನಿಕ ಸಮೀಕ್ಷೆ: ಆನಂದ್‌ ಸಿಂಗ್‌

ಅಂಜನಾದ್ರಿ ಅಭಿವೃದ್ಧಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಥಮ ಬಾರಿಗೆ ಆಗಮಿಸಲಿದ್ದಾರೆ. ಈಗಾಗಲೇ ಸರ್ಕಾರ .120 ಕೋಟಿ ಮತ್ತು ಕೇಂದ್ರ ಸರ್ಕಾರ .100 ಕೋಟಿ ಅನುದಾನ ನೀಡಿದೆ. ಇದರಿಂದ ಅಂಜನಾದ್ರಿ ಸಮಗ್ರ ಅಭಿವೃದ್ಧಿಯಾಗಲಿದೆ. ಇದೊಂದು ಐತಿಹಾಸಿಕ ಪ್ರಸಿದ್ಧ ಪ್ರವಾಸೋದ್ಯಮ ಕೇಂದ್ರವಾಗಲಿದೆ. ಮುಖ್ಯಮಂತ್ರಿ ಆಗಮನದ ಹಿನ್ನೆಲೆ ಸಕಲ ಸಿದ್ಧತೆಗಳನ್ನು ಕೈಗೆತ್ತಿ ಕೊಳ್ಳಲಾಗಿದೆ.
-ಪರಣ್ಣ ಮುನವಳ್ಳಿ, ಶಾಸಕರು, ಗಂಗಾವತಿ

click me!