ರಾಜ್ಯಕ್ಕೆ ಹೊಸ ಉದ್ಯೋಗ ನೀತಿ ಶೀಘ್ರ: ಅಧಿಕಾರಿಗಳಿಗೆ ಸಿಎಂ ಸೂಚನೆ

Published : Jul 06, 2022, 05:25 AM IST
ರಾಜ್ಯಕ್ಕೆ ಹೊಸ ಉದ್ಯೋಗ ನೀತಿ ಶೀಘ್ರ: ಅಧಿಕಾರಿಗಳಿಗೆ ಸಿಎಂ ಸೂಚನೆ

ಸಾರಾಂಶ

ಉದ್ದೇಶಿತ ನೂತನ ಉದ್ಯೋಗ ನೀತಿಯು ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡುವುದರೊಂದಿಗೆ ಉದ್ಯಮ ವಲಯದಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಗಳ ತರಬೇತಿಗೂ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.

ಬೆಂಗಳೂರು (ಜು.06): ಉದ್ದೇಶಿತ ನೂತನ ಉದ್ಯೋಗ ನೀತಿಯು ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡುವುದರೊಂದಿಗೆ ಉದ್ಯಮ ವಲಯದಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಗಳ ತರಬೇತಿಗೂ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗಾಗಿ ಈ ನೀತಿಯನ್ನು ಮಂಡಿಸುವಂತೆಯೂ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಉದ್ಯೋಗ ನೀತಿ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕೈಗಾರಿಕಾ ನೀತಿಯಲ್ಲಿ ಉದ್ಯೋಗ ಸೃಜನೆ ಹೆಚ್ಚಾಗಿ ಮಾಡುವ ವಸೊತ್ರೕದ್ಯಮ, ಎಫ್‌ಎಂಸಿಜಿ ಮತ್ತಿತರ ಹೆಚ್ಚಿನ ಮಾನವಸಂಪನ್ಮೂಲ ಬೇಡಿಕೆ ಇರುವ ಉದ್ಯಮಗಳಿಗೆ ಪ್ರೋತ್ಸಾಹ ನೀಡಬೇಕು. ಇದರೊಂದಿಗೆ ಕೈಗಾರಿಕೋದ್ಯಮಗಳಲ್ಲಿ ಬೇಡಿಕೆ ಇರುವ ಕ್ಷೇತ್ರಗಳಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಇನ್ನಷ್ಟುಹೆಚ್ಚಿಸಬೇಕು ಎಂದು ಸೂಚಿಸಿದರು.

ಬೊಮ್ಮಾಯಿ ಸರ್ಕಾರಕ್ಕೆ ಮತ್ತೊಂದು ಮೀಸಲಾತಿ ಸಂಕಟ..!

ರಾಜ್ಯದಲ್ಲಿ ಸೃಜನೆಯಾಗುವ ಉದ್ಯೋಗಾವಕಾಶಗಳು ಹಾಗೂ ಉದ್ಯೋಗ ಪಡೆದವರ ದತ್ತಾಂಶ ಸಂಗ್ರಹಕ್ಕೆ ವ್ಯವಸ್ಥೆ ರೂಪಿಸಬೇಕು. ಅಲ್ಲದೆ, ರಾಜ್ಯದ ಉನ್ನತ ಮಟ್ಟದ ಒಪ್ಪಿಗೆ ಸಮಿತಿಯಲ್ಲಿ ಅನುಮೋದನೆಯಾದ ಯೋಜನೆಗಳು ನಿಗದಿತ ಅವಧಿಯಲ್ಲಿ ಜಾರಿಯಾಗಿದೆಯೇ? ಇಂತಹ ಕೈಗಾರಿಕೋದ್ಯಮಗಳು ತಮಗೆ ಹಂಚಿಕೆಯಾಗಿರುವ ಭೂಮಿಯನ್ನು ಬಳಸಿಕೊಂಡಿವೆಯೇ ಎಂದು ವರದಿ ಸಲ್ಲಿಸಬೇಕು. ನಿಗದಿತ ಅವಧಿಯಲ್ಲಿ ಜಾರಿಯಾಗದ ಯೋಜನೆಗಳಿಗೆ ಹಂಚಿಕೆಯಾದ ಭೂಮಿಯನ್ನು ಹಿಂಪಡೆಯಬೇಕು ಎಂದು ನಿರ್ದೇಶನ ನೀಡಿದ ಅವರು, ಉದ್ಯಮಶೀಲತೆ ಅಭಿವೃದ್ಧಿಗೆ, ಆಸಕ್ತ ಅಭ್ಯರ್ಥಿಗಳಿಗೆ ಉದ್ಯಮ ಸ್ಥಾಪನೆಗೆ ಕೈಗೊಳ್ಳಬೇಕಾದ ಅಗತ್ಯ ಸಿದ್ಧತೆಗಳು, ದೊರೆಯುವ ಸೌಲಭ್ಯಗಳು, ಸಂಪನ್ಮೂಲ ಕ್ರೋಢೀಕರಣ ಮೊದಲಾದ ವಿಷಯಗಳ ಕುರಿತು ಮಾರ್ಗದರ್ಶನ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.

ಹಳ್ಳಿ, ಪಟ್ಟಣಕ್ಕೆ ನೀರೊದಗಿಸಲು 2,500 ಕೋಟಿ: ಸಿಎಂ ಬೊಮ್ಮಾಯಿ

ರಾಷ್ಟ್ರೀಯ ಶಿಕ್ಷಣ ನೀತಿಯಡಿ ಶಾಲಾ ಹಂತದಲ್ಲಿಯೇ ತಾಂತ್ರಿಕ ತರಬೇತಿ ನೀಡುವ ಟೆಕ್ನಿಕಲ್‌ ಸ್ಕೂಲ್‌ಗಳನ್ನು ಸ್ಥಾಪಿಸಬೇಕು. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ತಲಾ ನಾಲ್ಕು ಹೈಸ್ಕೂಲು ಹಾಗೂ ಪಿಯು ಕಾಲೇಜುಗಳಲ್ಲಿ ಈ ಶಿಕ್ಷಣ ನೀಡಬೇಕು. ಉದ್ಯೋಗ ನೀತಿಯು ಉದ್ಯೋಗ ಸೃಜನೆ ಹಾಗೂ ಕುಶಲ ಮಾನವ ಸಂಪನ್ಮೂಲ ಸೃಜನೆಗೆ ಪೂರಕವಾಗುವಂತೆ ರೂಪಿಸಬೇಕು. ಸಭೆಯಲ್ಲಿ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಇತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: Bengaluru - ಬೆಂಗಳೂರಿನಲ್ಲಿ 7ನೇ ಕ್ಲಾಸ್ ವಿದ್ಯಾರ್ಥಿ ಕಪಾಳಕ್ಕೆ ಹೊಡೆದ ಶಿಕ್ಷಕನ ಬಂಧನ