* ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ಕುಟುಂಬಕ್ಕೆ ಪರಿಹಾರ ನೀಡಿದ ಬೊಮ್ಮಾಯಿ
* ಹಾವೇರಿಯ ನವೀನ್ ಕುಟುಂಬಕ್ಕೆ 25 ಲಕ್ಷ ಪರಿಹಾರ ವಿತರಿಸಿದ ಸಿಎಂ
* ಹಾವೇರಿಯ ರಾಣೆಬೆನ್ನೂರು ತಾಲೂಕಿನ ಚಳಗೇರಿಯಲ್ಲಿರುವ ನವೀನ್ ನಿವಾಸ
ಹಾವೇರಿ, (ಮಾ.05): ರಷ್ಯಾ ಉಕ್ರೇನ್ (Ukraine Russia War) ಮೇಲೆ ನಡೆಸಿದ್ದ ಶೆಲ್ ದಾಳಿಗೆ ಬಲಿಯಾಗಿರುವ ಹಾವೇರಿ (haveeri) ಜಿಲ್ಲೆಯ ಮೃತ ನವೀನ್ ಗ್ಯಾನಗೌಡ ಕುಟುಂಬಕ್ಕೆ ಸಿಎಂ ಪರಿಹಾರ(Compensation) ನೀಡಿದ್ದಾರೆ.
ಇಂದು(ಶನಿವಾರ) ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರು ರಾಣೆಬೆನ್ನೂರು ತಾಲೂಕಿನ ಚಳಗೇರಿಯಲ್ಲಿ ಮೃತ ನವೀನ್ ಗ್ಯಾನಗೌಡ್ರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಕುಟುಂಬಕ್ಕೆ ಕರ್ನಾಟಕ ಸರ್ಕಾರದ ವತಿಯಿಂದ 25 ಲಕ್ಷ ರೂ.ಪರಿಹಾರದ ಚೆಕ್ ವಿತರಿಸಿದರು.
Russia-Ukraine War: ನವೀನ್ ಕೊನೆಯ ಕ್ಷಣ ಹೇಗಿತ್ತು..? ವಿಡಿಯೋ ಹಂಚಿಕೊಂಡ ಸ್ನೇಹಿತ
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಬಾಂಬಿಂಗ್ ಪರಿಣಾಮ ನವೀನ ಸಾವನ್ನಪ್ಪಿದ್ದಾನೆ. ವಿದ್ಯಾರ್ಜನೆಗೆ ತೆರಳಿದ್ದ ನವೀನಗೆ ಈ ರೀತಿ ಆಗುತ್ತೆ ಅಂತಾ ಯಾರೂ ಊಹಿಸಿರಲಿಲ್ಲ.ಶಬ್ದಗಳಲ್ಲಿ ಹೇಳಲು ಸಾಧ್ಯವಿಲ್ಲ. ನವೀನನ ಪಾರ್ಥೀವ ಶರೀರವನ್ನ ತಾಯ್ನಾಡಿಗೆ ತರುವ ಪ್ರಯತ್ನ ನಿರಂತರವಾಗಿ ಮಾಡಲಾಗುತ್ತಿದೆ ಎಂದರು.
ಮುಖ್ಯಮಂತ್ರಿ ಅವರು ಇಂದು ರಾಣಿಬೆನ್ನೂರು ತಾಲ್ಲೂಕಿನ ಚಳಗೇರಿ ಯಲ್ಲಿರುವ ಉಕ್ರೇನ್ ನಲ್ಲಿ ಮೃತಪಟ್ಟ ವೈದ್ಯ ವಿದ್ಯಾರ್ಥಿ ನವೀನ ಗ್ಯಾನಗೌಡರ್ ಅವರ ಮನೆಗೆ ಭೇಟಿ ನೀಡಿ ಅವರ ಪಾಲಕರಿಗೆ ಸಾಂತ್ವನ ಹೇಳಿದರು ಹಾಗೂ 25 ಲಕ್ಷ ರೂ.ಗಳ ಪರಿಹಾರ ದ ಚೆಕ್ ನ್ನು ಹಸ್ತಾಂತರಿಸಿದರು.
1/2 pic.twitter.com/ol1NaX17JO
ವಿದೇಶಾಂಗ ಸಚಿವರ ಜೊತೆಗೆ ಸಂಪರ್ಕದಲ್ಲಿದ್ದು ಅಲ್ಲಿ ಸುತ್ತಲೂ ಬಾಂಬಿಂಗ್ ಅಗ್ತಿದೆ. ಹೀಗಾಗಿ ಮೃತದೇಹ ತರಲು ಆಗುತ್ತಿಲ್ಲ ಎಂದರು. ಇವತ್ತು ಯುದ್ದ ವಿರಾಮ ಆಗಿದೆ. ಆದಷ್ಟು ಬೇಗ ಪಾರ್ಥೀವ ಶರೀರವನ್ನ ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತೆ.ಕೆಲವರು ನಡೆದುಕೊಂಡು ಬಂದಿದ್ದಾರೆ. ಕೆಲವರು ಬಂಕರ್ ಗಳಲ್ಲಿದ್ದಾರೆ. ನಮ್ಮ ಜಿಲ್ಲೆಯಿಂದ ಹತ್ತು ಜನರು ಹೋಗಿದ್ದರು ಐವರು ಮರಳಿ ಬಂದಿದ್ದಾರೆ, ಉಳಿದ ಐವರನ್ನ ಕರೆತರುವ ಪ್ರಯತ್ನ ಮಾಡಲಾಗುತ್ತೆ ಎಂದು ಹೇಳಿದರು.
ಮೃತ ನವೀನ್ ಕುಟುಂಬಕ್ಕೆ ಇಪ್ಪತ್ತೈದು ಲಕ್ಷ ರೂಪಾಯಿ ಸರಕಾರದಿಂದ ಪರಿಹಾರ ನೀಡಲಾಗಿದೆ. ಹಿರಿಯ ಮಗನಿಗೆ ಸೂಕ್ತ ಉದ್ಯೋಗ ನೀಡುವ ಬಗ್ಗೆ ಚಿಂತನೆ ಇದೆ ಎಂದು ತಿಳಿಸಿದರು.
ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಪರಾಮರ್ಶೆ
ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಪರಿಶೀಲನೆ ಬಗ್ಗೆ ಚಿಂತನೆ ನಡೆಸಲಾಗುವುದು.ಕೇಂದ್ರ ಮಟ್ಟದಲ್ಲೂ ದೊಡ್ಡ ಚರ್ಚೆ ಆಗಿದೆ. ಎಂಬಿಬಿಎಸ್ ಸೆಲೆಕ್ಷನ್ ಪ್ರಕ್ರಿಯೆ, ಸೀಟು ಹಂಚಿಕೆ ಕೇಂದ್ರ ಮಟ್ಟದಲ್ಲಿ ಚರ್ಚೆ ಆಗಲಿದೆ. ಎಲ್ಲ ವಿಷಯಗಳ ಬಗ್ಗೆ ಚರ್ಚೆ ಆಗಿದೆ. ನವೀನ ಪಾರ್ಥೀವ ಶರೀರ ಹಾಗೂ ಅಲ್ಲಿ ಸಿಲುಕಿಕೊಂಡಿರೋರನ್ನ ಕರೆತರುವುದು ನಮ್ಮ ಮುಂದಿರುವ ಎರಡು ದೊಡ್ಡ ಕೆಲಸ ಎಂದು ಹೇಳಿದರು.
ಈ ವೇಳೆ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ, ಸಚಿವರಾದ ಗೋವಿಂದ ಕಾರಜೋಳ, ಬಿ.ಸಿ.ಪಾಟೀಲ,ಸಂಸದ ಶಿವಕುಮಾರ ಉದಾಸಿ, ಶಾಸಕ ಅರುಣಕುಮಾರ್ ಪೂಜಾರ್ ಇತರರು ಇದ್ದರು.
ಮೂರು ದಿನದ ಕಾರ್ಯ ಮಾಡಿ ಮುಗಿಸಿದ ಕುಟುಂಬ
ಹೌದು...ಉಕ್ರೇನ್‌ನಲ್ಲಿ ಸಾವನ್ನಪ್ಪಿರುವ ಹಾವೇರಿ ವಿದ್ಯಾರ್ಥಿ ನವೀನ್ ಮೃತ ದೇಹ ಇನ್ನೂ ಸಿಕ್ಕಿಲ್ಲ. ಇತ್ತ ಕುಟುಂಬಸ್ಥರುಚಳಗೇರಿಯ ನವೀನ್ ನಿವಾಸದಲ್ಲಿ 3ನೇ ದಿನದ ಕಾರ್ಯ ಮಾಡಿ ಮುಗಿಸಿದ್ದಾರೆ.
ಬೆಂಗಳೂರು: ಭಾರತದಲ್ಲಿ ದುಬಾರಿ ವೈದ್ಯಕೀಯ ಶಿಕ್ಷಣ, ಜಾತಿ ವ್ಯವಸ್ಥೆಯಿಂದ ನಮ್ಮ ದೇಶದ ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ಓದಿನ ಕನಸು ಹೊತ್ತುಕೊಂಡು ಅಗ್ಗವಾಗಿ ಶಿಕ್ಷಣ ಸಿಗುವ ಉಕ್ರೇನ್ ನಂತಹ ದೇಶಕ್ಕೆ ಹೋಗುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಇನ್ನು ಈ ಬಗ್ಗೆ ಕರ್ನಾಟಕ ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿದ್ದು, ನವೀನ್ ಅವರ ಅಕಾಲಿಕ ನಿಧನ ನೋವಿನ ಸಂಗತಿಯಾಗಿದೆ. ಈ ದುಃಖದ ಸಮಯದಲ್ಲಿ ಸರಕಾರವು ಅವರ ಕುಟುಂಬದೊಂದಿಗೆ ನಿಲ್ಲಲಿದೆ, ಆದರೆ, ಇದನ್ನೇ ನೆಪವಾಗಿಟ್ಟುಕೊಂಡು ಜಾತಿ ವ್ಯವಸ್ಥೆ ಮತ್ತು ಮೀಸಲಾತಿ ಬಗ್ಗೆ ಮಾತನಾಡುವುದು ಅನುಚಿತವಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದರು.