* ಕವಿ ಡಾ.ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ ಸಿಎಂ
* ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚೆನ್ನವೀರ ಕಣವಿ
* ನಾಡೋಜ ಡಾ.ಚೆನ್ನವೀರ ಕಣವಿ ಆರೋಗ್ಯ ಚೇತರಿಕೆಯಾಗಲಿದೆ ಎಂದ ಸಿಎಂ
* ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದ ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ
ಧಾರವಾಡ, (ಫೆ.13): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (Basavaraj Bommai) ಇಂದು(ಭಾನುವಾರ) ಧಾರವಾಡ(Dharwad) ಸತ್ತೂರಿನ ಎಸ್‌ಡಿಎಂ ಆಸ್ಪತ್ರೆಗೆ (SDM Hospital)ಭೇಟಿ ನೀಡಿ, ಕವಿ ಡಾ.ಚೆನ್ನವೀರ ಕಣವಿ(Dr Chennaveera Kanavi) ಅವರ ಆರೋಗ್ಯ (Health) ವಿಚಾರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಕಳೆದ ಒಂದು ತಿಂಗಳಿನಿಂದ ತೀವ್ರ ಅಸ್ವಸ್ಥರಾಗಿರುವ ಹೆಸರಾಂತ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರಿಗೆ ಉತ್ತಮ ಚಿಕಿತ್ಸೆ (Treatment) ದೊರೆಯುತ್ತಿದೆ. ಸ್ವಲ್ಪಮಟ್ಟಿನ ಚೇತರಿಕೆ ಕಂಡು ಬಂದಿದೆ. ಮುಂದಿನ 3-4 ದಿನಗಳಲ್ಲಿ ಇನ್ನಷ್ಟು ಆರೋಗ್ಯ ಸುಧಾರಿಸುವ ಭರವಸೆ ಇದೆ. ಕಣವಿ ಅವರ ಚಿಂತನೆಗಳು ನಾಡಿಗೆ ಮತ್ತೆ ದೊರೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು.
Chennaveera Kanavi ಕವಿ ಚನ್ನವೀರ ಕಣವಿ ಆಸ್ಪತ್ರೆ ವೆಚ್ಚ ಭರಿಸಲು ಸರ್ಕಾರ ನಿರ್ಧಾರ
ಕಳೆದ ಒಂದು ತಿಂಗಳ ಹಿಂದೆ ನ್ಯುಮೋನಿಯಾ ಖಾಯಿಲೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಆರ್‌ಟಿಪಿಸಿಆರ್ ತಪಾಸಣೆಯಿಂದ ಕೋವಿಡ್ ಪಾಸಿಟಿವ್ (Coronavirus) ಧೃಡಪಟ್ಟಿತ್ತು.ನಂತರ ಕೋವಿಡ್ ನೆಗೆಟಿವ್ ಆಗಿದೆ.ಮುಂದಿನ 3-4 ದಿನಗಳಲ್ಲಿ ನ್ಯಮೋನಿಯಾ ಪ್ರಮಾಣ ಇನ್ನಷ್ಟು ಕಡಿಮೆಯಾಗುವ ಭರವಸೆಯಿದೆ.ಹಿರಿಯರಾದ ಕಣವಿ ಅವರು ಬಹಳಷ್ಟು ಗಟ್ಟಿತನದಿಂದ ಚಿಕಿತ್ಸೆಗೆ ಸ್ಪಂದಿಸುತ್ತ,ಹೋರಾಟ ನಡೆಸುತ್ತಿದ್ದಾರೆ.ಆರೋಗ್ಯ ಚೇತರಿಕೆ ಬಗ್ಗೆ ವೈದ್ಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸರಳ - ಸಜ್ಜನಿಕೆಗೆ ಹೆಸರಾಗಿರುವ ಕಣವಿ ಅವರ ಚಿಂತನೆಗಳಿಂದ ನಾಡಿಗೆ ಮತ್ತೆ ಪ್ರೇರಣೆ ದೊರೆಯುವಂತಾಗಲಿ ಎಂಬ ಆಶಯ,ಭರವಸೆ ಇದೆ.ಅವರ ಕುಟುಂಬದೊಂದಿಗೆ (Family(ತಮಗೆ ದೀರ್ಘ ಕಾಲದ ಆತ್ಮೀಯ ಒಡನಾಟ ಇದೆ.ಸರ್ಕಾರದ ವೆಚ್ಚ,ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಎಸ್.ಡಿ.ಎಂ.ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ ಶೀಘ್ರ ಗುಣಮುಖರಾಗಿ,ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.
ಇಂದು ಧಾರವಾಡ ಸತ್ತೂರಿನ ಎಸ್.ಡಿ.ಎಂ. ಆಸ್ಪತ್ರೆಗೆ ಭೇಟಿ ನೀಡಿ, ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಡಾ. ಚೆನ್ನವೀರ ಕಣವಿ ಅವರ ಆರೋಗ್ಯ ವಿಚಾರಿಸಲಾಯಿತು. pic.twitter.com/3ICzbpPDFX
— Basavaraj S Bommai (@BSBommai)ಚೆಂಬೆಳಕಿನ ಕವಿ ಎಂದೇ ಖ್ಯಾತಿ ಪಡೆದಿರುವ 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಣವಿಯವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಧಾರವಾಡದ ಎಸ್‌ಡಿಎಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.
ಕಣವಿ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ
ಕೋವಿಡ್ ಸೋಂಕು (Covid 19) ತಗುಲಿದ್ದ ಡಾ. ಚೆನ್ನವೀರ ಕಣವಿ ಜನವರಿ 14 ರಂದು ಎಸ್.ಡಿ.ಎಮ್.ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಡಾ. ಚೆನ್ನವೀರ ಕಣವಿ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಧಾರವಾಡ ಜಿಲ್ಲಾಡಳಿತ ಬುಧವಾರ ಈ ಕುರಿತು ಪ್ರತಿಕ್ರಿಯೆ ನೀಡಿದೆ. ಅವರ ಎಲ್ಲಾ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದ ಭರಿಸಲು ಕ್ರಮವಹಿಸಲಾಗಿದೆ ಎಂದು ಹೇಳಿದೆ.
ಧಾರವಾಡ ಜಿಲ್ಲಾಡಳಿತ ಚಿಕಿತ್ಸೆಗೆ ಐಸಿಯು ಬೆಡ್ ಮೀಸಲಿರಿಸಿ, ಉತ್ತಮ ಚಿಕಿತ್ಸೆಗೆ ಕ್ರಮ ಕೈಗೊಂಡಿದೆ ಮತ್ತು ಅವರು ಗುಣಮುಖರಾಗಿ ಮನೆಗೆ ಬರುವವರೆಗೆ ಎಲ್ಲಾ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದ ಭರಿಸಲು ಕ್ರಮವಹಿಸಲಾಗಿದೆ. ಈ ಕುರಿತು ಜನವರಿ 15 ರಂದು ಎಸ್. ಡಿ. ಎಮ್. ಆಸ್ಪತ್ರೆಯ ಆಡಳಿತ ಮಂಡಳಿಗೆ ಹಾಗೂ ಡಾ. ಕಣವಿ ಕುಟುಂಬ ಸದಸ್ಯರಿಗೆ ತಿಳಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ಹೇಳಿತ್ತು.
ಕಳೆದ ಮೇ 22ರಂದು ಪ್ರಖ್ಯಾತ ಕವಿ ಚೆನ್ನವೀರ ಕಣವಿ ಅವರು ಪತ್ನಿ ಶಾಂತಾದೇವಿ ಕಣವಿ (87) ಅವರನ್ನ ಕಳೆದುಕೊಂಡಿದ್ದಾರೆ.