ಮತ್ತೆ ಲಾಕ್‌ಡೌನ್ ಎಚ್ಚರಿಕೆ ಕೊಟ್ಟ ಸಿಎಂ ಯಡಿಯೂರಪ್ಪ

By Suvarna NewsFirst Published Jul 7, 2021, 9:42 PM IST
Highlights

* ಮತ್ತೆ ಲಾಕ್‌ಡೌನ್ ಎಚ್ಚರಿಕೆ ಕೊಟ್ಟ ಸಿಎಂ ಬಿಎಸ್ ಯಡಿಯೂರಪ್ಪ
* ದೊಡ್ಡಬಳ್ಳಾಪುರ ನಗರದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆ ಲೋಕಾರ್ಪಣೆ ವೇಳೆ ಜನರಿಗೆ ಎಚ್ಚರಿಕೆ
* ಮತ್ತೆ 15 ದಿನಗಳ ನಂತರ ಮೊದಲ ಸ್ಥಿತಿ ತರಬೇಕಾಗುತ್ತೆ ಎಂದ ಸಿಎಂ ಬಿಎಸ್‌ವೈ

ಚಿಕ್ಕಬಳ್ಳಾಪುರ, (ಜುಲೈ.07): ಅನ್​ಲಾಕ್ ಆಗಿದೆ ಎಂದಿ ಜನರೇ ಮೈ ಮರೆಯಬೇಡಿ, ಸದಾ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯವಹರಿಸಿ, ಸರ್ಕಾರದ ಜೊತೆ ಸಹಕರಿಸಿ, ಇಲ್ಲವಾದರೆ ಮತ್ತೆ 15 ದಿನಗಳ ನಂತರ ಈ ಹಿಂದಿನ ಲಾಕ್ ಡೌನ್ ಪರಿಸ್ಥಿತಿ ಜಾರಿ ಮಾಡಬೇಕಾಗುತ್ತೆ ಎಂದು ಸಿಎಂ ಬಿ. ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆ ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿದ ಸಿಎಂ,  ನಾನು ಸಾರ್ವಜನಿಕರಲ್ಲಿ ಒಂದು ಮನವಿ ಮಾಡ್ತೇನೆ. ಜನರೇ ಲಾಕ್ ಡೌನ್ ಸಡಿಲ ಆಗಿದೆ ಅಂತ ಬೇಕಾಬಿಟ್ಟಿ ಒಡಾಡಬೇಡಿ, ವ್ಯಾಪಾರ ವಹಿವಾಟು ಮಾಡುವಾಗ ಎಚ್ಚರ ವಹಿಸಿ. ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿ, ಇಲ್ಲವಾದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡಬೇಕಾಗುತ್ತೆ. ಮತ್ತೆ 15 ದಿನಗಳ ನಂತರ ಮೊದಲ ಸ್ಥಿತಿ ತರಬೇಕಾಗುತ್ತೆ ಎಂದರು.

ಕರ್ನಾಟಕದಲ್ಲಿ ಇಳಿಕೆಯತ್ತ ಕೊರೋನಾ: ಪಾಸಿಟಿವಿಟಿ ದರ ಶೇಕಡ 1.02ಕ್ಕೆ ಇಳಿಕೆ

ಕೊರೋನಾ 3ನೇ ಅಲೆ ಎದುರಿಸಲು ದೇಶದಲ್ಲಿ ಮೊಟ್ಟ ಮೊದಲ 70 ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆಯನ್ನ ಉದ್ಘಾಟನೆ ಮಾಡಿದ್ದೇವೆ.. ಭಾರತದ 6 ರಾಜ್ಯಗಳಲ್ಲಿ ಮಾತ್ರವೇ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣ ಆಗ್ತಿದೆ. ಆದ್ರೆ ದೇಶದಲ್ಲಿ ಮೊದಲೇ ನಮ್ಮ ರಾಜ್ಯದಲ್ಲಿ ಈ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣ ಆಗಿದೆ. ಈ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡಿದ ಖಾಸಗಿ ಸಂಸ್ಥೆಗಳಿಗೆ ಸರ್ಕಾರದಿಂದ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.

ಕೋವಿಡ್ ನಂತರವೂ ಸಾರ್ವಜನಿಕರ ಸೇವೆಗೆ ಇದು ಲಭ್ಯವಾಗಲಿದೆ.. ಕೊರೊನಾ ಕಂಟ್ರೋಲ್​ಗೆ ಸರ್ಕಾರ ಆನೇಕ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಮೂರನೇ ಅಲೆಯನ್ನ ಸಮರ್ಥವಾಗಿ ಎದುರಿಸುವ ವಿಶ್ವಾಸ ನನಗಿದೆ ಎಂದು ವಿಶ್ವಾಸ ವ್ಯಕ್ತಡಿಸಿದರು.

ಕೊರೋನಾ ಕಡಿಮೆಯಾಗಿದ್ದು, ಸರ್ಕಾರ ಲಾಕ್‌ಡೌನ್ ಸಡಿಲಗೊಳಿಸಿದೆ. ಇದರ ಬೆನ್ನಲ್ಲೇ ಜನರು ಯಾವುದೇ ಮಾಸ್ಕ್, ಸಾಮಾಜಿಕ ಅಂತರ ಇಲ್ಲದೇ ಓಡಾಡುತ್ತಿದ್ದಾರೆ. ಇನ್ನು ಜುಲೈ 5ರಿಂದ ಅನ್‌ಲಾಕ್‌ ಆದ ಮಾರನೇ ದಿನ ಕೊರೋನಾ ಪಾಸಿಟಿವಿಟಿಯಲ್ಲಿ ಕೊಂಚ ಏರಿಕೆಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

click me!